ಬೆಂಗಳೂರು:ದ್ವೇಷದ ತೀರ್ಮಾನ ತೆಗೆದುಕೊಳ್ಳುತ್ತಿರುವ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ಶಾಪವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿಡಿಕಾರಿದ್ದಾರೆ.
ಸರಣಿ ಟ್ವೀಟ್​ ಮಾಡಿರುವ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿ ‌ಮುಂಗಾರು ಮಳೆ ವೈಫಲ್ಯವಾಗಿ ಹಲವಾರು ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ ಮತ್ತು ಅಂತರ್ಜಲ ಕುಸಿದಿದೆ. ರೈತರ ಪಾಲಿಗೆ ಮುಂಗಾರು ವೈಫಲ್ಯ ಬಹಳ ದೊಡ್ಡ ಹೊಡೆತ ಕೊಟ್ಟಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುವ ಬದಲು, ದ್ವೇಷದ ತೀರ್ಮಾನಗಳನ್ನು ತೆಗೆದುಕೊಂಡು ಸಂಕಷ್ಟದಲ್ಲಿರುವ ಕರ್ನಾಟಕದ ಜನರಿಗೆ ಈ ಸರ್ಕಾರ ಶಾಪವಾಗಿದೆ.
ಇದನ್ನೂ ಓದಿ:6-10ನೇ ತರಗತಿಯ ಪಠ್ಯ ಪುಸ್ತಕಗಳಿಂದ ಹೆಡ್ಗೆವಾರ್ ಪಾಠವನ್ನು ಕೈಬಿಡಲಾಗಿದೆ: ಸಚಿವ ಮಧು ಬಂಗಾರಪ್ಪ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ದ್ವೇಷದ ಹಾಗೂ ತುಷ್ಟೀಕರಣ ರಾಜಕಾರಣ ಮಾಡುತ್ತಿದ್ದು, ಹಿಂದಿನ ಸರ್ಕಾರದ ತೀರ್ಮಾನಗಳನ್ನು ರದ್ದು ಮಾಡುವುದನ್ನೇ ತನ್ನ ಸಾಧನೆ ಎನ್ನುವಂತೆ ನಡೆದುಕೊಳ್ಳುತ್ತಿದೆ. ಸಮಾಜಕ್ಕೆ ಮಾರಕವಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರದ್ದು ಮಾಡುವ ತೀರ್ಮಾನ ತೆಗೆದುಕೊಂಡು ಯಾರ ಓಲೈಕೆ ಮಾಡುತ್ತಿದೆ? ಹೈಕಮಾಂಡ್ ಹಂಗಿನಲ್ಲಿ ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯ, ರಾಜ್ಯದ ಜನರ ಹಿತಾಸಕ್ತಿಗಿಂತ ಹೈಕಮಾಂಡ್ ಓಲೈಕೆಗೆ ಆದ್ಯತೆ ನೀಡುತ್ತಿರುವಂತಿದೆ.
ಪಠ್ಯ ಪುಸ್ತಕವನ್ನೂ ಪರಿಷ್ಕರಣೆಯ ಹೆಸರಲ್ಲಿ ರಾಷ್ಟ್ರ ಭಕ್ತ ಸಂಘಟನೆ ಸ್ಥಾಪಿಸಿ, ಎಲ್ಲರಲ್ಲೂ ದೇಶಭಕ್ತಿ ಬೆಳೆಯಲು ಕಾರಣವಾಗುವಂತಹ ಆರ್​ಎಸ್​ಎಸ್ ಸಂಘಟನೆ ಸ್ಥಾಪಿಸಿರುವ ಡಾ. ಕೇಶವ ಬಲರಾಮ್ ಹೆಡಗೇವಾರ ಹಾಗೂ ವೀರ ಸಾವರ್ಕರ್ ಅವರ ಕುರಿತ ಪಠ್ಯವನ್ನು ತೆಗೆದು ಹಾಕಲು ತೀರ್ಮಾನ ತೆಗೆದುಕೊಂಡಿರುವುದು ದೇಶದ್ರೋಹಕ್ಕೆ ಸಮಾನ ಎಂದು ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್​ ವಿರುದ್ಧ ಗುಡುಗಿದ್ದಾರೆ.(ದಿಗ್ವಿಜಯ ನ್ಯೂಸ್​)
ಅಖಿಲೇಶ್​ ಯಾದವ್​-ನಿಖಿಲ್​ ಕುಮಾರಸ್ವಾಮಿ ಭೇಟಿ ಹಿಂದಿನ ರಹಸ್ಯವೇನು?

ಕೇಂದ್ರದಿಂದ ಸೂರ್ಯಕಾಂತಿ, ಸೋಯಾಬೀನ್‌ ಎಣ್ಣೆಯ ಆಮದು ಸುಂಕ ಕಡಿತ: ಅಡುಗೆ ಎಣ್ಣೆ ಬೆಲೆ ಇಳಿಕೆ ಸಾಧ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 4 =
Remember me
