ಬೆಂಗಳೂರು:ತೀವ್ರ ಹೃದಯಾಘಾತದಿಂದ ಕಾಂಗ್ರೆಸ್​ನ ಮಾಜಿ ಶಾಸಕ ವೆಂಕಟಸ್ವಾಮಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ.
ಮೂರನೇ ಬಾರಿ ವಿಫಲವೆಂಕಟಸ್ವಾಮಿ ಅವರಿಗೆ ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ಎದೆನೋವು ಬಂದಿತ್ತು. ಕಳೆದ ಎರಡು ಬಾರಿ ಆಸ್ವತ್ರೆಗೆ ಸೇರಿಸಿ ಕುಟುಂಬಸ್ಥರು ಚಿಕಿತ್ಸೆ ಕೊಡಿಸಿದ್ದರು. ಇದೀಗ ಮೂರನೇ ಬಾರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಕೈತಪ್ಪಿದ ಕಾಂಗ್ರೆಸ್​ ಟಿಕೆಟ್​ಮಾಜಿ ಶಾಸಕ ವೆಂಕಟಸ್ವಾಮಿ ಅವರು ಇಬ್ಬರು ಮಕ್ಕಳು ಮತ್ತು ಪತ್ನಿಯನ್ನು ಅಗಲಿದ್ದಾರೆ. ಈ‌ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್​ ಟಿಕೇಟ್ ಸಿಗುತ್ತದೆ ಅಂತ ಕ್ಷೇತ್ರದಲ್ಲಿ ಭರ್ಜರಿ ಮತಬೇಟೆ ನಡೆಸಿದ್ದರು. ಆದರೆ, ಟಿಕೆಟ್ ಕೈ ತಪ್ಪಿದ ಕಾರಣ ಬೇಸರಗೊಂಡಿದ್ದರು. ಆದರೂ ಪಕ್ಷದ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.
ಇದನ್ನೂ ಓದಿ:ಬಿಜೆಪಿಗೇ ಗಡುವು ಕೊಟ್ಟ ಶೆಟ್ಟರ್​; ಶನಿವಾರ 11 ಗಂಟೆ ಒಳಗೆ ಪಟ್ಟಿ ಬಿಡುಗಡೆ ಮಾಡದಿದ್ದರೆ ಅಭಿಮಾನಿಗಳ ಸಭೆ ನಡೆಸಿ ತೀರ್ಮಾನ
ಸಾದಹಳ್ಳಿಯ ಮನೆ ಬಳಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾದಹಳ್ಳಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಹಲವು ಕೈ ನಾಯಕರು ಅಂತಿಮ ದರ್ಶನಕ್ಕೆ ಆಗಮಿಸುವ ಸಾಧ್ಯತೆ ಇದೆ.
ಅಂದಹಾಗೆ ವೆಂಕಟಸ್ವಾಮಿ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದರು. ಕುಟುಂಬದ ಹಿರಿಯನನ್ನು ಕಳೆದುಕೊಂಡಿರುವ ಕುಟುಂಬ ದುಃಖ ಸಾಗರದಲ್ಲಿ ಮುಳುಗಿದೆ. (ದಿಗ್ವಿಜಯ ನ್ಯೂಸ್​)
ಸೌಂದರ್ಯದ ಗಣಿ ಹನಿ ರೋಸ್​ಗೆ ಸಿನಿಮಾ ಅವಕಾಶಗಳು ಕಡಿಮೆ ಏಕೆ? ಇಲ್ಲಿದೆ ಅಚ್ಚರಿಯ ಕಾರಣ…

ಮದುವೆಗೂ ಮುನ್ನ ನಟನೊಂದಿಗೆ ಸಂಬಂಧ: ಖುಷ್ಬೂ ಬಗ್ಗೆ ಶಾಕಿಂಗ್​ ಕಾಮೆಂಟ್​ ಮಾಡಿದ ತೆಲುಗು ನಟಿ

ಮಹಿಳೆಯರ ಖಾಸಗಿ ಅಂಗಗಳ ಬಗ್ಗೆ ಮಾತಾಡಿದ್ರೆ ಗುಂಡು ಹಾರಿಸುತ್ತೇನೆಂದ ನಟಿ ರಾಧಿಕಾ ಆಪ್ಟೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 11 =
Remember me
