ಮಂಡ್ಯ:ಲಾಕ್ಡೌನ್ ಟೈಂನಲ್ಲಿ ಆನ್ಲೈನ್ ತರಗತಿ ನಡೆಯುತ್ತದೆ ಎನ್ನುವುದನ್ನೇ ಬಂಡವಾಳ ಮಾಡಿಕೊಂಡು ಸರ್ಕಾರಿ ಶಾಲೆಯಲ್ಲಿದ್ದ ಕಂಪ್ಯೂಟರ್ ಗಳನ್ನು ಕದ್ದು ಕಡಿಮೆ ದರಕ್ಕೆ ಮಾರಾಟ ಮಾಡುತ್ತಿದ್ದ ತಂಡವನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕಂಪ್ಯೂಟರ್ ಗಳ ಸರಣಿ ಕಳ್ಳತನಕ್ಕೆ ಬ್ರೇಕ್ ಬಿದ್ದಂತಾಗಿದೆ. ಕಳ್ಳತನ ಮಾಡುತ್ತಿದ್ದ ರವಿಕುಮಾರ್, ಮಂಜುನಾಥ, ಎಸ್.ಪಿ.ನಾಗರಾಜು, ಹೇಮಂತ್ ಕುಮಾರ್ ಹಾಗೂ ಕಂಪ್ಯೂಟರ್ ಗಳನ್ನು ಸೆಕೆಂಡ್ ಹ್ಯಾಂಡ್ ನಂತೆ ಖರೀದಿಸುತ್ತಿದ್ದ ಎನ್.ವೈ.ರಾಮಕೃಷ್ಣ, ಬಿ.ಜಿ.ವೆಂಕಟೇಶ್ ಮತ್ತು ಬ್ಯಾಟರಿ ಕೊಂಡುಕೊಳ್ಳುತ್ತಿದ್ದ ಸಾದಿಕ್ ಎಂಬಾತನನ್ನು ಬಂಧಿಸಲಾಗಿದೆ. ಇನ್ನೊಬ್ಬ ಆರೋಪಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ. ಇನ್ನು ಇವರಿಂದ 61 ಲಕ್ಷ ರೂ ಮೌಲ್ಯದ ಕಂಪ್ಯೂಟರ್, ಬ್ಯಾಟರಿ, ಟಿವಿ, ವಾಷಿಂಗ್ ಮಿಷಿನ್, ಯುಪಿಎಸ್, ವೇಯಿಂಗ್ ಮಿಷಿನ್, ಜೆರಾಕ್ಸ್ ಮಿಷಿನ್, ಪ್ರಿಂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಎಸ್ಪಿ ಕೆ.ಪರಶುರಾಮ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆರೋಪಿಗಳು ಮಂಡ್ಯ ಜಿಲ್ಲೆಯಲ್ಲಿ 20, ಮೈಸೂರು ಹಾಗೂ ತುಮಕೂರು ಜಿಲ್ಲೆಯಲ್ಲಿ ತಲಾ ಐದು, ಹಾಸನದಲ್ಲಿ ಎರಡು ಹಾಗೂ ರಾಮನಗರ, ಬೆಂಗಳೂರು ನಗರ ಜಿಲ್ಲೆಯಲ್ಲಿ ತಲಾ ಒಂದು ಸೇರಿದಂತೆ 34 ಕಡೆ ಕಳ್ಳತನ ಮಾಡಿದ್ದರು. ಇದಲ್ಲದೆ ಎರಡು ಕಾರು, ಒಂದು ಲಗೇಜ್ ವಾಹನ ಕೂಡ ವಶಕ್ಕೆ ಪಡೆಯಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
