ಬೆಂಗಳೂರು:ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯವನ್ನು ಸೋಲಿಸುವ ಸಲುವಾಗಿ ಒಗ್ಗಟ್ಟು ಪ್ರದರ್ಶಿಸಲು ನಿರ್ಧರಿಸಿರುವ ಬಿಜೆಪಿ ಶಾಸ ಕಾಂಗ ಪಕ್ಷದ ಸಭೆ, ಶಾಸಕರಿಗೆ ವಿಪ್ ಜಾರಿ ಮಾಡಿದೆ.
ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್​ನ ಅವಿಶ್ವಾಸ ನಿರ್ಣಯ, ಕ್ಷೇತ್ರದ ಅಭಿವೃದ್ಧಿ, ಮುಂಬರುವ ಉಪಚುನಾವಣೆ ಸೇರಿ ವಿವಿಧ ವಿಚಾರಗಳ ಬಗ್ಗೆ ಸುಮಾರು 3 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಲಾಯಿತು.
ರಾಜ್ಯ ಸರ್ಕಾರದ ವಿರುದ್ಧ ರ್ಚಚಿಸಲು ವಿಷಯಗಳೇ ಇಲ್ಲದೆ ಕಾಂಗ್ರೆಸ್ ಅವಿಶ್ವಾಸ ಮಂಡಿಸಿದೆ. ಶನಿವಾರ ಚರ್ಚೆಗೆ ಬರಲಿದ್ದು, ಮತಕ್ಕೆ ಹಾಕಿದಾಗ ಅದಕ್ಕೆ ಸೋಲಾಗಬೇಕು. ಆದ್ದರಿಂದ ಪಕ್ಷದ ಎಲ್ಲ ಶಾಸಕರು ಇಡೀ ದಿನ ಸದನದ ಕಲಾಪಕ್ಕೆ ಹಾಜರಾಗಬೇಕೆಂದು ಸೂಚನೆ ನೀಡಲಾಯಿತು. ಸಿಎಂ ಯಡಿಯೂರಪ್ಪ ಕರೊನಾ ಸಂಕಷ್ಟದ ಕಾಲದಲ್ಲಿಯೂ ಯಾವುದೇ ಲೋಪಕ್ಕೆ ಅವಕಾಶ ನೀಡಿಲ್ಲ. ಆದರೂ ಆರೋಪಗಳು ಬರುತ್ತಿವೆ. ಇದಕ್ಕೆಲ್ಲ ಎದೆಗುಂದುವ ಪ್ರಶ್ನೆಯೇ ಇಲ್ಲವೆಂದು ಹೇಳಿದರೆಂದು ಗೊತ್ತಾಗಿದೆ. ಕೆಲ ಶಾಸಕರು ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಆಗದಿರುವ ಬಗ್ಗೆ, ಕೊಟ್ಟ ಅನುದಾನ ಹಿಂಪಡೆದಿರುವ ಹಾಗೂ ಅಧಿಕಾರಿಗಳ ವರ್ಗಾವಣೆಯಲ್ಲಿ ಶಾಸಕರ ಮಾತಿಗೆ ಬೆಲೆ ಸಿಗದಿರುವ ಬಗ್ಗೆ ಪ್ರಸ್ತಾಪಿಸಿ ಅಸಮಾಧಾನ ವ್ಯಕ್ತಪಡಿಸಿದರೆಂದು ಹೇಳಲಾಗಿದೆ. ಕರೊನಾದಿಂದ ಆರ್ಥಿಕ ಸಂಕಷ್ಟ ಎದುರಾಗಿದೆ. ಇದೀಗ ವ್ಯಾಪಾರ ವಹಿವಾಟು ಚೇತರಿಸಿಕೊಳ್ಳುತ್ತಿದೆ. ಜಿಎಸ್​ಟಿ ಪರಿಹಾರ ಸಹ ಕೇಂದ್ರದಿಂದ ಬಂದಿಲ್ಲ. ಸಾಲ ಮಾಡಲು ಅನುಮತಿ ಸಿಕ್ಕಿದೆ. ಸಾಲ ಪಡೆಯುವ ಹಣವನ್ನು ಅಭಿವೃದ್ಧಿಗೆ ಬಳಸಲು ನಿರ್ಧರಿಸಲಾಗಿದೆ. ಸ್ವಲ್ಪ ದಿನ ಸಹಿಸಿಕೊಳ್ಳಿ ಎಂದು ಸಿಎಂ ಮನವಿ ಮಾಡಿದರೆನ್ನಲಾಗಿದೆ.
ಬಹಿರಂಗ ಚರ್ಚೆ ಬೇಡ
ನಾಯಕತ್ವ ಹಾಗೂ ಇತರ ವಿಚಾರಗಳಲ್ಲಿ ಬಿಜೆಪಿ ಶಾಸಕರೇ ಬಹಿರಂಗವಾಗಿ ಮಾತನಾಡುವುದು, ಸಭೆ ಸೇರುವುದು ನಡೆಯುತ್ತಿದೆ. ವದಂತಿಗಳಿಗೆ ಅವಕಾಶ ಕೊಡಬೇಡಿ, ಬಹಿರಂಗವಾಗಿ ಯಾವುದೇ ಹೇಳಿಕೆ ನೀಡದಿರುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು. ಕೇಂದ್ರ ಸರ್ಕಾರ ತಂದಿರುವ ಕೃಷಿ ಹಾಗೂ ಕಾರ್ವಿುಕ ಮಸೂದೆಗಳು, ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ಭೂಸುಧಾರಣೆ ತಿದ್ದುಪಡಿ ಹಾಗೂ ಎಪಿಎಂಸಿ ತಿದ್ದುಪಡಿ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕೆಂದು ಚರ್ಚೆ ನಡೆಸಲಾಯಿತು. ಶಿರಾ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳು ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಯಾವುದೇ ಸಂದರ್ಭದಲ್ಲಿ ಚುನಾವಣೆ ಬರಬಹುದು. ಎಲ್ಲ ಶಾಸಕರು ಒಗ್ಗಟ್ಟಿನಿಂದ ಎದುರಿಸುವಂತೆ ಸೂಚಿಸಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
