ಬೆಂಗಳೂರು:ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಅವರು ಭಾನುವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರನ್ನು ಭೇಟಿ ಮಾಡಿ ಪಕ್ಷದ ಚಟುವಟಿಕೆ ಕುರಿತು ವಿವರಣೆ ನೀಡಿದ್ದಾರೆ.
ರಾಜ್ಯದ ಪ್ರಸ್ತುತ ರಾಜಕೀಯ ಬೆಳವಣಿಗೆಗಳು, ಸದಸ್ಯತ್ವ ಅಭಿಯಾನ, ಪಕ್ಷ ಸಂಘಟನೆ ಸೇರಿ ವಿವಿಧ ವಿಚಾರಗಳ ಬಗ್ಗೆ ವೇಣುಗೋಪಾಲ್ ಮಾಹಿತಿ ಪಡೆದುಕೊಂಡಿದ್ದಾರೆ.
ಮಾರ್ಚ್ ಅಂತ್ಯದೊಳಗೆ ಪಕ್ಷದ ಸದಸ್ಯತ್ವ ಅಭಿಯಾನ ಮುಗಿಯಬೇಕಿದ್ದು, ರಾಜ್ಯದಲ್ಲಿ 50 ಲಕ್ಷ ಸದಸ್ಯತ್ವದ ಗುರಿ ಹಾಕಿಕೊಂಡಿದ್ದು, ವ್ಯವಸ್ಥಿತ ಅಭಿಯಾನಕ್ಕೆ ಮಾಡಿರುವ ಯೋಜನೆ ಬಗ್ಗೆ ಸಲೀಂ ವಿವರಿಸಿದ್ದಾರೆ. ಜತೆಗೆ ಮೇಕೆದಾಟು ಪಾದಯಾತ್ರೆಯ ಬೆಳವಣಿಗೆಗಳು, ಅದನ್ನು ಮುಂದುವರಿಸುವುದು ಮತ್ತು ಮಹದಾಯಿ ವಿಚಾರದಲ್ಲಿ ಪಾದಯಾತ್ರೆ ಕೈಗೊಳ್ಳುವ ಬಗ್ಗೆ ಈ ವೇಳೆ ವಿಚಾರ ವಿನಿಮಯ ನಡೆದಿದೆ.
ಗೋವಾದಲ್ಲಿ ರಾಜ್ಯ ಕೈ ನಾಯಕರ ಕಾರ್ಯಾಚರಣೆ; ಅಧಿಕಾರ ಹಿಡಿಯಲೇಬೇಕೆಂಬ ಹಠ..

ಪ್ರಧಾನಿಗೇ ನೇರ ತಲುಪಿತು ಧರ್ಮಸ್ಥಳದ ಪ್ರಸಾದ; ಶಾಸಕರು ಮೋದಿಗೆ ನೀಡಿದರು ಸ್ವರ್ಣಖಚಿತ ಸ್ಫಟಿಕ ರುದ್ರಾಕ್ಷಿ ಹಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
