ಬೆಂಗಳೂರು:ನರೇಗಾ ಯೋಜನೆಯಡಿ 5000 ಗೋಮಾಳ ಪ್ರದೇಶ, 50 ಸಾವಿರ ಎರಕೆ ಹುಲ್ಲುಗಾವಲು ಪ್ರದೇಶ, 2 ಲಕ್ಷ ಬರ ಪರಿಹಾರ ಕಾಮಗಾರಿ, 81 ಸಾವಿರ ಪ್ರವಾಹ ನಿಯಂತ್ರಣ ಕಾಮಗಾರಿ ಹಾಗೂ 4268 ಭೂ ಕುಸಿತ ತಡೆ ಕಾಮಗಾರಿ ಕೈಗೆತ್ತಿಕೊಳ್ಳಲು ಸರ್ಕಾರ ಸಜ್ಜಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ 2023- 24 ನೇ ಬಜೆಟ್‌ನಲ್ಲಿ ಘೋಷಿಸಿರುವ ಯೋಜನೆಗಳ ಅನುಷ್ಠಾನದ ಕುರಿತ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು.
27,903 ಗ್ರಾಮಗಳಲ್ಲಿ ಸ್ಮಾಶಾನ ಭೂಮಿಯನ್ನು ಶಾಂತಿಧಾಮಗಳನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿ, 5000 ಶಾಲಾ ಆವರಣಗಳನ್ನು ವಿದ್ಯಾಧಾಮಗಳನ್ನಾಗಿ ಉನ್ನತೀಕರಣ, 750 ಗ್ರಾಮ ಸಂತೆಗಳನ್ನು ಹಾಗೂ 27 ಸಾವಿರ ಕೊಳವೆಬಾವಿ ಪುನಶ್ಚೇತನ ಕಾಮಗಾರಿ ಅನುಷ್ಠಾನ ಗೊಳಿಸಲಾಗುವುದು ಎಂದು ಸಚಿವ ಪ್ರಿಯಾಂಕಾ ಖರ್ಗೆ ಸಭೆಯ ಗಮನಕ್ಕೆ ತಂದರು.
ವರುಣಾ ಕುಡಿಯುವ ನೀರಿನ ವರದಿ ಕೊಡಿವರುಣಾ ಕ್ಷೇತ್ರದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಎಷ್ಟು ಕಾಮಗಾರಿಗಳು ಪೂರ್ಣಗೊಂಡಿವೆ? ಎಷ್ಟು ಮನೆಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿವೆ ಎಂದು ಭೇಟಿ ನೀಡಿ ಪರಿಶೀಲಿಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ವಾರಾಂತ್ಯದಲ್ಲಿ ಗ್ರಂಥಾಲಯ ತೆರೆಯಿರಿಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಅರಿವು ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ ಡಿಜಿಟಲ್ ಕಲಿಕಾ ಸಾಮಾಗ್ರಿಗಳು, ವೃತ್ತಿಪರ ಮಾರ್ಗದರ್ಶನ ವ್ಯವಸ್ಥೆ ಸಂವಿಧಾನ ಶೈಕ್ಷಣಿಕ ವ್ಯವಸ್ಥೆ, ವಿಶೇಷ ಚೇತನ ಸ್ನೇಹಿ ತಾಂತ್ರಿಕತೆ ಹಾಗೂ ನುರಿತ ವ್ಯಕ್ತಿಗಳಿಂದ ಜ್ಞಾನಾರ್ಜನೆ ಮುಂತಾದ ಸೌಲಭ್ಯ ಗಳನ್ನು ನೀಡಲಾಗುವ ಯೋಜನೆಯನ್ನು ಉತ್ತಮವಾಗಿ ಕಾರ್ಯಗತಗೊಳಿಸಬೇಕು. ವಾರಾಂತ್ಯದಲ್ಲಿಯೂ ತೆರೆದರೆ ವಿದ್ಯಾರ್ಥಿಗಳಿಗೆ ಅನುಕೂಲ ವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 4 =
Remember me
