ಬೆಳಗಾವಿ: ರಾಜ್ಯದಲ್ಲಿ ‌ಮತ್ತೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು 10 ಕೆ.ಜಿ ಅಕ್ಕಿ, 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಕಾಂಗ್ರೆಸ್ ನಾಯಕರು ಘೋಷಣೆ ಮಾಡಿದ್ದಾರೆ.
ಬೆಳಗಾವಿ ಆಟೋ ನಗರದ ಅಂಜುಮನ್ ಮೈದಾನದಲ್ಲಿ ಬುಧವಾರ ಬೆಳಗಾವಿ ನಗರ ಮತ್ತು ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ‘ಪ್ರಜಾ ಧ್ವನಿ‘ ಸಮಾವೇಶದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು‌ ಉಚಿತ ಕೊಡುಗೆಗಳ ಮೂಲಕ ಜನರನ್ನು ಸೆಳೆಯಲು ಕೊಡುಗೆಗಳನ್ನು ಘೋಷಣೆ ಮಾಡಿದರು.
ಕತ್ತಲೆಯಿಂದ ಬೆಳಕಿನೆಡೆಗೆ ಸಾಗಲಿ ಕರ್ನಾಟಕ, ಇದು ಕಾಂಗ್ರೆಸ್‌ನ ಸದಾಶಯ.2022ರ ಒಂದೇ ವರ್ಷದ ಅವಧಿಯಲ್ಲಿ ಮೂರು ಬಾರಿ ವಿದ್ಯುತ್ ದರ ಏರಿಕೆ ಮಾಡಿದ ಬಿಜೆಪಿ ಸರ್ಕಾರ 4 ವರ್ಷದಲ್ಲಿ 8ಕ್ಕೂ ಹೆಚ್ಚು ಬಾರಿ ದರ ಏರಿಸಿದೆ.ಮುಂದಿನ ಕಾಂಗ್ರೆಸ್ ಸರ್ಕಾರ ಜನರ ಬದುಕಿಗೆ ಬೆಳಕಾಗಲಿದೆ.#GruhaJyothi#PrajaDhwaniYatrepic.twitter.com/gEC7u7iHkQ— Karnataka Congress (@INCKarnataka)January 11, 2023
ಕತ್ತಲೆಯಿಂದ ಬೆಳಕಿನೆಡೆಗೆ ಸಾಗಲಿ ಕರ್ನಾಟಕ, ಇದು ಕಾಂಗ್ರೆಸ್‌ನ ಸದಾಶಯ.2022ರ ಒಂದೇ ವರ್ಷದ ಅವಧಿಯಲ್ಲಿ ಮೂರು ಬಾರಿ ವಿದ್ಯುತ್ ದರ ಏರಿಕೆ ಮಾಡಿದ ಬಿಜೆಪಿ ಸರ್ಕಾರ 4 ವರ್ಷದಲ್ಲಿ 8ಕ್ಕೂ ಹೆಚ್ಚು ಬಾರಿ ದರ ಏರಿಸಿದೆ.ಮುಂದಿನ ಕಾಂಗ್ರೆಸ್ ಸರ್ಕಾರ ಜನರ ಬದುಕಿಗೆ ಬೆಳಕಾಗಲಿದೆ.#GruhaJyothi#PrajaDhwaniYatrepic.twitter.com/gEC7u7iHkQ
ಸಮಾವೇಶದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೆಳಗಾವಿ ಗ್ರಾಮೀಣ, ಕಿತ್ತೂರು, ಖಾನಾಪುರ, ಬೈಲಹೊಂಗಲ, ಸವದತ್ತಿ, ರಾಮದುರ್ಗ, ಗೋಕಾಕ ಸೇರಿ ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ಆಗಮಿಸಿದ ಸುಮಾರು 30 ಸಾವಿರಕ್ಕೂ ಅಧಿಕ ಜನರ ಭಾಗವಹಿಸಿದ್ದರು.
ಇದೇ ವೇಳೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡುತ್ತಾ, ಪ್ರಜಾ ಧ್ವನಿ ಕಾಂಗ್ರೆಸ್ ಧ್ವನಿ ಅಲ್ಲ. ಅದು 7 ಕೋಟಿ ಕನ್ನಡಿಗರ ಧ್ವನಿ. ಜನರ ಸಮಸ್ಯೆಗಳನ್ನು ಆಲಿಸಲು, ಬಿಜೆಪಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ, ಜನವಿರೋಧಿ ನಿತಿಗಳನ್ನು ಜನರ ಮುಂದಿಡಲು ಪ್ರಜಾ ಧ್ವನಿ ಬಸ್ ಯಾತ್ರೆ ಹಮ್ಮಿಕೊಂಡಿದ್ದೇವೆ. ಇಂತಹ ಭ್ರಷ್ಟ ಬಿಜೆಪಿ ಸರ್ಕಾರ ಯಾವತ್ತು ಅಧಿಕಾರಕ್ಕೆ ಬರಬಾರದು. ಹೀಗಾಗಿ 2023 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ನಮ್ಮ ಸರ್ಕಾರ ಬಂದರೆ ಬಡವರಿಗೆ 10 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುವುದು ಎಂದು ಘೋಷಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, ಕಾಂಗ್ರೆಸ್ 130 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೆ‌ಬರಲಿದೆ. ‌ಬಳಿಕ ಎಲ್ಲ ವರ್ಗದ ಜನರಿಗೆ ಪ್ರತಿ ತಿಂಗಳು 200 ಯುನಿಟ್ ವಿದ್ಯುತ್ ನೀಡಲಾಗುವುದು. ಇದರಿಂದ ಪ್ರತಿ ಕುಟುಂಬಕ್ಕೆ ಮಾಸಿಕ 1000 ರೂ. ಉಳಿತಾಯವಾಗಲಿದೆ ಎಂದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + three =
Remember me
