ಬೆಂಗಳೂರು:ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನ;ಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ವಿಚಾರ ರಾಜ್ಯದಲ್ಲಿ ಹೊಸ ಸಂಘರ್ಷಕ್ಕೆ ನಾಂದಿ ಹಾಡಿದದ್ದು, ಇದನ್ನು ಖಂಡಿಸಿ ಸಿಎಂ, ಡಿಸಿಎಂ ಸೇರಿದಂತೆ ರಾಜ್ಯ ಕಾಂಗ್ರೆಸ್​ ಸರ್ಕಾರದ ಸಚಿವರು, ಶಾಸಕರು, ಸಂಸದರು ಪ್ರತಿಭಟನೆ ನಡೆಸಿದ್ದಾರೆ.
ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಆರಂಭಗೊಂಡ ರಾಜಭವನ ಚಲೋ ಪ್ರತಿಭಟನೆಯಲ್ಲಿ ಆಡಳಿತ ಪಕ್ಷದ ನಾಯಕರು ಭಾಗಿಯಾಗಿದ್ದರು. ಈ ವೇಳೆ ರಾಜ್ಯಪಾಲರು ತೊಲಗಲಿ ಎಂದು ಘೋಷಣೆ ಕೂಗುವ ಮೂಲಕ ಕಾಂಗ್ರೆಸ್ ನಾಯಕರು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ಕ್ರಮ ಖಂಡಿಸಿದರು.
ಇದನ್ನೂ ಓದಿ:ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ ಕೇಸ್​ಗೆ ರಾಷ್ಟ್ರಪತಿ ಎಂಟ್ರಿ; ರಾಜ್ಯ ಸಿಎಸ್​ಗೆ ಪತ್ರ
ಸಿಎಂ ಸಿದ್ದರಾಮಯ್ಯ ಪ್ರಕರಣದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದಂತೆಯೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಮುರುಗೇಶ್ ನಿರಾಣಿ ಹಾಗೂ ಶಶಿಕಲಾ ಜೊಲ್ಲೆ ಸೇರಿದಂತೆ ಬಿಜೆಪಿ, ಜೆಡಿಎಸ್ ನಾಯಕರ ಮೇಲಿನ ಪ್ರಕರಣಗಳ ಸಂಬಂಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭೀಷೇಕ್ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ. ರಾಜ್ಯಪಾಲರ ಪರ ಸಾಲಿಸಿಟಾರ್​ ಜನರಲ್​ ತುಷಾರ್​ ಮೆಹ್ತಾ ವಾದ ಮಂಡಿಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 5 =
Remember me
