ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಮಂತ್ರಿಗಳು ನನ್ನ ಹೆದರಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆಲ್ಲ ಜಗ್ಗುವ ಜಾಯಮಾನ ನನ್ನದಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಮಾಧ್ಯಮಗಳ ಜತೆ ಮಾತನಾಡಿದ ಅವರು, ಯಾವುದೋ ಹಳೆಯ ಪ್ರಕರಣವನ್ನು ಕೆದಕಿ, ಸುಪ್ರೀಂ ಕೋರ್ಟ್‌ನಲ್ಲಿರುವ ಪ್ರಕರಣ ಇಟ್ಟುಕೊಂಡು ರಾಜ್ಯಪಾಲರನ್ನು ಅಪಮಾನಿಸುವ, ನನ್ನನ್ನು ಬ್ಲಾಕ್ ಮೇಲ್ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆಲ್ಲ ಕೇರ್ ಮಾಡುವ ಪೈಕಿ ನಾನಲ್ಲ, ಈ ಸರ್ಕಾರಕ್ಕೂ ಅದು ಗೊತ್ತಿದೆ ಎಂದು ಕಿಡಿಕಾರಿದರು.
ರಾಜ್ಯಪಾಲರು ಮೂಡಾ ಹಗರಣ ವಿಚಾರಣೆಗೆ ಅನುಮತಿ ನೀಡಿದಾಕ್ಷಣ ಇಡೀ ಸಚಿವರು, ಶಾಸಕರನ್ನು ಇಟ್ಟುಕೊಂಡು ರಾಜ್ಯಪಾಲರಿಗೆ ಧಮ್ಕಿ ಹಾಕುವ, ಜನರನ್ನು ಎತ್ತಿ ಕಟ್ಟುವ ಕೆಲಸವನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ನಾನು ಹೀಗೆಲ್ಲ ಮಾಡಿಲ್ಲ, ನನ್ನ ವಿರುದ್ಧ ಆರೋಪ ಕೇಳಿಬಂದಾಗ ಒಬ್ಬನೇ ಎದುರಿಸುತ್ತೇನೆ ಎಂದರು.ನನ್ನ ವಿರುದ್ಧ 2006ರಲ್ಲಿ ಗಣಿ ಆರೋಪ ಮಾಡಿದಾಗ ನಾನೊಬ್ಬನೇ ಎದುರಿಸಿದೆ. ಶಾಸಕರು, ಸಚಿವರನ್ನು ಅಡ್ಡ ಇಟ್ಟುಕೊಂಡು ರಕ್ಷಣೆ ಪಡೆಯುವ ಕೆಲಸ ಮಾಡಲಿಲ್ಲ. ಹೇಡಿತನ ಪ್ರದರ್ಶಿಸಲಿಲ್ಲ, ಧೈರ್ಯವಾಗಿ ಒಬ್ಬನೇ ಎದುರಿಸಿದೆ ಎಂದು ಹೇಳಿದರು.
ಲೋಕಸಭೆಯಲ್ಲಿ ಪಕ್ಷದ ಸಂಸದರಿಗೆ ಕೈಗೆ ಸಂವಿಧಾನದ ಪ್ರತಿ ಕೊಟ್ಟು ಪ್ರಮಾಣ ಸ್ವೀಕಾರ ಮಾಡಿಸುವ ಕಾಂಗ್ರೆಸ್, ಕರ್ನಾಟಕದಲ್ಲಿ ಮಾತ್ರ ರಾಜ್ಯದ ಸಾಂವಿಧಾನಿಕ ಮುಖ್ಯಸ್ಥರಾಗಿರುವ ರಾಜ್ಯಪಾಲರ ವಿರುದ್ಧ ಅತ್ಯಂತ ಕೆಟ್ಟದಾಗಿ, ಅವಹೇಳನಕಾರಿಯಾಗಿ ಪ್ರತಿಭಟನೆ ಮಾಡಿಸುತ್ತಿದೆ. ಬೇರೆ ಯಾವ ರಾಜ್ಯದಲ್ಲಿ ಇಂಥ ಕೆಟ್ಟ ಪರಿಸ್ಥಿತಿಯನ್ನು ನಾನು ನೋಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲರೂ ಕುಮಾರಸ್ವಾಮಿ ಮೇಲೆ ಏಕೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿಲ್ಲ ಎಂದು ಕೇಳುತ್ತಿದ್ದಾರೆ. ಜಂತಕಲ್ ಮೈನಿಂಗ್ ಪ್ರಕರಣವನ್ನು ಹೈಕೋರ್ಟ್‌ನಲ್ಲಿ ವಜಾ ಮಾಡಲಾಗಿದೆ. ಸಾಯಿ ವೆಂಕಟೇಶ್ವರ ಹಗರಣದ್ದು ತನಿಖೆ ಮಾಡಿ ಎಂದರು. ಇವರು ಬೇಕಾದರೆ ಸುಪ್ರೀಂ ಕೋರ್ಟ್‌ಗೆ ಹೋಗಬಹುದು. ಇವರಿಗೆ ಬೇಡ ಎಂದವರು ಯಾರು? ಎಂದು ಪ್ರಶ್ನಿಸಿದರು.
ಯಾರೋ ಒಬ್ಬರು ಸಿದ್ದರಾಮಯ್ಯನವರ ಜತೆ ಬಂಡೆಯಂತೆ ನಿಲ್ಲುವೆ ಎಂದು ಸೋಗು ಹಾಕುತ್ತಿದ್ದಾರೆ. ಆ ಬಂಡೆಯಿಂದಲೇ ಸಿದ್ದರಾಮಯ್ಯ ಅವರಿಗೆ ಡೇಂಜರ್. ಆ ಬಂಡೆಯಿಂದಲೇ ಸಿದ್ದರಾಮಯ್ಯ ಅವರಿಗೆ ಈ ಗತಿ ಬಂದಿದೆ ಎಂದು ಮಾರ್ಮಿಕವಾಗಿ ಹೇಳಿದರು.
ದೇವೇಗೌಡರು, ಕುಮಾರಸ್ವಾಮಿ ಅವರು ಹಟ ಹಿಡಿದು ಮೋದಿ, ಅಮಿತ್ ಶಾ ಅವರ ಮೇಲೆ ಒತ್ತಡ ಹೇರಿ ರಾಜ್ಯಪಾಲರಿಂದ ಸಿಎಂ ವಿರುದ್ಧ ವಿಚಾರಣೆಗೆ ಅನುಮತಿ ಕೊಡಿಸಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ.ಅವರ ಪಕ್ಷದಲ್ಲಿನ ಪಿತೂರಿಗೆ ಸಿದ್ದರಾಮಯ್ಯ ಅವರು ಬಲಿಯಾಗುತ್ತಿದ್ದಾರೆ ಎಂದು ಹೇಳಿದರು.ಕಾಡುಗೊಲ್ಲರ ಬಗ್ಗೆ ಚರ್ಚೆ ಮಾಡಲು ದೇವೇಗೌಡರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬಳಿ ಹೋಗಿದ್ದರು. ನಾನೂ ಹೋಗಿದ್ದೆ. ಇದಕ್ಕೆ ರಾಜಕೀಯ ಬಣ್ಣ ಬಳಿಯುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಏನು ತೀರ್ಮಾನ ಆಗಬೇಕೋ ಆಗುತ್ತದೆ
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ನಾನು ಕೇಳಿಲ್ಲ. ಅವರು ರಾಜೀನಾಮೆ ಕೊಡುವುದೂ ಇಲ್ಲ. ಅದು ನನಗೆ ಗೊತ್ತಿದೆ. ಕಾನೂನು ಅಂತ ಒಂದಿದೆ. ಯಾವ ಹಂತದಲ್ಲಿ ಏನು ತೀರ್ಮಾನ ಆಗಬೇಕೋ ಅದು ಆಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು.
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
Sign in to your account
Please enter an answer in digits:1 × 5 =
Remember me
