ಬೆಂಗಳೂರು:ರಾಜ್ಯ ಸರ್ಕಾರ, ವಿಧಾನಸಭೆ ಸ್ಪೀಕರ್ ನಡೆ ವಿರುದ್ಧ ಕೆಂಡಾಮಂಡಲವಾಗಿರುವ ಪ್ರತಿಪಕ್ಷಗಳು ಕಲಾಪ ಬಹಿಷ್ಕರಿಸಿದವು. ಬಿಜೆಪಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಗುರುವಾರ ಧರಣಿ ನಡೆಸಿ ಬಳಿಕ ರಾಜ್ಯಪಾಲರಿಗೆ ದೂರು ನೀಡಿತು. ಜೆಡಿಎಸ್ ಕೂಡ ಸಾಥ್ ನೀಡಿತು. ಬಿಜೆಪಿಯ ಹತ್ತು ಶಾಸಕರನ್ನು ಅಧಿವೇಶನದಿಂದ ಅಮಾನತು ಮಾಡಿರುವ ಸ್ಪೀಕರ್ ನಡೆ ಖಂಡಿಸಿದರೆ, ಸರ್ಕಾರ ದುರಹಂಕಾರ ಹಾಗೂ ಹಿಟ್ಲರ್ ಮನಸ್ಥಿತಿ ಹೊಂದಿದೆ ಎಂದು ಉಭಯ ಪಕ್ಷಗಳ ಮುಖಂಡರು ಕಿಡಿಕಾರಿದರು.
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಾಜಿ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಧರಣಿ ಹೂಡಿ ಸರ್ಕಾರದ ವಿರುದ್ಧ ಧಿಕ್ಕಾರ ಮೊಳಗಿಸಿದರು. ರಾಜಕೀಯ ಪಕ್ಷದ ಕಾರ್ಯಕ್ರಮಕ್ಕೆ ಬೇರೆ ರಾಜ್ಯಗಳ ನಾಯಕರನ್ನು ಸ್ವಾಗತಿಸಲು ಐಎಎಸ್ ಅಧಿಕಾರಿಗಳ ನಿಯೋಜನೆಯನ್ನು ಪ್ರಶ್ನಿಸಿದ್ದಕ್ಕೆ ಪಕ್ಷದ ಶಾಸಕರನ್ನು ಅಮಾನತು ಮಾಡಿರುವುದು ಕೆಟ್ಟ ನಿರ್ಧಾರ. ಸ್ಪೀಕರ್ ಹುದ್ದೆಯನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ನಂತರ ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಭೇಟಿಯಾಗಿ ವಿದ್ಯಮಾನ ವಿವರಿಸಿದರು. ರಾಜಕೀಯ ಪಕ್ಷದ ಸಭೆಗೆ ಅಧಿಕಾರಿಗಳ ಬಳಕೆಯನ್ನು ಸದನದಲ್ಲಿ ಪ್ರಶ್ನಿಸಲಾಯಿತು. ಸರ್ಕಾರ ಉತ್ತರಿಸುವ ಬದಲು ಪಕ್ಷದ ಶಾಸಕರನ್ನು ಅಮಾನತು ಮಾಡುವಂತೆ ನೋಡಿಕೊಂಡಿದೆ. ವಿಧಾನಸಭೆ ಸ್ಪೀಕರ್ ಏಕಪಕ್ಷೀಯವಾಗಿ ವರ್ತಿಸಿದ್ದಾರೆ ಎಂದು ರಾಜ್ಯಪಾಲರಿಗೆ ವಿವರಿಸಿದರು.
ತಿಳಿಹೇಳಲು ಮನವಿ:ಯುಪಿಎ ಒಕ್ಕೂಟದ ರಾಜಕೀಯ ಪಕ್ಷಗಳ ನಾಯಕರ ಸಭೆಗೆ ಶಿಷ್ಟಾಚಾರದ ಹೆಸರಿನಲ್ಲಿ 25 ಐಎಎಸ್ ಅಧಿಕಾರಿಗಳನ್ನು ಬಳಸಿಕೊಂಡಿರುವುದು ಆಘಾತಕಾರಿ ಎಂದು ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ಸಂವಿಧಾನದ ಮೌಲ್ಯ, ಆಶಯವನ್ನು ಗಾಳಿಗೆ ತೂರಲಾಗಿದೆ. ಆದರೂ ಸಿಎಂ ಸಿದ್ದರಾಮಯ್ಯ ಈ ಕ್ರಮ ಸಮರ್ಥಿಸಿಕೊಂಡು ದಾಷ್ಟರ್್ಯ ತೋರಿದ್ದಾರೆ. ಅಧಿಕಾರಿಗಳು, ಕಾರ್ಯಾಂಗವನ್ನು ಪಕ್ಷ ಹಾಗೂ ರಾಜಕೀಯ ನಾಯಕರ ಸೇವಕರಂತೆ ಪರಿಗಣಿಸಿ ದುರ್ಬಳಕೆ ಮಾಡಿಕೊಳ್ಳುವುದಕ್ಕೆ ಕಡಿವಾಣ ಹಾಕಬೇಕು. ಸಿಎಂ ಸಿದ್ದರಾಮಯ್ಯ ಅವರಿಂದ ಈ ಘಟನೆ ಬಗ್ಗೆ ಸಮಜಾಯಿಷಿ ಪಡೆದು ತಿಳಿವಳಿಕೆ ನೀಡುವ ಜತೆಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಬಿಜೆಪಿ ರಾಜ್ಯಪಾಲರಿಗೆ ವಿನಂತಿಸಿದೆ.
ಮುಂದಿನ ನಡೆ ಚರ್ಚೆ:ವಿಧಾನಸೌಧ ಬಳಿ ಧರಣಿ, ರಾಜ್ಯಪಾಲರಿಗೆ ದೂರು ಸಲ್ಲಿಸುವ ಮುನ್ನ ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರ ಸಮಕ್ಷಮ ಸಭೆ ನಡೆಯಿತು. ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರೊಂದಿಗೆ ಮುಂದಿನ ನಡೆ ಬಗ್ಗೆ ಸಮಾಲೋಚಿಸಿ, ರಾಜ್ಯ ಎದುರಿಸುತ್ತಿರುವ ಬರ, ಕುಡಿಯುವ ನೀರಿನ ಸಮಸ್ಯೆಯನ್ನು ಸರ್ಕಾರ ನಿರ್ಲಕ್ಷಿಸಿದ್ದರ ಕುರಿತು ಸಭೆ ಕಳವಳ ವ್ಯಕ್ತಪಡಿಸಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
