ಬೆಂಗಳೂರು:ಬೆಳಗಾವಿ ಜಿಲ್ಲೆಯ ರಾಜಕಾರಣಕ್ಕೆ ಸಂಬಂಧಿಸಿದಂತೆ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ಮತ್ತೆ ಬಯಲಿಗೆ ಬಂದಿದೆ. ಗುರುವಾರ ಇಬ್ಬರೂ ಪರಸ್ಪರ ಪರೋಕ್ಷವಾಗಿ ಕಿಡಿಕಾರಿದ್ದಾರೆ.
‘ವರ್ಗಾವಣೆ ವಿಚಾರವಾಗಿ ಹಸ್ತಕ್ಷೇಪ ಆಗಿದೆ. ಈ ಹಿಂದೆಯೂ ಸಾಕಷ್ಟು ಬಾರಿ ಆಗಿದೆ. ನಾನು ಕೂಡ ಕಾಂಪ›ಮೈಸ್ ಮಾಡಿಕೊಂಡಿದ್ದೇನೆ. ನಾಲ್ಕು ತಿಂಗಳಲ್ಲಿ ಸಾಕಷ್ಟು ಬಾರಿ ಹಸ್ತಕ್ಷೇಪ ಆಗಿದೆ. ನಾನು ಅನುಸರಿಸಿಕೊಂಡು ಬರುತ್ತಿದ್ದೇನೆ. ಪಕ್ಷದ ದೃಷ್ಟಿಯಿಂದ ಕಾಂಪ್ರಮೈಸ್ ಆಗಿದ್ದೇನೆ’ ಎಂದು ಹೇಳುವ ಮೂಲಕ ಸತೀಶ್ ಜಾರಕಿಹೊಳಿ ತಮ್ಮೊಳಗಿನ ಅಸಮಾಧಾನ ಹೊರಹಾಕಿದ್ದಾರೆ. ಜಿಲ್ಲಾಧ್ಯಕ್ಷರು, ಕಾರ್ಯಾಧ್ಯಕ್ಷರ ಬದಲಾವಣೆಗೆ ಶಿಫಾರಸು ಮಾಡಿದ್ದೇನೆ. ಹೈಕಮಾಂಡ್ ಯಾವ ರೀತಿಯಲ್ಲಿ ಮಾಡುತ್ತದೆ ಎಂದು ನೋಡೋಣ. ನಾನು ವರ್ಗಾವಣೆಗೆ ಶಿಫಾರಸು ಮಾಡಿದ್ದೆ. ನಿಗಮ, ಮಂಡಳಿಗಳಲ್ಲಿ ಕಾರ್ಯಕರ್ತರಿಗೆ ಕೊಡಿ ಅಂತ ಶಿಫಾರಸು ಮಾಡಿದ್ದೆ. ಕೇವಲ ಶಾಸಕರಿಗೆ ಮಾತ್ರ ಬೇಡ ಎಂದು ಹೇಳಿದ್ದೇನೆ. ಮಾಡೋದು ಬಿಡೋದು ಪಕ್ಷಕ್ಕೆ ಬಿಟ್ಟಿದ್ದು ಎಂದು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಬೇಸರ ಹೊರಹಾಕಿದ್ದಾರೆ.
ನನ್ನ ಮೌನ ದೌರ್ಬಲ್ಯ ಅಲ್ಲವೇ ಅಲ್ಲ. ಕಳೆದ 30 ವರ್ಷದ ರಾಜಕೀಯದಲ್ಲಿ ಮೌನ ಸಕ್ಸಸ್ ಕೊಟ್ಟಿದೆ ಎಂದ ಅವರು, ಶಾಸಕರೊಂದಿಗೆ ಟೂರ್ ಪ್ಲಾ್ಯನ್ ಮುಂದೆ ಕೂಡ ಇರಲಿದೆ. ನಾವು ಟೂರ್ ಮಾಡಲು ಯಾವುದೇ ಅಡ್ಡಿಯಿಲ್ಲ. ಡಿಸಿಎಂ ಬೆಳಗಾವಿ ಭೇಟಿ ವೇಳೆ ಉಸ್ತುವಾರಿ ಸಚಿವನಾಗಿ ಅಲ್ಲಿರಬೇಕಿತ್ತು. ಆದರೆ, ನಾನು ಇರುವುದಿಲ್ಲ ಎಂದು ಡಿಕೆಶಿಗೆ ಒಂದು ದಿನ ಮೊದಲೇ ತಿಳಿಸಿದ್ದೆ ಎಂದರು.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜತೆ ಯಾವುದೇ ಕಿರಿಕಿರಿ ಇಲ್ಲ. ನಾವು ಅವರನ್ನು ಮೀರಿ ಬೆಳೆದಿದ್ದೇವೆ. ಎಲ್ಲರನ್ನೂ ನಾವು ಸಂಭಾಳಿಸಿಕೊಂಡು ಹೋಗಬೇಕಾಗುತ್ತದೆ ಎಂದರು. ಲಕ್ಷ್ಮಣ ಸವದಿ ಕೂಡ ಕಾಂಗ್ರೆಸ್ಸಿಗೆ ಬರುವಾಗ ನನ್ನ ಜತೆ ಮಾತನಾಡಿದ್ದರು. ಕಿರಿಕಿರಿ ಮಾಡುವುದಾದರೆ ನಾನು ಪಕ್ಷ ಸೇರಲ್ಲ ಎಂದು ಹೇಳಿದ್ದರು. ಲಕ್ಷ್ಮಣ ಸವದಿ ಎಲ್ಲೂ ಕಾರ್ಯಾಧ್ಯಕ್ಷ ಸ್ಥಾನ ಕೇಳಿಲ್ಲ. ಅವರನ್ನು ಮಾಡಿದರೆ ನಮ್ಮ ಅಭ್ಯಂತರ ಏನು ಇಲ್ಲ ಎಂದು ಸ್ಪಷ್ಟಪಡಿಸಿದರು.
ಸಚಿವ ಸತೀಶ ಜಾರಕಿಹೊಳಿ ಹಾಗೂ ನನ್ನ ನಡುವೆ ಆಂತರಿಕ, ಬಹಿರಂಗ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಮ್ಮಲ್ಲಿ ಏಕೆ ಭಿನ್ನಾಭಿಪ್ರಾಯಗಳು ಬರುತ್ತವೆ?
| ಡಿ.ಕೆ.ಶಿವಕುಮಾರ್, ಡಿಸಿಎಂ
ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿಯಾಗಿ ಮಾತನಾಡಿದ್ದೇನೆ. ಅಸಮಾಧಾನ ಅಂತ ಏನಿಲ್ಲ, ನಮ್ಮ ಸಮಸ್ಯೆ ಅವರಿಗೆ ಹೇಳಿದ್ದೇನೆ. ಕೆಲ ಬದಲಾವಣೆಗೆ ಹೇಳಿದ್ದೇನೆ.
| ಸತೀಶ್ ಜಾರಕಿಹೊಳಿ, ಸಚಿವ
ಕಾಂಪ್ರಮೈಸ್ ಅಂದರೆ ಏನು? ಸತೀಶಣ್ಣ ಬಹಳ ಅನುಭವ ಇರುವವರು. ಅವರು ಯಾವ ಅರ್ಥದಲ್ಲಿ ಕಾಂಪ್ರಮೈಸ್ ಎಂದು ಹೇಳಿದ್ದಾರೆ ನನಗೆ ಗೊತ್ತಿಲ್ಲ.
| ಲಕ್ಷ್ಮೀ ಹೆಬ್ಬಾಳ್ಕರ್, ಸಚಿವೆ
ಸತೀಶ್ ಜಾರಕಿಹೊಳಿ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಜಿಲ್ಲೆಯಲ್ಲಿ ಪಕ್ಷದ ಎಲ್ಲ ಶಾಸಕರು ಒಗ್ಗಟ್ಟಾಗಿ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಸತೀಶಣ್ಣ ಬಹಳ ಅನುಭವ ಇರುವವರು. ಅವರ ನೇತೃತ್ವದಲ್ಲಿ ನಾವೆಲ್ಲ ಒಂದಾಗಿ ಕೆಲಸ ಮಾಡುತ್ತಿದ್ದೇವೆ. ಜಿಲ್ಲೆಗೆ ಯಾವುದೇ ಅಧಿಕಾರಿಯನ್ನು ಅವರು ಹಾಕಿದಾಗ ನಾನು ಯೆಸ್ ಎನ್ನುತ್ತೇನೆ. ನಾನು ಯಾವುದೇ ಅಧಿಕಾರಿ ಹಾಕಿದಾಗ ಅವರು ಯೆಸ್ ಎನ್ನುತ್ತಾರೆ. ಅದೇ ಕಾಂಪ್ರ್ರೆುೖಸ್ ಅಷ್ಟೇ ಎಂದು ಹೇಳಿದರು. ಸಹೋದರ ಚನ್ನರಾಜ್ ಹಟ್ಟಿಹೊಳಿ ಎಂಎಲ್ಸಿ ಚುನಾವಣೆಯಿಂದ ಹಿಡಿದು ಇಲ್ಲಿ ತನಕ ಒಂದೇ ಒಂದು ವಿಚಾರದಲ್ಲೂ ಸತೀಶ್ ಜತೆ ಭಿನ್ನಾಭಿಪ್ರಾಯಗಳು ಬಂದಿಲ್ಲ. ನಾನು ಗಟ್ಟಿ ದನಿಯಲ್ಲಿ ಸ್ಪಷ್ಟಪಡಿಸುತ್ತೇನೆ, ಒಂದೇ ಒಂದು ವಿಚಾರದಲ್ಲೂ ನನ್ನ ಸತೀಶಣ್ಣ ಮಧ್ಯೆ ಭಿನ್ನಾಭಿಪ್ರಾಯ ಇಲ್ಲ ಎಂದರು. ನಾನು ಯಾವುದಾದರೂ ಹಸ್ತಕ್ಷೇಪ ಮಾಡಿದ್ದೀನಾ? ಜಿಲ್ಲಾಡಳಿತದಲ್ಲೇನಾದ್ರೂ ನನ್ನಿಂದ ತೊಂದರೆ ಆಗುತ್ತಿದೆಯಾ ಎಂದು ಸತೀಶ್ ಅವರನ್ನೇ ಕೇಳಿ ಎಂದ ಲಕ್ಷ್ಮೀ, ಬೆಳಗಾವಿ ರಾಜಕೀಯ ವಿಷಯಕ್ಕೆ ಡಿ.ಕೆ. ಶಿವಕುಮಾರ್ ಅವರನ್ನು ಯಾಕೆ ಎಳೆದು ತರ್ತೀರಾ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು.
ಪೆಟ್ರೋಲ್ ಬಂಕ್​ಗಳಲ್ಲಿನ ಮೋಸ ತಪ್ಪಿಸಲು ಸರ್ಕಾರಕ್ಕೆ ಹೊಸ ಬೇಡಿಕೆ: ವಿಡಿಯೋ ವೈರಲ್!

ಅರಿಶಿನ-ಕುಂಕುಮ ಬಳಸದೆ ಆಯುಧಪೂಜೆ ಮಾಡಿ: ಸರ್ಕಾರದಿಂದ ಹೊಸ ಆದೇಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
