ವಿಜಯಪುರ:ಮುದ್ದೇಬಿಹಾಳ ಪಟ್ಟಣದಲ್ಲಿ ಇಂದು ಕಾಂಗ್ರೆಸ್​ ಮತ್ತು ಬಿಜೆಪಿ ಮುಖಂಡರು ಸಾರ್ವಜನಿಕರ ಸಮ್ಮುಖದಲ್ಲೇ ಕಿತ್ತಾಡಿಕೊಂಡಿದ್ದು, ವಿಡಿಯೋ ವೈರಲ್​ ಆಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ವಿತರಿಸುವ ಕಾರ್ಯಕ್ರಮವನ್ನು ಇಂದು(ಶುಕ್ರವಾರ) ಬೆಳಗ್ಗೆ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ವೇದಿಕೆಯಲ್ಲೇ ಕೈ-ಕಮಲ ಗಲಾಟೆ ಮಾಡಿಕೊಂಡಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿತ್ತು.ಇದನ್ನೂ ಓದಿರಿಪಟ್ಟಾಭಿಷೇಕದಲ್ಲಿ ಡಿಕೆಶಿ ಮನದಾಳ
ಕಾರ್ಯಕ್ರಮದ ವೇದಿಕೆಗೆ ಪುರಸಭೆಯ ಕಾಂಗ್ರೆಸ್ ಸದಸ್ಯರನ್ನು ಆಹ್ವಾನಿಸಿಲ್ಲ ಎಂದು ಪಕ್ಷದ ಮುಖಂಡರು ಆಕ್ರೋಶ ಹೊರಹಾಕಿದರು. ಇದೇ ವಿಚಾರವಾಗಿ ಪುರಸಭೆಯ ಕಾಂಗ್ರೆಸ್ ಸದಸ್ಯರು ಮತ್ತು ಬಿಜೆಪಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ, ಪುರಸಭೆ ಮುಖ್ಯಾಧಿಕಾರಿ ಜಿ.ಎಚ್. ಕಾಸೆ ನಡುವೆ ವಾಗ್ವಾದ ನಡೆಯಿತು.
ನೀವಿನ್ನೂ ಪುರಸಭೆಯ ಅಧಿಕೃತ ಸದಸ್ಯರೇ ಅಲ್ಲ ಎಂದು ಶಾಸಕ ನಡಹಳ್ಳಿ ಹೇಳುತ್ತಿದ್ದಂತೆ, ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಮಧ್ಯ ಪ್ರವೇಶಿಸಿದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದರು.
https://www.facebook.com/VVani4U/videos/1645114912305159/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − eighteen =
Remember me
