ಯಾದಗಿರಿ:ಕಾಂಗ್ರೆಸ್​​ ಸರ್ಕಾರ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ. ಪುರುಷರ ಬಟ್ಟೆ ಧರಿಸಿ ಬಂದಿದ್ದ ತೃತೀಯ ಲಿಂಗಿಗೆ ಟಿಕೆಟ್ ನೀಡಲು ಬಸ್ ಕಂಡಕ್ಟರ್ ಪರದಾಡಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಇದನ್ನೂ ಓದಿ:ಮಾನ್ಸೂನ್ ಸಮಯದಲ್ಲಿ ಫಿಟ್ ಆಗಿರಲು 5 ಸಲಹೆಗಳು ಇಂತಿವೆ…
ಜಿಲ್ಲೆಯ ಶಹಾಪುರ ತಾಲೂಕಿನ ತಡಬಿಡಿ ಗ್ರಾಮದ ತೃತೀಯ ಲಿಂಗಿ ಲಕ್ಷ್ಮೀ ರಾಯಚೂರಿನಿಂದ ಯಾದಗಿರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಲಕ್ಷ್ಮೀ ಫ್ರೀ ಟಿಕೆಟ್ ಕೇಳಿದಾಗ ಕಂಡಕ್ಟರ್ ಆಧಾರ್​​ ಕಾರ್ಡ್​​​ ನೋಡಿ ಕಕ್ಕಾಬಿಕ್ಕಿಯಾಗಿದ್ದಾರೆ.

ಆಧಾರ್ ಕಾರ್ಡ್‌ನಲ್ಲಿ ಲಕ್ಷ್ಮೀ ಎಂಬ ಹೆಸರಿದ್ರೂ ಲಿಂಗದ ಜಾಗದಲ್ಲಿ ಪುರುಷ ಎಂದು ಉಲ್ಲೇಖಿಸಲಾಗಿತ್ತು. ಅದರ ಜತೆಗೆ ಲಕ್ಷ್ಮೀ ಪುರುಷರ ಬಟ್ಟೆ ಹಾಕಿದ್ದರಿಂದ ಗೊಂದಲಕ್ಕೀಡಾದ ಕಂಡಕ್ಟರ್ ಏನು ಮಾಡುವುದು ಎಂದು ತೋಚದೆ ಕಕ್ಕಾಬಿಕ್ಕಿಯಾಗಿದ್ದಾರೆ. ಪುರುಷರ ಬಟ್ಟೆ ಧರಿಸಿ ಬಂದ ತೃತೀಯ ಲಿಂಗಿಗೆ ಟಿಕೆಟ್‌ ನೀಡಲು ಪರದಾಡಿದ್ದಾರೆ. ರಾಯಚೂರುನಿಂದ ಯಾದಗಿರಿಗೆ ಬರುತ್ತಿದ್ದ ಬಸ್ ನಲ್ಲಿ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಸೋಶಿಯಲ್​​ ಮೀಡಿಯಾದಲ್ಲಿ ವೈರಲ್​​ ಆಗಿದೆ.
ಇದನ್ನೂ ಓದಿ:ಗಂಡನ ಕುಡಿತದ ಚಟಕ್ಕೆ ಬೇಸತ್ತ ಪತ್ನಿ; ತಾನೂ ವಿಷ ಕುಡಿದು ಮಕ್ಕಳಿಗೂ ವಿಷ ಉಣಿಸಿದಳು
ಶಹಾಪುರ ತಾಲೂಕಿನ ತಡಬಿಡಿ ಗ್ರಾಮದ ತೃತೀಯ ಲಿಂಗಿ ಎಂದು ಆಧಾರ್ ಕಾರ್ಡ್ ನೋಡಿದ ಕಂಡಕ್ಟರ್​​, ಹೆಸರು ಲಕ್ಷ್ಮೀ, ಲಿಂಗ ಪುರುಷ ಇದೇನಿದು ಎಂದು ಪ್ರಶ್ನಿಸಿದ ಕಂಡಕ್ಟರ್‌ಗೆ ಸಿಕ್ಕ ಉತ್ತರ ತೃತೀಯ ಲಿಂಗಿ ಎನ್ನೋದು. ನಾನು ಮಹಿಳೆಯರ ಬಟ್ಟೆ ಹಾಕಿಕೊಳ್ಳಲ್ಲ. ಯಾವಾಗಲೂ ಪುರುಷರ ಬಟ್ಟೆನೇ ಧರಿಸುತ್ತೇನೆ ಎಂದು ಹೇಳಿದ್ದು, ಕೊನೆಗೂ ಮನವರಿಕೆ ಮಾಡಿಕೊಂಡ ಕಂಡಕ್ಟರ್ ಶಕ್ತಿ ಯೋಜನೆಯಡಿ ಫ್ರೀ ಟಿಕೆಟ್ ಕೊಟ್ಟು ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಪುರುಷರು ಹಾಕುವ ಬಟ್ಟೆ ಧರಿಸಿ ಪ್ರಯಾಣ ಮಾಡುತ್ತಿರುವದಕ್ಕೆ ಟಿಕೆಟ್ ನೀಡಲು ಕಂಡಕ್ಟರ್​​ಗೆ ಕನಫ್ಯೂಸ್ ಆಗಿದೆ.
ಮಲಗಿದ್ದ ತಂದೆಯ ತಲೆ‌ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದ ಮಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 7 =
Remember me
