ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರದ 100 ದಿನದ ಸಾಧನೆ ಎಂದರೆ ಅದು ವರ್ಗಾವಣೆ ಮಾತ್ರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಟೀಕಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ ಎಲ್ಲ ಸ್ಥಗಿತವಾಗಿವೆ. ನಮ್ಮ ಕಾಲದ ಕೆಲಸಗಳನ್ನೆಲ್ಲ ಸ್ಥಗಿತ ಮಾಡಿದ್ದಾರೆ. ಎಲ್ಲರಿಗೂ ಉಚಿತ ಖಚಿತ ಅಂದರು. ಆದರೆ ಆದರೆ ಈಗ ನೂರಾರು ಷರತ್ತು ಹಾಕಿದ್ದಾರೆ. ಯಾವುದೇ ಯೋಜನೆ ಪೂರ್ಣ ಪ್ರಮಾಣದಲ್ಲಿ ಈ ಜನರಿಗೆ ಸಿಗಲ್ಲ ಎಂದರು.
ಬಿಜೆಪಿ ಚಾರ್ಜ್ ಶೀಟ್ ಬಿಡುಗಡೆಗೆ ಕಾಂಗ್ರೆಸ್ ಲೇವಡಿ ವಿಚಾರ ಕುರಿತ ಪ್ರಶ್ನೆಗೆ, ಪ್ರತಿಪಕ್ಷದ ನಾಯಕನ ಆಯ್ಕೆಗೂ ಚಾರ್ಜ್‌ಶೀಟ್‌ಗೂ ಸಂಬಂಧವಿಲ್ಲ. ನೂರು ದಿನದ ವೈಲ್ಯ ಏನು ಎಂಬುದನ್ನು ಚಾರ್ಜ್‌ಶೀಟ್‌ನಲ್ಲಿ ಹೇಳಲಾಗಿದೆ. ಅದಕ್ಕೆ ಕಾಂಗ್ರೆಸ್ ಸರ್ಕಾರ ಮೊದಲು ಉತ್ತರ ಕೊಡಬೇಕು. ವಿರೋಧ ಪಕ್ಷದ ನಾಯಕನ ಆಯ್ಕೆ ಆಗುತ್ತದೆ. ಅಧಿಕೃತ ವಿರೋಧ ಪಕ್ಷವಾಗಿ ನಾವು ಕೇಳಿದ್ದಕ್ಕೆ ಉತ್ತರ ಕೊಡಲಿ. ಯಾವುದೋ ನೆಪ ಹೇಳಿ ಜಾರಿಕೊಳ್ಳಬಾರದು ಎಂದು ಸವಾಲು ಹಾಕಿದರು.
ಪಾರ್ಟಿ ಬಿಡುವ ಬೆದರಿಕೆ ಸರಿಯಲ್ಲಬಿಜೆಪಿ ಕಚೇರಿ ಗಾಸಿಪ್ ಕೇಂದ್ರ ಎಂಬ ಶಾಸಕ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಕಚೇರಿ ಇರುವುದು ಪಕ್ಷ ಸಂಘಟನೆಗೆ ಮಾತ್ರ. ಗಾಸಿಪ್‌ಗಳೆಲ್ಲ ಮನೆಗಳಲ್ಲಿ ಆಗುತ್ತವೆ.ಗಾಸಿಪ್‌ಗೆಂದೇ ನಾಲ್ಕು ಬೇರೆ ಮನೆಗಳಿವೆ. ಅವರ ಮನೆಗಳಲ್ಲಿ ಗಾಸಿಪ್ ಸೃಷ್ಟಿ ಆಗುತ್ತವೆ ಎಂದು ತಿರುಗೇಟು ನೀಡಿದರು.ಕೆಲವು ಜನ ಪಾರ್ಟಿ ಬಿಡುತ್ತೇವೆ ಎಂದು ಬೆದರಿಕೆ ಹಾಕುವುದು ಸರಿಯಲ್ಲ. ಪಕ್ಷದಿಂದ ಗೆದ್ದಿದ್ದೇವೆ, ಮಂತ್ರಿಗಳಾಗಿದ್ದೀವಿ. ಸೋಲು ಗೆಲುವು ಸಾಮಾನ್ಯ. ಸೋತಾಗ ಹತಾಶರಾಗುವುದು ಬೇಡ ಎಂದು ಬಸನಗೌಡ ಪಾಟೀಲ ಯತ್ನಾಳ್ ಸಲಹೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + two =
Remember me
