ಪೀಣ್ಯದಾಸರಹಳ್ಳಿ:ರಾಜ್ಯದಲ್ಲಿ ಬಲವಾಗಿ ಬೀಸುತ್ತಿರುವ ಅಡಳಿತ ವಿರೋಧಿ ಅಲೆಯಿಂದ ಬಿಜೆಪಿ ಧೂಳಿಪಟವಾಗಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ ಎಂದು ದಾಸರಹಳ್ಳಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದಾಸರಹಳ್ಳಿ ಧನಂಜಯ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಾಸರಹಳ್ಳಿ ಕ್ಷೇತ್ರದ ಸುಂಕದಕಟ್ಟೆಯಿಂದ ಮಲ್ಲಸಂದ್ರ ವಾರ್ಡ್, ದಾಸರಹಳ್ಳಿ ಮತ್ತು ಹಲವು ಕಡೆಗಳಲ್ಲಿ ಗುರುವಾರ ಮತಯಾಚಿಸಿ ಮಾತನಾಡಿದರು. ಕ್ಷೇತ್ರದ ಅಭಿವೃದ್ಧಿಗೆ ನನ್ನದೇ ಆದ ಕನಸಿದೆ. ವಸತಿ, ಅರೋಗ್ಯ, ಶಿಕ್ಷಣ, ಉದ್ಯೋಗ, ಅರ್ಥಿಕ ಸ್ಥಿತಿ ಹಾಗೂ ಸರ್ವರ ಅಭಿವೃದ್ಧಿಗೆ ಕಾಂಗ್ರೆಸ್​ನಿಂದ ಸ್ಪರ್ಧಿಸಿದ್ದೇನೆ. ಜನತೆಯ ಸೇವೆ ಮಾಡಲು ಒಂದು ಬಾರಿ ನನಗೆ ಅವಕಾಶ ಕೊಡಿ ಎಂದು ಮನವಿ ಮಾಡಿದರು.
ಇದನ್ನೂ ಓದಿ:ಯಶವಂತಪುರ ನಂ.1 ಕ್ಷೇತ್ರವಾಗಿಸುವೆ: ಬಿಜೆಪಿ ಅಭ್ಯರ್ಥಿ ಎಸ್.ಟಿ. ಸೋಮಶೇಖರ್ ಹೇಳಿಕೆ
ಕ್ಷೇತ್ರದಲ್ಲಿರುವ ಮಧ್ಯಮ ವರ್ಗದವರಿಗಾಗಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಮಲ್ಟಿ ಸ್ಪೆಷಾಲಿಟಿ ಅಸ್ಪತ್ರೆ ನಿರ್ಮಾಣ, ಈಗಿರುವ ಸರ್ಕಾರಿ ಶಾಲೆ- ಕಾಲೇಜುಗಳಲ್ಲಿ ಖಾಸಗಿ ಶಾಲೆಗಳಿಗಿಂತ ಗುಣಮಟ್ಟದ ಶಿಕ್ಷಣ, ಉಚಿತ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಗಳು, ಸರ್ಕಾರಿ ಕಾಲೇಜುಗಳಲ್ಲಿ ನೀಟ್, ಜೆಇಇ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವ ತರಬೇತಿ ಕೇಂದ್ರಗಳ ಸ್ಥಾಪನೆ, ಕ್ಷೇತ್ರದಲ್ಲಿ ಗುಂಡಿಮುಕ್ತ ರಸ್ತೆಗಳನ್ನು ಮಾಡಿ ಮೇಲ್ದರ್ಜೆಗೆ ಏರಿಸುವುದು, ಉದ್ಯಾನ, ಆಟದಮೈದಾನ ಸೇರಿ ಮೂಲಸೌಕರ್ಯಗಳಿಗೆ ಒತ್ತು ನನ್ನ ಮೊದಲ ಗುರಿಯಾಗಿದೆ ಎಂದರು.
ಮಾಜಿ ನಗರಸಭಾ ಸದಸ್ಯ ಕೆ.ಸಿ. ಅಶೋಕ್, ಹಾಗೂ ಬಿಬಿಎಂಪಿ ಮಾಜಿ ಸದಸ್ಯ ಕೆ. ನಾಗಭೂಷಣ್, ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಡಾ. ಎಸ್ ಮಂಜುನಾಥ್, ಬ್ಲಾಕ್ ಅಧ್ಯಕ್ಷರು, ವಾರ್ಡ್ ಅಧ್ಯಕ್ಷರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕೈ ಅಭ್ಯರ್ಥಿ ದಾಸರಹಳ್ಳಿ ಧನಂಜಯ್​ ಪರ ಒಲವು

ಆರ್​ಎಂಸಿ ಯಾರ್ಡ್​ನಲ್ಲಿ ಕೆ.ಗೋಪಾಲಯ್ಯ ಪ್ರಚಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
