ಬೆಂಗಳೂರು:ಭ್ರಷ್ಟಾಚಾರದ ಜಾಲದಲ್ಲಿ ನಲಗಿರುವ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ವರದಿಯಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಎಲ್ಲೆ ಮೀರಿದ ಭ್ರಷ್ಟಾಚಾರದ ನೈಜ ಮುಖವನ್ನು ಅನಾವರಣ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರ ಹಾಕಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾ ಮೌಲ್ಯದ ಬೃಹತ್ ಭ್ರಷ್ಟಾಚಾರ, ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣವನ್ನು ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಬಿ.ವೈ.ವಿಜಯೇಂದ್ರ ಪ್ರಸ್ತಾಪಿಸಿ, ಕಮಿಷನ್ ದಂಧೆಗಾಗಿ ಮಾತ್ರ ಯೋಜನೆಗಳು ರೂಪಿತವಾಗುತ್ತಿದ್ದು, ಅಭಿವೃದ್ಧಿ ಕಾರ್ಯಗಳು ತುಕ್ಕು ಹಿಡಿದು ಕುಳಿತಿವೆ. ಈ ಕಮಿಷನ್ ವಿಷ ವರ್ತುಲದಲ್ಲಿ ಸಿಲುಕಿ ಇನ್ನೆಷ್ಟು ಜೀವಗಳು ಬಲಿಯಾಗಬಹುದೋ ತಿಳಿಯದಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಕಲ್ಯಾಣದ ಬಗ್ಗೆ ಉದ್ದುದ್ದ ಭಾಷಣ ಬಿಗಿಯುವ ಕಾಂಗ್ರೆಸ್ ಮುಂದಾಳುಗಳು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಹೆಸರಿನಲ್ಲಿ ನಡೆಯುತ್ತಿರುವ ದುರಾಚಾರ ಹಾಗೂ ಭ್ರಷ್ಟಾಚಾರದ ನೇತೃತ್ವವನ್ನು ಇಲಾಖೆಯ ಸಚಿವರೇ ವಹಿಸಿರುವುದು ದುರಂತ ದೌರ್ಭಾಗ್ಯವೆನ್ನಬೇಕಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಈ ಕೂಡಲೇ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವ ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು. ಅಧಿಕಾರಿಯ ಸಾವಿನ ತನಿಖೆಯನ್ನು ಪಾರದರ್ಶಕವಾಗಿ ನಡೆಸಬೇಕೆಂದು ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + sixteen =
Remember me
