ಬೆಂಗಳೂರು:ಪ್ರತಿಪಕ್ಷ ಕಾಂಗ್ರೆಸ್​ಗೆ ಮಾತನಾಡಲು, ಚರ್ಚಿಸಲು ಬೇರೆ ವಿಷಯಗಳಿಲ್ಲ. ಹೀಗಾಗಿ ರೌಡಿ ರಾಜಕೀಯ ಪ್ರಸ್ತಾಪಿಸಿ ಬಿಜೆಪಿ ಮೇಲೆ ಕೆಸರೆರಚಲು ಪ್ರಯತ್ನಿಸುತ್ತಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ವ್ಯಂಗ್ಯವಾಡಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗಾರರಿಗೆ‌ ಶನಿವಾರ ಪ್ರತಿಕ್ರಿಯಿಸಿದ ಅವರು, ರೌಡಿಗಳು ಅಥವಾ ಅಪರಾಧ ಹಿನ್ನೆಲೆ ಉಳ್ಳವರಿಗೆ ಸೇರಲು ಪಕ್ಷ ಯಾವುದೇ ಕಾರಣಕ್ಕೂ‌ ಅವಕಾಶ ನೀಡದು. ಈ ವಿಷಯದಲ್ಲಿ ಪಕ್ಷದ ರಾಜ್ಯಾಧ್ಯಕ್ಷರು ಪಕ್ಷದ ನಿಲುವೇನೆಂದು ಸ್ಪಷ್ಟಪಡಿಸಿದ್ದಾರೆ.
ಕೇಂದ್ರೀಯ ಸಮಿತಿ ನಿರ್ಧಾರರಾಜ್ಯದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಆಯ್ಕೆ ಮಾಡುತ್ತದೆ. ಗುಜರಾತ್ ಮಾದರಿಯೋ ಅಥವಾ ಬೇರೆ ಯಾವುದೋ ಮಾದರಿಯೋ ಎನ್ನುವುದೆಲ್ಲ ಕೇಂದ್ರೀಯ ಸಮಿತಿಗೆ ಬಿಟ್ಟದ್ದು ಎಂದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಮಾಜಿ‌ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಜನಸಂಕಲ್ಪ ಯಾತ್ರೆಗೆ ಭರ್ಜರಿ ಸ್ಪಂದನೆ ದೊರೆಯುತ್ತಿದೆ. ಎರಡೂ ಮೋರ್ಚಾಗಳ ಸಮಾವೇಶದಲ್ಲಿ ಜನರು ಭಾರಿ ಪ್ರಮಾಣದಲ್ಲಿ ನೆರೆದಿದ್ದರು. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಜನರು ಬಯಸಿದ್ದು, 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ನಿಶ್ಚಿತವೆಂದು ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.
ಚಿರತೆ ದಾಳಿ ತಡೆಗೆ ವಿಶೇಷ ತಂಡ ರಚನೆ; ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿಕೆ

ಪ್ರವಾಹದ ಜತೆಗೆ ಕಸ-ಕಡ್ಡಿ ಬರೋದು ಸಹಜ: ರೌಡಿ ರಾಜಕೀಯ ಕುರಿತು ಸಿಟಿ ರವಿ ವ್ಯಾಖ್ಯಾನ

ಕಿಲಾಡಿ ಲೇಡಿಯ ರಹಸ್ಯ ಆಧಾರ್​ ಕಾರ್ಡ್​ನಿಂದ ಬಯಲು​: ಅನಾಥೆ ಅಂತಾ ಅನುಕಂಪ ತೋರಿಸಿದ್ರೆ ಹೀಗ್​ ಮಾಡೋದಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
