ಮೈಸೂರು:ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​. ಧ್ರುವನಾರಾಯಣ (61) ಅವರ ಅಕಾಲಿಕ ನಿಧನ ಕಾಂಗ್ರೆಸ್​ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಕಾಂಗ್ರೆಸ್​ ಕಟ್ಟಾಳು ಧ್ರುವನಾರಾಯಣ್ ತೀವ್ರ ಹೃದಯಾಘಾತದಿಂದ ಇಂದು ಮೈಸೂರಿನ ಡಿಆರ್​ಎಂ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಬೆಳಗ್ಗೆ 6.30ಕ್ಕೆ ಎದೆ ಉರಿ ಎಂದು ಹೇಳಿ ವೈದ್ಯರಿಗೆ ಧ್ರುವನಾರಾಯಣ್​ ಕರೆ ಮಾಡಿದರು. ನಿಮಗಾಗಿ ನಾನು ಕಾಯುತ್ತಿರುತ್ತೇನೆ ಬನ್ನಿ ಎಂದು ಖ್ಯಾತ ಹೃದಯ ತಜ್ಞ ಸದಾನಂದ ಹೇಳಿದರು. ತುರ್ತು ‌ಚಿಕಿತ್ಸಾ ಘಟಕದಲ್ಲಿ ಧ್ರುವನಾರಾಯಣರಿಗಾಗಿ ಸದಾನಂದ ಅವರು ಕಾಯುತ್ತಿದ್ದಾಗ ತಕ್ಷಣ ಧ್ರುವನಾರಾಯಣ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.
ಆದರೆ, ಎದೆ ಉರಿಯಿಂದ ಹೃದಯದಲ್ಲಿ ರಕ್ತಸ್ರಾವವಾಗಿ ಬೆಳಗ್ಗೆ 7 ಗಂಟೆಗೆ ಧ್ರುವನಾರಾಯಣ ಅವರು ಮೃತಪಟ್ಟಿದ್ದಾರೆ. ಇಂದೇ ಧ್ರುವನಾರಾಯಣ ಅವರ ಅಂತ್ಯ ಸಂಸ್ಕಾರ ಹುಟ್ಟೂರಿನಲ್ಲಿ ನಡೆಯಲಿದೆ.
ಇದನ್ನೂ ಓದಿ:ಮಹಿಳೆ ಜತೆ ಯುವಕನನ್ನು ಒಟ್ಟಿಗೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿತ: ಗ್ರಾಮಸ್ಥರಿಂದ ಅಮಾನವೀಯ ಕೃತ್ಯ
ಇಂದು ಸಂಜೆ 4 ಗಂಟೆವರಗೆ ಸಾರ್ವಜನಿಕರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮೈಸೂರಿನ ವಿಜಯನಗರದಲ್ಲಿರುವ ಧ್ರುವನಾರಾಯಣ್ ಅವರ ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಭಾನೋತ್ ಮಾಹಿತಿ ನೀಡಿದ್ದಾರೆ. ಸಂಜೆ 4 ಗಂಟೆಯ ನಂತರ ಧ್ರುವನಾರಾಯಣ್ ಸ್ವಗ್ರಾಮಕ್ಕೆ ತೆಗೆದುಕೊಂಡು ಹೋಗಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
ಗಣ್ಯರ ಕಂಬನಿಅಕಾಲಿಕವಾಗಿ ಅಗಲಿದ ಧ್ರುವನಾರಾಯಣ್​ ಅವರ ಸಾವಿಗೆ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ನ ಹಿರಿಯ ಮುಖಂಡ ಆರ್. ಧ್ರುವನಾರಾಯಣ ಅವರು ನಿಧನರಾದ ಸುದ್ದಿ ಕೇಳಿ ತೀವ್ರ ಆಘಾತ ಮತ್ತು ದುಃಖವಾಗಿದೆ. ಇವರ ಅಗಲಿಕೆಯಿಂದ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರಿಗೆ ಚಿರಶಾಂತಿ ಕರುಣಿಸಲಿ. ಅವರ ಕುಟುಂಬ ಹಾಗೂ ನಾಡಿನ ಜನತೆಗೆ ಈ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.pic.twitter.com/FhLRO9w5Eu
— H D Devegowda (@H_D_Devegowda)March 11, 2023

ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ.ಯ ಕಾರ್ಯಾಧ್ಯಕ್ಷರಾಗಿದ್ದ ಶ್ರೀ ಧ್ರುವನಾರಾಯಣ್ ಅವರು ನಿಧನರಾದ ವಿಷಯ ಅತ್ಯಂತ ಬೇಸರ ಉಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ ಹಾಗೂ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.ಓಂ ಶಾಂತಿಃpic.twitter.com/GetGPVmGmM
— Basavaraj S Bommai (@BSBommai)March 11, 2023

ರಾಜ್ಯ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷರು, ಸರಳ ಸಜ್ಜನ ರಾಜಕಾರಣಿಯಾಗಿದ್ದ ಶ್ರೀ ಆರ್.ಧ್ರುವನಾರಾಯಣ ಅವರು ಹೃದಯಾಘಾತದಿಂದ ನಿಧನರಾದರು ಎಂಬ ಸುದ್ದಿ ಕೇಳಿ ನನಗೆ ತೀವ್ರ ದಿಗ್ಭ್ರಮೆ, ಆಘಾತ ಉಂಟಾಗಿದೆ.1/2pic.twitter.com/G9l6CiVA9w
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)March 11, 2023

ತೀವ್ರ ಹೃದಯಾಘಾತದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​. ಧ್ರುವನಾರಾಯಣ ವಿಧಿವಶ

ಬಿಜೆಪಿಗೆ ಬೆಂಬಲ ಘೋಷಣೆ ಹಿಂದಿದೆ ಸುಮಲತಾ ಅಂಬರೀಷ್​ ಮೆಗಾ ಪ್ಲಾನ್!

ಮಹಿಳೆ ಜತೆ ಯುವಕನನ್ನು ಒಟ್ಟಿಗೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿತ: ಗ್ರಾಮಸ್ಥರಿಂದ ಅಮಾನವೀಯ ಕೃತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 3 =
Remember me
