ಬೆಂಗಳೂರುರಾಜ್ಯಾದ್ಯಂತ ಮಾ.26ರಿಂದ ಏ.6ರವರೆಗೆ ನಡೆದ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1 ಯಶಸ್ವಿಯಾಗಿ ಪೂರ್ಣಗೊಂಡಿದೆ. ಒಟ್ಟು 6 ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ಆರೋಪದ ಮೇಲೆ 11 ವಿದ್ಯಾರ್ಥಿಗಳನ್ನು ಡಿಬಾರ್ ಮತ್ತು 7 ಶಿಕ್ಷಕರು ಅಮಾನತುಗೊಂಡಿದ್ದಾರೆ.
ಪ್ರಥಮ ಭಾಷೆ ಕನ್ನಡ ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನಲ್ಲಿ ಪರೀಕ್ಷಾ ನಿರ್ಲಕ್ಷ್ಯದ ಮೇಲೆ ಇಬ್ಬರು ಮತ್ತು ಇಂಡಿ ತಾಲ್ಲೂಕಿನಲ್ಲಿ ಒಬ್ಬರು ಸೇರಿ 3 ಶಿಕ್ಷಕರು. ಸಮಾಜ ವಿಜ್ಞಾನ ಪರೀಕ್ಷಾ ಕೊಠಡಿಯಲ್ಲಿ ನಕಲು ಮಾಡುತ್ತಿದ್ದ 9 ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಧಾರವಾಡದಲ್ಲಿ 4, ರಾಯಚೂರಿನಲ್ಲಿ 3, ಕಲಬುರಗಿ ಮತ್ತು ಬೆಂಗಳೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ತಲಾ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.
ವಿಜ್ಞಾನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಯಲ್ಲಿ ನಕಲು ನಡೆಯುತ್ತಿದ್ದರೂ ಕ್ರಮ ಜರುಗಿಸದ ಕರ್ತವ್ಯಲೋಪದ ಆರೋಪದಡಿ ಚಿತ್ರದುರ್ಗ ಜಿಲ್ಲೆಯಲ್ಲಿ ನಾಲ್ವರು ಶಿಕ್ಷಕರನ್ನು ಅಮಾನತು ಹಾಗೂ ಬಾಗಲಕೋಟೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಡಿಬಾರ್ ಮಾಡಲಾಗಿದೆ. ಶನಿವಾರ ನಡೆದ ಇಂಗ್ಲಿಷ್ ಪರೀಕ್ಷೆಯಲ್ಲಿ ಯಾವುದೇ ಪರೀಕ್ಷಾ ಅಕ್ರಮ ಕಂಡುಬಂದಿರುವ ವರದಿಯಾಗಿಲ್ಲ.
ವೆಬ್‌ಕಾಸ್ಟಿಂಗ್ ವ್ಯವಸ್ಥೆ ಜಾರಿಗೊಳಿಸಿದ್ದರಿಂದ ಸ್ವಲ್ಪ ಮಟ್ಟಿಗೆ ಪರೀಕ್ಷಾ ಅಕ್ರಮ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ಆದರೆ, ಪರಿಣಾಮಕಾರಿಯಾಗಿ ಜಾರಿಯಾಗದಿರುವ ಬಗ್ಗೆ ಹಲವು ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fifteen − twelve =
Remember me
