ಬೆಂಗಳೂರು:ರಾಜ್ಯಸಭೆ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ತಾಲೀಮು ಆರಂಭಿಸಿವೆ. ಆದರೆ ಜೆಡಿಎಸ್ ಅಕ್ಷರಶಃ ಇಕ್ಕಟ್ಟಿಗೆ ಸಿಲುಕಿದೆ. ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ನಾಲ್ಕನೇ ಅಭ್ಯರ್ಥಿ ಕಣಕ್ಕಿಳಿಸಲು ಜೆಡಿಎಸ್ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಬಿಜೆಪಿ ಉತ್ಸುಕವಾಗಿದೆ. ಜೆಡಿಎಸ್ ನಾಯಕರು ಮಾತ್ರ ಈ ವಿಷಯದಲ್ಲಿ ಕೈಕೈ ಹಿಸುಕಿಕೊಳ್ಳುತ್ತಿದ್ದಾರೆ. 2023ರ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಇತ್ತೀಚಿನ ದಿನಗಳಲ್ಲಿ ಬಿಜೆಪಿ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರೆ. ಜೆಡಿಎಸ್ ಬಿಜೆಪಿ ಬಿ ಟೀಂ ಎಂಬ ಅಪವಾದದಿಂದ ಹೊರಬರಲು ಮುಸ್ಲಿಂ ಓಲೈಕೆ ಮಾತುಗಳನ್ನಾಡುತ್ತಿದ್ದಾರೆ. ಹಿಜಾಬ್, ಮುಸ್ಲಿಂರಿಗೆ ವ್ಯಾಪಾರ ನಿರ್ಬಂಧ, ಆಜಾನ್ ವಿವಾದ ಸಂದರ್ಭಗಳಲ್ಲಿ ಜೆಡಿಎಸ್ ನಾಯಕರು ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಬೇಕೆ? ಬೇಡವೆ? ಎಂಬ ವಿಚಾರದಲ್ಲಿ ವರಿಷ್ಠರಲ್ಲೇ ಗೊಂದಲ ಸೃಷ್ಟಿಯಾಗಿದೆ.
ಋಣ ಸಂದಾಯ ಅನುಮಾನ:ತುಮಕೂರಿನಿಂದ ಲೋಕಸಭೆಗೆ ಸ್ಪರ್ಧಿಸಿ ಸೋತು ಸುಣ್ಣವಾದ ಸಂದರ್ಭ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಬಿಜೆಪಿ ಬೆಂಬಲಿಸಿ ರಾಜ್ಯಸಭೆಗೆ ಆಯ್ಕೆಯಾಗುವಲ್ಲಿ ಕಾರಣವಾಗಿತ್ತು. ಈ ಋಣ ಸಂದಾಯದ ನಿರೀಕ್ಷೆಯಲ್ಲಿ ಬಿಜೆಪಿ ನಾಯಕರಿದ್ದಾರೆ. ಆದರೆ ಪ್ರಾದೇಶಿಕ ಪಕ್ಷದ ಅಸ್ಥಿತ್ವದ ಹಿನ್ನೆಲೆಯಲ್ಲಿ ಜೆಡಿಎಸ್ ನಾಯಕರು ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದು ಕುತೂಹಲ ಕೆರಳಿಸಿದೆ. ಒಂದು ವೇಳೆ ಬಿಜೆಪಿ ಬೆಂಬಲಿಸಿದರೆ ಜೆಡಿಎಸ್​ನ ದ್ವಂದ್ವ ನಿಲುವು 2023ರ ಚುನಾವಣೆ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಗಳಿವೆ. 2023ರ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ ತಾವು ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಕಡ್ಡಿ ತುಂಡಾಗುವಂತೆ ಹೇಳಿದ್ದಾರೆ. ಅದೇ ಭರವಸೆ ನೀಡಿ ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ.
ಜೆಡಿಎಸ್​ನಿಂದಲೂ ಸ್ಪರ್ಧೆ?:ಜೆಡಿಎಸ್​ನಲ್ಲಿ ರಾಜ್ಯಸಭೆ ಮಾಜಿ ಸದಸ್ಯ ಕುಪೇಂದ್ರರೆಡ್ಡಿ ಹಾಗೂ ಜೆಡಿಎಸ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಬಿ.ಎಂ.ಫಾರೂಕ್ ರಾಜ್ಯಸಭೆ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಜೆಡಿಎಸ್ 32 ಸದಸ್ಯ ಬಲಹೊಂದಿದ್ದು, ಒಂದು ಸ್ಥಾನ ಗೆಲ್ಲಲು 14 ಮತಗಳ ಕೊರತೆ ಇದೆ. ಬಿಜೆಪಿ ಅಥವಾ ಕಾಂಗ್ರೆಸ್​ನಿಂದ ಈ ಮತಗಳನ್ನು ಪಡೆಯುವ ಸಾಮರ್ಥ್ಯ ಯಾರಿಗಿದೆ ಎಂಬುದನ್ನು ಲೆಕ್ಕ ಹಾಕಿ ಇಬ್ಬರಲ್ಲಿ ಒಬ್ಬರನ್ನು ಕಣಕ್ಕಿಳಿಸುವ ಸಾಧ್ಯತೆಗಳ ಬಗ್ಗೆಯೂ ಜೆಡಿಎಸ್ ವರಿಷ್ಠರು ಚರ್ಚೆ ನಡೆಸುತ್ತಿದ್ದಾರೆ.
ಸಾಮರ್ಥ್ಯರಿಗೆ ಮಣೆ:ಕುಪೇಂದ್ರ ರೆಡ್ಡಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಜತೆ ಉತ್ತಮ ಸಂಬಂಧ ಹೊಂದಿದ್ದು, ಕಾಂಗ್ರೆಸ್​ನಲ್ಲಿ ಹೆಚ್ಚುರಿಯಾಗಿ 25 ಮತಗಳು ಉಳಿಯುತ್ತವೆ. ಜತೆಗೆ ಬಿಜೆಪಿ ನಾಲ್ಕನೇ ಅಭ್ಯರ್ಥಿ ಕಣಕ್ಕಿಳಿಸದೆ ಇದ್ದರೆ 30 ಮತಗಳು ಹೆಚ್ಚುವರಿಯಾಗುತ್ತವೆ. ಈ 2 ಪಕ್ಷಗಳ ಜತೆ ಯಾರು ಉತ್ತಮ ಸಂಬಂಧ, ‘ಸಾಮರ್ಥ್ಯ’ ಹೊಂದಿದ್ದಾರೆ ಎಂಬುದನ್ನು ಅಳೆದೂ ತೂಗಲು ಜೆಡಿಎಸ್ ಹೈಕಮಾಂಡ್ ನಿರ್ಧರಿಸಿದೆ.
ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ; ಕಳೆದೆರಡು ತಿಂಗಳಲ್ಲಿ ನಾಲ್ವರ ಸಾವು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
