ಹುಬ್ಬಳ್ಳಿ:ನಗರದಲ್ಲಿ ಕೋಮುಸಂಘರ್ಷದ ಹಿನ್ನೆಲೆಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸ್ ಠಾಣೆ ಎದುರೇ ಕಲ್ಲು ತೂರಾಟ ನಡೆದಿದ್ದು, ಪೊಲೀಸ್ ಜೀಪನ್ನು ಪಲ್ಟಿ ಮಾಡಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಮಸೀದಿ ಮೇಲೆ ಭಗವಾಧ್ವಜ ಹಾರಿಸಿದಂಥ ವಿಡಿಯೋ ಸ್ಟೇಟಸ್​​ಗೆ ಹಾಕಿಕೊಂಡಿದ್ದರಿಂದ ಇಂಥದ್ದೊಂದು ಗಲಾಟೆಗೆ ಮೂಲಕಾರಣವಾಗಿದೆ. ಆನಂದ ನಗರ ಘೋಡಕೆ‌ ಫ್ಲ್ಯಾಟ್​ ನಿವಾಸಿಯೊಬ್ಬ ಹೀಗೊಂದು ಎಡಿಟೆಡ್ ವಿಡಿಯೋ ಸ್ಟೇಟಸ್​ಗೆ ಹಾಕಿಕೊಂಡಿದ್ದ. ಈ ವಿಷಯ ತಿಳಿದ ಕೂಡಲೇ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಆ ಯುವಕನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ.ಯುವಕನನ್ನು ವಶಕ್ಕೆ ಪಡೆದ ವಿಷಯ ತಿಳಿಯುತ್ತಿದ್ದಂತೆ ನೂರಾರು ಜನ ಠಾಣೆ ಬಳಿ ಜಮಾಯಿಸಿದ್ದಾರೆ. ಇದರಿಂದ ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿದೆ. ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ. ಪೊಲೀಸರು ಯುವಕನ ವಿಚಾರಣೆ ನಡೆಸುತ್ತಿದ್ದಾರೆ.
ಈ ವೇಳೆ ಠಾಣೆ ಬಳಿ ಜಮಾಯಿಸಿದ ಒಂದು ಸಮುದಾಯದ ಜನರು ಕಲ್ಲುತೂರಾಟ ನಡೆಸಿದ್ದು, ಪೊಲೀಸ್ ಜೀಪ್ ಪಲ್ಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನರನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದು, ಅಶ್ರವಾಯು ಸಿಡಿಸುತ್ತಿದ್ದಾರೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಬಾಲಿವುಡ್​ ಮೇಲೆ ಅಣುಬಾಂಬ್​!; ನಿರ್ದೇಶಕ ರಾಮ್​ಗೋಪಾಲ್​ ವರ್ಮಾ ಹೀಗಂದಿದ್ದೇಕೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + 7 =
Remember me
