ಬೆಂಗಳೂರು:ಅಧಿಕಾರಕ್ಕೆ ಬಂದು ನೂರು ದಿನ ಕಳೆದರೂ ಮೇಕೆದಾಟು ಯೋಜನೆ ಅನುಷ್ಠಾನದ ಬಗ್ಗೆ ಕಾಂಗ್ರೆಸ್ ಏಕೆ ಏನು ಮಾತನಾಡುತ್ತಿಲ್ಲ? ಬೆಂಗಳೂರಿಗೆ ಅಗತ್ಯ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರವೇನು? ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನಗಳು ಪೂರೈಸಿದ ಹಿನ್ನೆಲೆ ಹೇಳಿಕೆ ಬಿಡುಗಡೆ ಮಾಡಿದ ಮೋಹನ್ ದಾಸರಿ, ಸಂಭ್ರಮಾಚರಣೆ ಮಾಡಲು ಕಾಂಗ್ರೆಸ್ ಯಾವ ಸಾಧನೆ ಮಾಡಿದೆ? ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಮತ್ತು ಗೃಹಜ್ಯೋತಿ ಯೋಜನೆಯ ವಿದ್ಯುತ್ ಉಚಿತ ಸೌಲಭ್ಯವನ್ನು ಹೊರತು ಪಡಿಸಿ ಬೇರೆ ಏನು ಸಾಧನೆ ಮಾಡಿದ್ದಾರೆ? ಚುನಾವಣೆಗೂ ಮುನ್ನ ಐದು ಗ್ಯಾರಂಟಿಗಳನ್ನು ಘೋಷಿಸಿ ನುಡಿದಂತೆ ನಡೆಯುವ ಸರ್ಕಾರ ಎಂದಿದ್ದರು. ಅಧಿಕಾರಕ್ಕೆ ಬಂದ ಬಳಿಕ ತಮ್ಮದೇ ನುಡಿಯನ್ನು ಅನುಸರಿಸುತ್ತಿಲ್ಲ ಏಕೆ? ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಜ್ಯದ ನಿಜವಾದ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಬೆಂಗಳೂರಲ್ಲಿ ರಸ್ತೆಗುಂಡಿಗಳ ಸಮಸ್ಯೆ ಹೆಚ್ಚಾಗುತ್ತಲೇ ಇದೆ. ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ ಎಂದು ಸುತ್ತಾಡುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರೇನು ವಿರೋಧ ಪಕ್ಷದಲ್ಲಿಲ್ಲ. ತಮ್ಮದೇ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದಾರೆ. ಬ್ರ್ಯಾಂಡ್ ಬೆಂಗಳೂರು ಮಾಡುತ್ತೇನೆಂದು ಹೇಳಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಸಮಸ್ಯೆಗಳೇನು ಎಂಬ ಅರಿವಿದ್ದುಕೊಂಡು ಪುನಃ ಆಲಿಸುವ ನಾಟಕ ಏಕೆ ಮಾಡುತ್ತಿದ್ದೀರಿ? ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಮೋಹನ್ ದಾಸರಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ರೈತರ ಸಂಕಷ್ಟದ ದಿನಗಳನ್ನು ಲೆಕ್ಕಿಸದೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ಹರಿಸಲಾಗುತ್ತಿದೆ. ನಾಡು, ನುಡಿ, ಜಲಕ್ಕೆ ಬದ್ಧ ಎಂದರೆ ಇದೇನಾ? ಎಂದು ಪ್ರಶ್ನಿಸಿದ್ದಾರೆ.
ಈ ನಡುವೆ ಬಿಜೆಪಿ ವಿರುದ್ಧವೂ ಹರಿಹಾಯ್ದ ಮೋಹನ್ ದಾಸರಿ, ನೂರು ದಿನಗಳು ಕಳೆದರು ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಪಕ್ಷದ ರಾಜ್ಯಾಧ್ಯಕ್ಷನನ್ನು ಆಯ್ಕೆ ಮಾಡಲಾಗಿಲ್ಲ. ರಾಜ್ಯದಲ್ಲಿ ಪ್ರತಿಪಕ್ಷವೇ ಇಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ. ಇದು ರಾಜ್ಯದ ದೌರ್ಭಾಗ್ಯ ಎಂದು ಬೇಸರ ಮೋಹನ್ ದಾಸರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
