ಬೆಂಗಳೂರು:ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿಮಾತನಾಡುವಾಗ ಮೈಕ್ ಆಫ್‌ ಮಾಡಲಾಗಿತ್ತು ಎಂದು ಹೇಳುವುದು ರಾಷ್ಟ್ರಪತಿ ಮಾಡುವ ಅಪಮಾನವಾಗಿದೆ. ಕಾಂಗ್ರೆಸ್‌ನ ಈ ನಡವಳಿಕೆ ಸರಿಯಲ್ಲವೆಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ಷೇಪಿಸಿದರು.
ರೈಲ್ವೆ ಇಲಾಖೆ ಸಭೆಯಲ್ಲಿ ಶನಿವಾರ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮುಕ್ತ ಮನಸ್ಸು ಹೊಂದಿದೆ. ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ಕೊಟ್ಟಿದೆ. ರಾಹುಲ್ ಗಾಂಧಿ ಮಾತನಾಡುವ ವೇಳೆ ಮೈಕ್ ಬಂದ್ ಮಾಡಲಾಗಿತ್ತು ಎನ್ನುವುದು ಕಾಂಗ್ರೆಸ್‌ನವರು ಹುಟ್ಟಿಹಾಕಿದ ಕಪೋಕಲ್ಪಿತ ಕಥನವಾಗಿದೆ ಎಂದು ಟೀಕಿಸಿದರು.
ರಾಷ್ಟ್ರಪತಿ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ಮಾತನಾಡುವಾಗ ಯಾವುದೇ ವಿಷಯ ಪ್ರಸ್ತಾಪಿಸಬಹುದಾಗಿದೆ. ಮುಂದೆ ಬಜೆಟ್ ಅಧಿವೇಶನದಲ್ಲೂ ಚರ್ಚೆಗೂ ಅವಕಾಶವಿದೆ. ನೀಟ್ ಅಷ್ಟೇ ಅಲ್ಲ, ಪ್ರತಿಪಕ್ಷಗಳು ಯಾವುದೇ ವಿಚಾರವನ್ನು ಕೈಗೆತ್ತಿಕೊಳ್ಳಬಹುದು ಎಂದು ಶೋಭಾ ಕರಂದ್ಲಾಜೆ ಹೇಳಿದರು.
ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿವೆ. ಬೆಲೆಗಳ ಏರಿಕೆ ಸಂಕಷ್ಟದ ಸ್ಥಿತಿ ಸೃಷ್ಟಿಸಿದೆ. ಹಗರಣದ ಕಳಂಕ ಮೆತ್ತಿಕೊಂಡು ಜನರು ಬೇಸತ್ತಿದ್ದಾರೆ. ಈ ಸಮಸ್ಯೆಗಳಿಂದ ಜನರ ಗಮನ ಬೇರೆಡೆ ಸೆಳೆಯಲು ಕಾಂಗ್ರೆಸ್ ನಾಯಕರು ಸಿಎಂ, ಡಿಸಿಎಂ ನಾಟಕವಾಡುತ್ತಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದರು.
ಸಿಎಂ, ಡಿಸಿಎಂ, ಸಚಿವ ಸ್ಥಾನದ ವಿಚಾರದಲ್ಲಿ ಕಾಂಗ್ರೆಸ್‌ನ ನಾಯಕರ ಜಗಳ ಹೊಸದಲ್ಲ. ಅಧಿಕಾರ ಹಂಚಿಕೆ, ಒಳ ಒಪ್ಪಂದಗಳೆಲ್ಲ ಕಾಂಗ್ರೆಸ್ ಪಕ್ಷದ ಆಂತರಿಕ ವಿಷಯವಾಗಿದ್ದು, ಬಹಿರಂಗ ಚರ್ಚೆಗೆ ಇಳಿದಿರುವ ಉದ್ದೇಶ ಸ್ಪಷ್ಟವಾಗಿದೆ.ವಿದ್ಯುತ್, ಮುದ್ರಾಂಕ ಮತ್ತು ನೋಂದಣಿ ಶುಲ್ಕ, ಮಾರ್ಗಸೂಚಿ ದರ ಹೆಚ್ಚಿಸಿದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಂತರ ಹಾಲಿನ ಬೆಲೆ ಹೆಚ್ಚಳ ಮಾಡಿದ್ದಾರೆ.
ತೈಲ ದರ ಏರಿಕೆಯು ಅಗತ್ಯವಸ್ತುಗಳ, ತರಕಾರಿ ಇನ್ನಿತರ ಬೆಲೆಗಳ ಹೆಚ್ಚಳಕ್ಕೆ ಕಾರಣವಾಗಿದೆ. ಜನರ ಆಕ್ರೋಶ ಸರ್ಕಾರದತ್ತ ತಿರುಗುತ್ತಿದೆ. ಈ ಹೊತ್ತಿನಲ್ಲಿ ಸಲ್ಲದ ವಿಷಯ ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕರು ಹೇಳಿಕೆಗಳಿಗೆ ಪೈಪೋಟಿಗೆ ಇಳಿದಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದ ಅಭಿವೃದ್ಧಿ, ಜನರ ಹಿತವನ್ನು ಕಾಂಗ್ರೆಸ್ ಸರ್ಕಾರ ಮರೆತಿದೆ. ಕಾಂಗ್ರೆಸ್ ಹೈಕಮಾಂಡ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಧ್ಯೆ ಪ್ರವೇಶಿಸಿ, ಸಿಎಂ-ಡಿಸಿಎಂ ಕುರ್ಚಿ ನಾಟಕವನ್ನು ಅಂತ್ಯಗೊಳಿಸಬೇಕು ಎಂದು ಶೋಭಾ ಕರಂದ್ಲಾಜೆ ಒತ್ತಾಯಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
