ಹುಬ್ಬಳ್ಳಿ:ಮಹದಾಯಿ ವಿಚಾರದಲ್ಲಿ ರಾಜ್ಯ ಸರ್ಕಾರದವರು ಪ್ರಧಾನಿ ಬಳಿ ನಿಯೋಗ ಬರುವುದಾದರೆ ಮುಕ್ತ ಸ್ವಾಗತ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಇದನ್ನೂ ಓದಿ;ತುಮಕೂರು: ಗೌರಿ ಹಬ್ಬಕ್ಕೆ ಪೂಜೆಗೆ ತೆರಳಿದ್ದ ವೇಳೆ ಹಾವು ಕಡಿದು ಬಾಲಕಿ ಸಾವು
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ನಿಯೋಗ ಬರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಬಂದರೆ ಸ್ವಾಗತಿಸುತ್ತೇವೆ ಎಂದು ಪ್ರತಿಕ್ರಿಯಿಸಿದರು. ಮಹದಾಯಿ ವಿಚಾರದಲ್ಲಿ ಸರ್ವ ರೀತಿಯಲ್ಲೂ ರಾಜ್ಯಕ್ಕೆ ಸಹಾಯ ಮಾಡಲು ಕೇಂದ್ರ ಸಿದ್ಧವಿದೆ. ಸಚಿವ ಭೂಪೇಂದ್ರ ಯಾದವ್ ಅವರೊಂದಿಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಕಾಂಗ್ರೆಸ್ ಏನು ಮಾಡಿಲ್ಲ: ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಏನು ಪ್ರಯತ್ನ ಮಾಡಿಲ್ಲ. ರಾಜ್ಯದಲ್ಲಿ, ಗೋವಾದಲ್ಲಿ ಕಾಂಗ್ರೆಸ್ ಸರ್ಕಾರವೇ ಇದ್ದಾಗಲೂ ಕಾಂಗ್ರೆಸ್ ನವರು ಏನೂ ಮಾಡಿಲ್ಲ.
ಬಿಜೆಪಿ ಸರ್ಕಾರದ ಅವಧಿಯಲ್ಲೇ ಎಲ್ಲಾ ಆಗಿದ್ದು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಹದಾಯಿಗೆ ಪ್ರಯತ್ನ ನಡೆದದ್ದು, ನ್ಯಾಯಾಧಿಕರಣ, ಕಚೇರಿ, ಸಿಬ್ಬಂದಿ ನೇಮಕ, ಗೆಜೆಟ್ ನೊಟಿಫಿಕೇಷನ್, ಡಿಪಿಆರ್ ಅನುಮೋದನೆ ಹೀಗೆ ಪ್ರತಿಯೊಂದೂ ಬಿಜೆಪಿ ಅವಧಿಯಲ್ಲೇ ಆಗಿದೆ ಎಂದು ಹೇಳಿದರು.ಮಹದಾಯಿ ಅರಣ್ಯ ಭೂಮಿ ವ್ಯಾಪ್ತಿಯಲ್ಲಿ ಬರುವುದರಿಂದ ಈಗ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಅನುಮತಿ ಬೇಕಿದ್ದು, ಇದಕ್ಕಾಗಿ ಪ್ರಯತ್ನ ನಡೆದಿದೆ ಎಂದು ಸಚಿವ ಜೋಶಿ ತಿಳಿಸಿದರು.
2026ರ ಅಂತ್ಯಕ್ಕೆ ಎತ್ತಿನಹೊಳೆ ಯೋಜನೆಯ ಕಾಮಗಾರಿ ಪೂರ್ಣ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 1 =
Remember me
