ತುಮಕೂರು:ರಾಷ್ಟ್ರಧ್ವಜಕ್ಕಿಂತಲೂ ಎತ್ತರದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಕೇಸರಿ ಧ್ವಜ ಹಾರಾಡಿದ ವಿಚಾರವಾಗಿ ಇದೀಗ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ತುಮಕೂರು ಜಿಲ್ಲಾ ಪೊಲೀಸರಿಗೆ ದೂರು ನೀಡಲಾಗಿದೆ.
ತುಮಕೂರು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿ.ವಿ ಹರಿಪ್ರಸಾದ್ ಸಚಿವ ನಾಗೇಶ್ ವಿರುದ್ಧ ತಿಪಟೂರು ಡಿವೈಎಸ್​ಪಿ ಅವರಿಗೆ ದೂರು ನೀಡಿದ್ದಾರೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿರುವ ನಾಗೇಶ್ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಆಗಸ್ಟ್​ 10ರಂದು ತಿಪಟೂರು ನಗರದಲ್ಲಿ ಮೆರವಣಿಗೆ ಮೂಲಕ ರಾಷ್ಟ್ರಧ್ವಜದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಕೊಳ್ಳಲಾಗಿತ್ತು. ಆದರೆ ಈ ವೇಳೆ ತ್ರಿವರ್ಣ ಧ್ವಜಕ್ಕಿಂತಲೂ ಮೇಲೆ ಎಬಿವಿಪಿಯ ಧ್ವಜವನ್ನು ಹಾರಿಸಲಾಗಿತ್ತು ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ.
ಊರಲ್ಲಿ ಸ್ಮಶಾನ ಇಲ್ಲದ್ದರಿಂದ ಗ್ರಾಮ ಪಂಚಾಯತ್ ಆವರಣದಲ್ಲೇ ಶವಸಂಸ್ಕಾರಕ್ಕೆ ಸಜ್ಜಾದ ಗ್ರಾಮಸ್ಥರು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + sixteen =
Remember me
