ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ವಿರುದ್ಧ ಕಾಂಗ್ರೆಸ್ ಪೊಲೀಸರಿಗೆ ದೂರು ಸಲ್ಲಿಸಿದೆ.
ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ಗುತ್ತಿಗೆದಾರ, ಇದಕ್ಕೆ ಸರ್ಕಾರವೇ ಕಾರಣ ಎಂದು ಕೀಟಲ್ ನೀಡಿರುವ ಹೇಳಿಕೆ ಹಿನ್ನೆಲೆಯಲ್ಲಿ ಇವರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿಕೊಳ್ಳಬೇಕೆಂದು ಹೈಗ್ರೌಂಡ್ ಪೊಲೀಸ್ ಠಾಣೆಗೆ ಭೇಟಿ ನೀಡಿದ ಕಾಂಗ್ರೆಸ್ ನಿಯೋಗವು ಆಗ್ರಹಿಸಿತು.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್, ನಳಿನ್ ಕುಮಾರ್ ಕಟೀಲ್ ರಾಜ್ಯದ ಜನತೆಗೆ ಸುಳ್ಳು ಅಪಪ್ರಚಾರ, ಆಧಾರ ರಹಿತ ಆರೋಪಗಳ ಮೂಲಕ ವದಂತಿಯನ್ನು ರವಾನಿಸುತ್ತಿದ್ದು ಅವರ ವಿರುದ್ಧ ಕ್ರಮಕೈಗೊಳ್ಳಬೇಕೆಂಬುದು ನಮ್ಮ ಆಗ್ರಹ ಎಂದರು.
ಸುಳ್ಳು ಅಪಪ್ರಚಾರದ ವದಂತಿಗಳನ್ನು ಹಬ್ಬಿಸಿ ರಾಜ್ಯದಲ್ಲಿ ಜನರ ಶಾಂತಿಗೆ ಭಂಗ ತರುವ ಪ್ರಯತ್ನವನ್ನು ನಳಿನ್ ಕುಮಾರ್ ಕಟೀಲ್ ಪ್ರಯತ್ನಿಸುತ್ತಿರುವುದು ಬಹಿರಂಗವಾಗಿದೆ. ಮೃತಪಟ್ಟ ವ್ಯಕ್ತಿಯ ಹೆಸರಿನಲ್ಲಿ ಅಪಪ್ರಚಾರ ಮಾಡಿರುವ ಹಾಗೂ ಸುಳ್ಳು ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕೊಡಲೇ ಇವರ ವಿರುದ್ದ ಭಾರತೀಯ ದಂಡ ಸಂಹಿತೆ ಕಲಂ 191ರ ಅಡಿಯಲ್ಲಿ ಕೊಡಲೇ ಪ್ರಕರಣ ದಾಖಲಿಸಿಕೊಂಡು ಅವರ ವಿರುದ್ಧ್ದ ತನಿಖೆ ನಡೆಸಬೇಕು ಎಂದು ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದರು.
ನಿಯೋಗದಲ್ಲಿ ತ್ರಿಭುವನ್​ ಗೌಡ, ಆನಂದ್​, ಉಮೇಶ್​ ಮತ್ತಿತರರು ಇದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 + 13 =
Remember me
