
ಬೆಂಗಳೂರು:ಮುಡಾ ಮತ್ತು ವಾಲ್ಮಿಕಿ ಹಗರಣ ಸೇರಿದಂತೆ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ದ ನಡೆಯಲಿರುವ ಪಾದಯಾತ್ರೆಯಲ್ಲಿ ನಾಡಿನಾದ್ಯಂತ ಜನರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭ್ರಷ್ಟಾಚಾರ ವಿರುದ್ಧ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಭ್ರಷ್ಟ ಕಾಂಗ್ರೆಸ್, ನಿರಂತರವಾಗಿ ಹಗರಣಗಳ ಸರಮಾಲೆಯಲ್ಲಿ ಸಿಲುಕಿದೆ. ಇದು ಬಡವರ ವಿರೋಧಿ, ಪರಿಶಿಷ್ಟ ಸಮುದಾಯಗಳ ವಿರೋಧಿ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎಲ್ಲ ಸಮುದಾಯಗಳಿಗೆ ಮೋಸ ಮಾಡಿದೆ. ಪರಿಶಿಷ್ಟರ ಹಣ ಲೂಟಿ ಮಾಡಿದೆ. ಬಿಜೆಪಿ- ಜೆಡಿಎಸ್ ಜೊತೆಗೂಡಿ ಸದನದ ಒಳಗೆ ಮತ್ತು ಹೊರಗೆ ಇದರ ವಿರುದ್ಧ ಹೋರಾಟ ಮಾಡಿದ್ದು, ಸರ್ಕಾರವನ್ನು ಒಂಟಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದೇವೆ ಎಂದರು.ಅಹಿಂದ ಹೆಸರಿನಿಂದ ಅಧಿಕಾರ ನಡೆಸುತ್ತಿರುವ ಈ ಸರ್ಕಾರ ಅಸಮರ್ಥವಾಗಿದ್ದು, ಅಭಿವೃದ್ಧಿಗೆ ನೀಡಿರುವ ಕೊಡುಗೆ ಶೂನ್ಯ ಎಂದು ಟೀಕಿಸಿದರು. ಸುಮ್ಮನೆ ಟೀಕೆ ಟಿಪ್ಪಣಿ ಮಾಡುವ ಬದಲುಭ್ರಷ್ಟಾಚಾರದ ನಮ್ಮ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಮೊದಲು ಉತ್ತರಿಸಲಿ ಎಂದು ಸವಾಲು ಹಾಕಿದರು.
ಸರಿಯಾದ ಕ್ರಮವಲ್ಲಕಾಂಗ್ರೆಸ್ ಸರ್ಕಾರ ಹೊಸ ಇತಿಹಾಸ ಸೃಷ್ಟಿಸಿದೆ. ಸಿಎಂ ಇಲ್ಲದೆ, ಸಚಿವ ಸಂಪುಟದ ಸಭೆ ನಡೆಸಲಾಗಿದೆ. ರಾಜ್ಯಪಾಲರ ನೋಟಿಸ್‌ಗೆ ಉತ್ತರ ಕೊಡಬೇಕಾದ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಸಂಪುಟ ನಡೆಸಿ ರಾಜ್ಯಪಾಲರನ್ನು ಪ್ರಶ್ನಿಸಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದರು.ಸಂಪುಟ ಭೆಯಲ್ಲಿ ಹಲವಾರು ಸಚಿವರ ಮುಖದಲ್ಲಿ ಮಂದಹಾಸ ಇತ್ತು. ಮುಖ್ಯಮಂತ್ರಿಗಳ ಹಿಂದೆ ಯಾರಿದ್ದಾರೆ ಎಂಬುದಕ್ಕಿಂತ ಸಿಎಂ ವಿರುದ್ಧ ಯಾರಿದ್ದಾರೆ ಎಂಬುದೂ ಗಮನಿಸತಕ್ಕ ವಿಚಾರ ಎಂದರು.ಮುಡಾದಲ್ಲಿ ಕಮಿಷನರ್ ಮೂಲಕ ಸಾವಿರಾರು ನಿವೇಶನ ಲೂಟಿ ಮಾಡಿ ಅಪಾರ ಹಣ ಮಾಡಿದ್ದಾರೆ. ಹೋರಾಟ ವ್ಯಕ್ತಿಯ ವಿರುದ್ಧ ಅಲ್ಲ. ಕೆಟ್ಟ ವ್ಯವಸ್ಥೆ ವಿರುದ್ಧ ಎಂದರು.ಕಾಂಗ್ರೆಸ್ ಸರ್ಕಾರದಲ್ಲಿ ಬಡವರು, ಪರಿಶಿಷ್ಟ ಸಮುದಾಯಕ್ಕೆ ಅನ್ಯಾಯ ಆಗಿದೆ. ಇದರ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಪಾದಯಾತ್ರೆಗೆ ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಕರ್ತರು ಬರಲಿದ್ದಾರೆ ಎಂದರು.
ಪಶ್ಚಾತಾಪದ ಯಾತ್ರೆ..ಭ್ರಷ್ಟಾಚಾರ ರಹಿತ ಆಡಳಿತ ನಡೆಸುವ ಭರವಸೆ ನೀಡಿ, ಜನರ ಕಿವಿಗೆ ಹೂ ಮುಡಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಮಾಡಲು ಹೊರಟಿರುವುದು ಪಶ್ಚಾತ್ತಾಪದ ಯಾತ್ರೆಯಾಗಿದೆ. ನಮ್ಮ ಯಾತ್ರೆ ಯಶಸ್ವಿಯಾಗಲಿ ಎಂದು ಒಂದು ದಿನ ಮುಂಚಿತವಾಗಿ ಅವರು ಈ ಆಂದೋಲನ ಹಮ್ಮಿಕೊಂಡಿದ್ದಾರೆ ಟೀಕಿಸಿದರು.ಡಿಸಿಎಂ ಡಿ.ಕೆ.ಶಿವಕುಮಾರ್ ಭ್ರಷ್ಟಾಚಾರದ ಪಿತಾಮಹ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಹಗರಣಗಳ ಸಂಬಂದ ಉತ್ತರ ಕೊಡಬೇಕಾದವರು, ಪಲಾಯನವಾದ ಮಾಡುತ್ತಿದ್ದಾರೆ ಎಂದರು.ಪಾದಯಾತ್ರೆಗೆ ಜೆಡಿಎಸ್ ಯಾವುದೇ ಷರತ್ತು ಹಾಕಿಲ್ಲ. ನಮ್ಮ ಪಾದಯಾತ್ರೆ ಯಶಸ್ವಿಯಾಗಿ ನಡೆಯಲಿದೆ. ಈ ಸರ್ಕಾರ ರಾಜ್ಯದ ಜನರಿಗೆ ಶಾಪವಾಗಿದೆ. ಪಾದಯಾತ್ರೆ ಮೂಲಕ ತೊಡೆ ತಟ್ಟಿದ್ದೇವೆ. ಅವರು ಉತ್ತರ ಕೊಡಲಿ ಎಂದು ಪ್ರಶ್ನೆಗೆ ಉತ್ತರಿಸಿದರು.
ಕೆಂಗೇರಿ ಬಳಿ ಚಾಲನೆ:ಮೈಸೂರು ಚಲೋ ಪಾದಯಾತ್ರೆಗೆ ಶನಿವಾರ ಬೆಳಿಗ್ಗೆ 8.30ಕ್ಕೆ ಕೆಂಗೇರಿ ಕೆಂಪಮ್ಮ ದೇವಸ್ಥಾನದ ಬಳಿ ಮಂಜುನಾಥ ಕನ್ವೆನ್ಷನ್ ಹಾಲ್ನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಲಿದ್ದಾರೆ ಎಂದರು.
8 ದಿನಗಳ ಪಾದಯಾತ್ರೆ ವಿವರ:ಶನಿವಾರದ ಪಾದಯಾತ್ರೆ ಸುಮಾರು 16 ಕಿಮೀ ಇದೆ. 4ರಂದು ಮಂಜುನಾಥ ಕನ್ವೆನ್ಷನ್ ಹಾಲ್ ಬಿಡದಿಯಿಂದ ಆರಂಭಗೊಂಡು 22 ಕಿಮೀ, 5ರಂದು ಕೆಂಗಲ್ ಕೆವಿಕೆ ಕನ್ವೆನ್ಷನ್ ಹಾಲ್ ನಿಂದ ಆರಂಭವಾಗಿ ಸುಮಾರು 20 ಕಿಮೀ ಸಾಗಲಿದೆ. 6ರಂದು ನಿಡಘಟ್ಟ ಸುಮಿತ್ರಾದೇವಿ ಕನ್ವೆನ್ಷನ್ ಹಾಲ್ ನಿಂದ 20 ಕಿಮೀ ಸಾಗಲಿದೆ. 7ರಂದು ಮಂಡ್ಯ ಶಶಿಕಿರಣ್ ಕನ್ವೆನ್ಷನ್‌ಹಾಲ್ ನಿಂದ 16 ಕಿಮೀ, 8ರಂದು ತೂಬಿನಕೆರೆ ಕೈಗಾರಿಕಾ ಪ್ರದೇಶದಿಂದ, 9ರಂದು ಶ್ರೀರಂಗಪಟ್ಟಣ ಮಂಜುನಾಥ ಕಲ್ಯಾಣಮಂಟಪದಿಂದ ಆರಂಭವಾಗಲಿದ್ದು, 10ರಂದು ಮೈಸೂರಿನಲ್ಲಿ ಸಮಾರೋಪ ನಡೆಯಲಿದೆ ಎಂದರು.ಪಾದಯಾತ್ರೆಯಲ್ಲಿ ಪ್ರತಿದಿನ ಕನಿಷ್ಠ 8 ರಿಂದ 10 ಸಾವಿರ ಜನರು ಪಾಲ್ಗೊಳ್ಳುತ್ತಾರೆ. ರಾಜ್ಯದ ಎಲ್ಲೆಡೆಯಿಂದ ಕಾರ್ಯಕರ್ತರು ಬರಲಿದ್ದಾರೆ. ಇದರ ರೂಟ್ ಮ್ಯಾಪ್ ಸಿದ್ಧಗೊಂಡಿದೆ ಎಂದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್, ರಾಜ್ಯ ಕಾರ್ಯದರ್ಶಿ ಡಿ.ಎಸ್.ಅರುಣ್, ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − six =
Remember me
