ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವುದು, ಪಕ್ಷದ ಶಿಸ್ತು ಉಲ್ಲಂಘಿಸುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೂಡಲೇ ಕ್ರಮಕ್ಕಾಗಿ ಹೈಕಮಾಂಡ್​ಗೆ ಒತ್ತಾಯಿಸಲು ಬಿಜೆಪಿ ಹಿರಿಯ ಮುಖಂಡರ ಸಭೆಯಲ್ಲಿ ತೀರ್ವನಿಸಲಾಗಿದೆ.
ಪಕ್ಷದ ಕಚೇರಿಯಲ್ಲಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಹಿರಿಯ ಮುಖಂಡರ ಸಭೆಯಲ್ಲಿ ಜೆಡಿಎಸ್ ಜತೆಗೆ ಹೊಂದಾಣಿಕೆಯಿಂದ 28 ಕ್ಷೇತ್ರಗಳಲ್ಲಿಯೂ ಜಯಗಳಿಸಲು ಒಗ್ಗಟ್ಟಿನ ಹೋರಾಟ ಮಾಡಬೇಕು ಎಂದು ನಿರ್ಣಯಿಸಲಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನಗಳನ್ನು ಪಡೆಯಲು ಬಿಜೆಪಿಗೆ ಸಾಧ್ಯವಾಗದೆ ಇರುವುದಕ್ಕೆ ನಾನಾ ಕಾರಣಗಳಿವೆ. ಅವುಗಳ ಬಗ್ಗೆಯೂ ಪರಾಮರ್ಶೆ ಮಾಡಿಕೊಂಡು ಪಕ್ಷ ಸಂಘಟನೆಗೆ ಆದ್ಯತೆ ನೀಡಬೇಕು ಎನ್ನುವ ಅಭಿಪ್ರಾಯಕ್ಕೆ ಸಭೆ ಸಹಮತ ನೀಡಿದೆ. ಪಕ್ಷಕ್ಕೆ ಹಿರಿಯರು ಮುಖ್ಯ. ಕಿರಿಯರ ಉತ್ಸಾಹ, ಹಿರಿಯರ ಅನುಭವ ಸಮ್ಮಿಲನಗೊಂಡರೆ ಮಾತ್ರ ಸಂಘಟನೆಗೆ ಶಕ್ತಿ ಮತ್ತು ಹೊಸ ರೂಪ ಬರಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಬೂತ್​ವುಟ್ಟದಿಂದ ರಾಜ್ಯಮಟ್ಟದ ತನಕ ವ್ಯವಸ್ಥಿತ ಪ್ರಯತ್ನ ಮಾಡಲು ನಿರ್ಧರಿಸಲಾಗಿದೆ. ಬಿಜೆಪಿ ಮತ್ತು ಜೆಡಿಎಸ್ ಹೊಂದಾಣಿಕೆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಂಡಿದೆ. ನಮ್ಮ ಹಂತದಲ್ಲಿ ಈ ಬಗ್ಗೆ ಸಾಧಕ-ಬಾಧಕ ಚರ್ಚೆ ಬೇಡ. ಎರಡೂ ಪಕ್ಷಗಳು ಒಟ್ಟಾಗಿ ಎಲ್ಲ ಸ್ಥಾನಗಳನ್ನು ಗೆಲ್ಲಿಸಿಕೊಂಡು ಬರಲು ಹೋರಾಟ ಮಾಡಲು ನಿರ್ಣಯಿಸಲಾಗಿದೆ.
ವಿಡಿಯೋ ಕ್ಲಿಪ್ಪಿಂಗ್ ಸಹಿತ ವರದಿ:ಶಾಸಕ ಬಸನಗೌಡ ಯತ್ನಾಳ್ ಆಗಿಂದಾಗ್ಗೆ ನೀಡುತ್ತಿರುವ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ತರುತ್ತಿರುವುದು ಅಷ್ಟೆ ಅಲ್ಲ, ಸಂಘಟನೆಗೆ ಹಿನ್ನೆಡೆಯಾಗುತ್ತಿವೆ. ಈ ಬಗ್ಗೆ ತುರ್ತು ಕ್ರಮ ಆಗಲೇಬೇಕು ಎಂದು ಸಭೆಯಲ್ಲಿ ಪ್ರತಿಪಾದಿಸಲಾಗಿದೆ. ಯತ್ನಾಳ್ ವಿಷಯಕ್ಕೆ ಎಲ್ಲ ಸಭೆಯಲ್ಲಿ ಆದ್ಯತೆ ನೀಡಿದರೆ ಅವರಿಗೆ ದೊಡ್ಡ ಮನ್ನಣೆ ದೊರೆಯುತ್ತದೆ. ಈ ಬಗ್ಗೆ ಚರ್ಚೆ ಮಾಡುವುದು ಬೇಡ ಎನ್ನುವ ಅಭಿಪ್ರಾಯವೂ ಕೇಳಿಬಂದಿದೆ.
ಕೇಂದ್ರದ ನಾಯಕರು ಎಲ್ಲವನ್ನು ಗಮನಿಸುತ್ತಿದ್ದಾರೆ. ಅವರಿಗೆ ಗೊತ್ತಿಲ್ಲದ ಸಂಗತಿಗಳೇನಿಲ್ಲ. ಆದ್ದರಿಂದ ಯತ್ನಾಳ್ ಎಲ್ಲೆಲ್ಲಿ ಏನೇನು ಮಾತನಾಡಿದ್ದಾರೆ ಎನ್ನುವುದನ್ನು ಆಡಿಯೋ, ವಿಡಿಯೋ ಕ್ಲಿಪ್ಪಿಂಗ್ ಸಹಿತ ಹೈಕಮಾಂಡ್​ಗೆ ಕಳುಹಿಸಿ ಕ್ರಮಕ್ಕೆ ಒತ್ತಾಯಿಸಲು ತೀರ್ವನಿಸಲಾಗಿದೆ. ಯತ್ನಾಳ್ ಮೇಲೆ ಕೇಂದ್ರ ವರಿಷ್ಠರು ತೆಗೆದುಕೊಳ್ಳುವ ತೀರ್ವನಕ್ಕೆ ನಾವೆಲ್ಲರೂ ಬದ್ಧ ರಾಗೋಣ ಎಂದು ಸಭೆಯಲ್ಲಿ ಸಹಮತಕ್ಕೆ ಬರಲಾಗಿದೆ.
ಹೋರಾಟಕ್ಕೆ ತೀರ್ವನ:ರಾಜ್ಯ ಸರ್ಕಾರದ ವೈಫಲ್ಯಗಳನ್ನು ಎತ್ತಿ ಹಿಡಿದು ಬೂತ್ ಮಟ್ಟದಿಂದ ರಾಜ್ಯ ಮಟ್ಟದ ತನಕ ಹೋರಾಟ ನಡೆಸುವುದು ಬಹಳ ಮುಖ್ಯ. ಆ ಮೂಲಕವೂ ಜನರ ಸಂಘಟನೆಗೆ ಮತ್ತು ಜಾಗೃತಿಗೆ ಆದ್ಯತೆ ನೀಡಬೇಕು ಎಂದು ನಿರ್ಣಯಿಸಲಾಗಿದೆ.
ಹಾಜರಿದ್ದವರು:ಸಭೆಯಲ್ಲಿ ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ಎಸ್.ಸದಾನಂದಗೌಡ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಸಿ.ಟಿ.ರವಿ ಮತ್ತಿತರರು ಹಾಜರಿದ್ದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿಕೊಡುವ ಮೂಲಕ ಪ್ರಧಾನಿ ಮೋದಿ ಅವರ ಕೈ ಬಲಪಡಿಸಬೇಕಾಗಿದೆ. ಅದಕ್ಕಾಗಿ ಹಿರಿಯರ ಮಾರ್ಗದರ್ಶನವೂ ಮುಖ್ಯ. ಅದಕ್ಕಾಗಿ ಈ ಸಭೆ ನಡೆದಿದೆ. ಬಿಜೆಪಿಗೆ ಭದ್ರ ಬುನಾದಿ ಹಾಕಿದ ಹಿರಿಯರು ನನಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ. ಅವರೆಲ್ಲರೂ ಪಕ್ಷವನ್ನು ಮುನ್ನಡೆಸಲು ಮಾರ್ಗದರ್ಶನ ಮಾಡಲಿದ್ದಾರೆ. ಜಿಪಂ, ತಾಪಂ, ಚುನಾವಣೆಯಲ್ಲಿಯೂ ಗೆಲುವು ಸಾಧಿಸಲು ಸಂಘಟಿತ ಯತ್ನ ಮುಖ್ಯವಾಗಿದೆ.
| ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ
ಲೋಕಸಭೆ ಚುನಾವಣೆ ಗೆಲ್ಲುವ ದಿಕ್ಕಿನಲ್ಲಿ ಮಾಡಬೇಕಾದ ತಯಾರಿ ಬಗ್ಗೆ ರ್ಚಚಿಸಲಾಗಿದೆ. ಹಿರಿಯರು ತಮ್ಮ ಸಲಹೆಗಳ ಕೊಟ್ಟಿದ್ದಾರೆ. ಮಿತ್ರಪಕ್ಷ ಜೆಡಿಎಸ್ ಜತೆ ಸಮನ್ವಯತೆಯಿಂದ ಚುನಾವಣೆ ತಯಾರಿಗೆ ನಿರ್ಧರಿಸಲಾಗಿದೆ. ಯತ್ನಾಳ್ ಬಗ್ಗೆ ವರಿಷ್ಠರ ಗಮನಕ್ಕೆ ತರಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
| ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಜಿ ಡಿಸಿಎಂ
ಲೋಕಸಭಾ ಚುನಾವಣೆಯಲ್ಲಿ ಎಲ್ಲ ಸ್ಥಾನ ಗೆಲ್ಲಲು ನಮ್ಮ ರಣತಂತ್ರ ಏನಿರಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ. ದೇಶದ ಜನರು ಮೋದಿಯವರು ಮತ್ತೆ ಪ್ರಧಾನಿ ಆಗಬೇಕೆಂದು ಬಯಸುತ್ತಿದ್ದಾರೆ. ಜೆಡಿಎಸ್ ಜತೆ ಸಮನ್ವಯ ಸಾಧಿಸಿ ಹೇಗೆ ಒಟ್ಟಾಗಿ ಕೆಲಸ ಮಾಡಬೇಕು ಎಂಬ ವಿಷಯ ರ್ಚಚಿಸಲಾಗಿದೆ. 2 ಪದವೀಧರ, 4 ಶಿಕ್ಷಕರ ಕ್ಷೇತ್ರ ಸೇರಿ ವಿಧಾನಪರಿಷತ್ತಿನ 6 ಕ್ಷೇತ್ರಗಳ ಚುನಾವಣಾ ದೃಷ್ಟಿಯಿಂದಲೂ ಚರ್ಚೆ ನಡೆದಿದೆ. ಬಿಜೆಪಿಯನ್ನು ಮತ್ತೆ ಸಂಘಟಿಸುವುದು, 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವುದು ನಮ್ಮ ಗುರಿ.
| ಸಿ.ಟಿ.ರವಿ ಮಾಜಿ ಸಚಿವ
ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವ ಕುರಿತು ಸಭೆಯು ರ್ಚಚಿಸಿದೆ. ಲೋಕಸಭೆ, ವಿಧಾನಪರಿಷತ್ ಚುನಾವಣೆಯನ್ನು ಕೂಡ ಬಿಜೆಪಿ- ಜೆಡಿಎಸ್ ಎರಡೂ ಸೇರಿ ಗೆಲ್ಲಬೇಕು. ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟ ಮಾಡಲು ನಿರ್ಧರಿಸಲಾಗಿದೆ.
| ಕೆ.ಎಸ್.ಈಶ್ವರಪ್ಪ ಮಾಜಿ ಡಿಸಿಎಂ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + eight =
Remember me
