ಬೆಂಗಳೂರು:ಮುಖ್ಯಮಂತ್ರಿಗಳ ಕನಸಿನ ಯೋಜನೆಯಾದ ಇಂದಿರಾ ಕ್ಯಾಂಟಿನ್ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಲು ಪೌರಾಡಳಿತ ಸಚಿವ ರಹೀಂ ಖಾನ್ ತಾಕೀತು ಮಾಡಿದರು.
ವಿಕಾಸಸೌಧದಲ್ಲಿ ನಡೆದ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಈಗಿರುವ ಇಂದಿರಾ ಕ್ಯಾಂಟೀನ್ ಜತೆಗೆ ಹೆಚ್ಚುವರಿಯಾಗಿ ಕ್ಯಾಂಟೀನ್ ತೆರೆಯಲು ಬಜೆಟ್‌ನಲ್ಲಿ ೋಷಿಸಲಾಗಿದೆ. ಈ ಕ್ಯಾಂಟೀನ್ ಕಾಮಗಾರಿ ಕೂಡಲೇ ಪೂರ್ಣಗೊಳಿಸಿ ಕಾರ್ಯಾರಂಭ ಮಾಡುವಂತೆ ಸೂಚಿಸಿದರು. ಇಂದಿರಾ ಕ್ಯಾಂಟೀನ್ ಮೆನು ಅನ್ನು ಕೂಡಲೇ ಜಾರಿ ಮಾಡುವಂತೆ ನಿರ್ದೇಶನ ನೀಡಿದರು.
ಅಮೃತ್ 1 ಮತ್ತು 2 , ಸ್ವಚ್ಚ ಭಾರತ್ ಮಿಷನ್ 1 ಮತ್ತು 2 , ನಗರೋತ್ಥಾನ 3 ಮತ್ತು 4, ಎಸ್‌ಎ್ ಸಿ, 14 ಮತ್ತು 15 ನೇ ಹಣಕಾಸು ಯೋಜನೆ, ಇಂದಿರಾ ಕ್ಯಾಂಟೀನ್ ಕಟ್ಟಡಗಳ ನಿರ್ಮಾಣದ ಪ್ರಗತಿ, ಇಂದಿರಾ ಕ್ಯಾಂಟಿನ್‌ಗಳ ಹೊಸ ಮೆನು, ಪೌರಕಾರ್ಮಿಕ ಗೃಹ ಭಾಗ್ಯ ಯೋಜನೆ, ಎ ಮತ್ತು ಬಿ ಖಾತೆಗಳ ಕುರಿತು ಚರ್ಚಿಸಿದರು. ಜತೆಗೆ ಇನ್ನುಳಿದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪರಿಶೀಲನೆ ನಡೆಸಲಾಯಿತು.
ಪ್ರಗತಿಯಲ್ಲಿರುವ ಕಾಮಗಾರಿಗಳು ಅತೀ ವೇಗವಾಗಿ ಪೂರ್ಣಗೊಳ್ಳಿಸಬೇಕು. ಯಾವುದೇ ಕಾಮಗಾರಿಗಳು ಅನ್ಯ ಕಾರಣಗಳಿಂದ ನಿಲ್ಲಿಸಬಾರದು. ಇಲಾಖೆಯ ಪ್ರಗತಿಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿ ಸರಿಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಭೆಯಲ್ಲಿ ಸಚಿವರು ಸೂಚನೆ ನೀಡಿದರು.ಮುಖ್ಯಮಂತ್ರಿಗಳು ಆಯವ್ಯಯದಲ್ಲಿ ಘೋಷನೆ ಮಾಡಿರುವ ಯೋಜನೆಗಳನ್ನು 15 ದಿನಗಳ ಒಳಗಡೆ ಸರ್ಕಾರಿ ಆದೇಶ ಹೊರಡಿಸಿ ಅನುಷ್ಠಾನ ಮಾಡಲು ಕಾರ್ಯೋನ್ಮುಖರಾಗಬೇಕೆಂದು ಕಟ್ಟು ನಿಟ್ಟಾಗಿ ಸೂಚನೆ ನೀಡಿದರು.
ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಕ್ರಿಯಾ ಯೋಜನೆಯನ್ನು ಇನ್ನು 15 ದಿನದೊಳಗೆ ಅನುಮೋದನೆ ನೀಡುವ ಸಂಬಂಧ ಜಿಲ್ಲಾಧಿಕಾರಿಗಳೊಂದಿಗೆ ಸಮನ್ವಯ ಮಾಡಿ ಅಂಗೀಕರಿಸಲು ಕ್ರಮವಹಿಸಿಬೇಕೆಂದು ಸೂಚಿಸಿದರು.ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು, ಜಂಟಿ ನಿರ್ದೇಶಕರು, ಮುಖ್ಯ ಎಂಜಿನಿಯರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:fifteen − ten =
Remember me
