ಬೆಂಗಳೂರು:ರಾಜ್ಯದ ನೂತನ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ​ ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ. ವಿಜಯೇಂದ್ರ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದೆ.
ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್​, ಸಿಟಿ ರವಿ, ಆರ್. ಅಶೋಕ್​, ಅಶ್ವತ್ಥ ನಾರಾಯಣ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ತಮ್ಮ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳ ಮೂಲಕ ಶುಭಕೋರಿದ್ದಾರೆ.
ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು.
ಯುವನಾಯಕರಾಗಿ ಸಂಘಟನೆಯಲ್ಲಿ ಈಗಾಗಲೇ ಕ್ರಿಯಾಶೀಲರಾಗಿರುವ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ. ತಮಗೆ ವಹಿಸಿರುವ ಈ ಗುರುತರ ಹೊಣೆಯನ್ನು ಅವರು ಸಮರ್ಥವಾಗಿ…pic.twitter.com/hWpAsxpHle
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy)November 10, 2023

ಭಾರತೀಯ ಜನತಾ ಪಕ್ಷ ಕರ್ನಾಟಕದ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಶ್ರೀ@BYVijayendraಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ನಿಮ್ಮ ನೇತೃತ್ವದಲ್ಲಿ ಪಕ್ಷ ಸಂಘಟನೆ ಇನ್ನಷ್ಟು ಬಲಿಷ್ಠಗೊಳ್ಳಲಿ ಎಂದು ಶುಭ ಹಾರೈಸುತ್ತೇನೆ.pic.twitter.com/P5TxUykoPW
— Pralhad Joshi (@JoshiPralhad)November 10, 2023

ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ಶ್ರೀ ಬಿ. ವೈ. ವಿಜಯೇಂದ್ರ ರವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಅಧ್ಯಕ್ಷ ಅವಧಿಯಲ್ಲಿ ಪಕ್ಷ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇನೆ.@BYVijayendra@BJP4Karnatakapic.twitter.com/BjqKQqcnRu
— Basavaraj S Bommai (@BSBommai)November 10, 2023

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ@BYVijayendraಅವರಿಗೆ ಹೃದಯಪೂರ್ವಕ ಅಭಿನಂದನೆಗಳು.
ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಸನ್ಮಾನ್ಯ ಪ್ರಧಾನಿ ಶ್ರೀ@narendramodi, ಗೃಹ ಸಚಿವರಾದ ಶ್ರೀ@AmitShah, ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ@JPNaddaಅವರಿಗೆ…pic.twitter.com/t9EPp9B6wH
— R. Ashoka (ಆರ್. ಅಶೋಕ) (@RAshokaBJP)November 10, 2023

.@BJP4Karnatakaರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಶ್ರೀ@BYVijayendraಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ಸಂಘಟನೆಯನ್ನು ಬಲ ಪಡಿಸುವ ಜತೆ ಕಾರ್ಯಕರ್ತರಿಗೆ ಸ್ಪೂರ್ತಿ ತುಂಬುವ ದಿಶೆಯಲ್ಲಿ ಈ ಮಹತ್ವದ ಜವಾಬ್ದಾರಿ ತಮಗೆ ಹಾಗೂ ಪಕ್ಷಕ್ಕೆ ಯಶಸ್ಸನ್ನು ತಂದುಕೊಡಲಿ ಎಂದು ಶುಭ ಹಾರೈಸುವೆ.pic.twitter.com/4wVDLXbRJs
— Dr. C.N. Ashwath Narayan (@drashwathcn)November 10, 2023

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕರು ಹಾಗು ಯುವನಾಯಕರಾದ ಸನ್ಮಾನ್ಯ ಶ್ರೀ@BYVijayendraಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
ನಿಮ್ಮ ನೇತೃತ್ವದಲ್ಲಿ ಪಕ್ಷವು ರಾಜ್ಯಾದ್ಯಂತ ಹೆಚ್ಚು ಸಂಘಟಿತವಾಗಲಿ ಎಂದು ಹಾರೈಸುತ್ತಾ ನಿಮಗೆ ಸಕಲ ಯಶಸ್ಸು ದೊರಕಲಿ ಎಂದು ಪ್ರಾರ್ಥಿಸುತ್ತೇನೆ.pic.twitter.com/Qfntgxo1m7
— C T Ravi 🇮🇳 ಸಿ ಟಿ ರವಿ (@CTRavi_BJP)November 10, 2023

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಆತ್ಮೀಯರಾದ ಶ್ರೀ@BYVijayendraಅವರಿಗೆ ಅಭಿನಂದನೆಗಳು.
ತಮ್ಮ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷವು ಮತ್ತಷ್ಟು ಸಂಘಟಿತವಾಗಿ ಬಲಿಷ್ಠಗೊಳ್ಳಲಿ ಎಂದು ಹಾರೈಸುತ್ತೇನೆ.#BJP4Karnatakapic.twitter.com/2z2DIu7UQG
— Shivaram Hebbar (@ShivaramHebbar)November 10, 2023

ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಬಿ. ವೈ. ವಿಜಯೇಂದ್ರ ಅವರಿಗೆ ಅಭಿನಂದನೆಗಳು. ತಮ್ಮ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷವು ಮತ್ತಷ್ಟು ಸಂಘಟಿತವಾಗಿ ಬಲಿಷ್ಠಗೊಳ್ಳಲಿದೆ.#BJP4Karnataka@BYVijayendrapic.twitter.com/dfldv8XdXX
— ನವರಸನಾಯಕ ಜಗ್ಗೇಶ್ (@Jaggesh2)November 10, 2023

ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಯುವ ನಾಯಕ ಶ್ರೀ ಬಿ. ವೈ. ವಿಜಯೇಂದ್ರ@BYVijayendraರವರಿಗೆ ಹಾರ್ದಿಕ ಅಭಿನಂದನೆಗಳು. ನಿಮ್ಮ ಅಧ್ಯಕ್ಷ ಅವಧಿಯಲ್ಲಿ ಪಕ್ಷ ಮತ್ತಷ್ಟು ಸಂಘಟನಾತ್ಮಕವಾಗಿ ಬಲಗೊಂಡು ಇನ್ನಷ್ಟು ಶಕ್ತಿಯುತವಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇನೆ.#BYVijayendra#BJP4Karnataka#BJP4India…pic.twitter.com/s2fntiw3Nt
— Pramod Madhwaraj (@PMadhwaraj)November 10, 2023

ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಅಭಿನಂದನೆಗಳು
ನಿಮ್ಮ ನೇತೃತ್ವದಲ್ಲಿ ಪಕ್ಷವನ್ನು ಬಲಿಷ್ಠಗೊಳಿಸಿ, ಕಾರ್ಯಕರ್ತರಲ್ಲಿ ನವಚೈತನ್ಯ ಮೂಡಿಸಿ, ರಾಜ್ಯದ ಜನರಿಗೆ ಬೆಳಕಿನ ಕಿರಣಗಳಾಗಿ ಹೊರಹುಮ್ಮಲಿ ಎಂದು ಹಾರೈಸುತ್ತೇನೆ.@BYVijayendra@BSYBJPpic.twitter.com/UiOAJSCWQ0
— M P Renukacharya (@MPRBJP)November 10, 2023

ಅಂದಹಾಗೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿನ ಹೀನಾಯ ಸೋಲಿನಿಂದ ಪಾಠ ಕಲಿತಿರುವ ಬಿಜೆಪಿ ಹೈಕಮಾಂಡ್​, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಇದೇ ತಪ್ಪು ಮರುಕಳಿಸಬಾರದು ಅಂತ ಅಳೆದು ತೂಗಿ, ತುಂಬಾ ಲೆಕ್ಕಾಚಾರ ಮಾಡಿ ಲಿಂಗಾಯತ ಸಮುದಾಯದ ಯುವ ನಾಯಕ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟವನ್ನು ನೀಡಿದಂತಿದೆ. ಯಡಿಯೂರಪ್ಪರನ್ನು ಕಡಗಣಿಸಿದ್ದೇ ಬಿಜೆಪಿಯ ಹೀನಾಯ ಸೋಲಿಗೆ ಕಾರಣ ಎಂಬ ಚರ್ಚೆಗಳು ವ್ಯಾಪಕವಾಗಿ ಕೇಳಿಬಂದಿತ್ತು. ಅಲ್ಲದೆ, ಬಹುತೇಕ ಲಿಂಗಾಯತ ಮತಗಳು ಕಾಂಗ್ರೆಸ್​ ಪಾಲಾಗಿದ್ದವು. ಇದರಿಂದ ಎಚ್ಚೆತ್ತಿರುವ ಬಿಜೆಪಿ ಹೈಕಮಾಂಡ್​ ಬಿವೈ ವಿಜಯೇಂದ್ರರಿಗೆ ಮಣೆ ಹಾಕಿದೆ ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.
ಇದಕ್ಕೂ ಮುನ್ನ ರಾಜ್ಯಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿಟಿ ರವಿ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೆಸರುಗಳು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಆದರೆ, ಅವರೆಲ್ಲರನ್ನು ಹಿಂದಿಕ್ಕಿ ಯುವ ನಾಯಕ ಬಿವೈ ವಿಜಯೇಂದ್ರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಬಿಜೆಪಿ ಹೈಕಮಾಂಡ್ ಮತ್ತೆ ಮಾಜಿ ಸಿಎಂ ಯಡಿಯೂರಪ್ಪ ಶಕ್ತಿ ಏನೆಂಬುದನ್ನು ಅರಿತಂದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
