ಬೆಂಗಳೂರು:ಲೋಕಸಭೆ ಚುನಾವಣೆಯ ಬಳಿಕ ಐದು ಗ್ಯಾರಂಟಿ ಸ್ಥಗಿತಗೊಳ್ಳುವ ಬಗ್ಗೆ ಮಾಗಡಿ ಕಾಂಗ್ರೆಸ್ ಶಾಸಕ ಬಾಲಕೃಷ್ಣ ಅವರು ನೀಡಿದ್ದ ಹೇಳಿಕೆಯು ಈಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ.
ಇದನ್ನೂ ಓದಿ:ಕುಷ್ಠರೋಗಿಗಳನ್ನು ತಾರತಮ್ಯದಿಂದ ನೋಡಬೇಡಿ: ಜಿಲ್ಲಾಧಿಕಾರಿ ಡಾ.ಕುಮಾರ ಮನವಿ
ಘೋಷಿಸಿದ ಗ್ಯಾರಂಟಿಗಳನ್ನು ಈಡೇರಿಸಲಾಗದೆ ಸ್ವಾಭಿಮಾನಿ ಕನ್ನಡಿಗರನ್ನು ಅವಮಾನಿಸುತ್ತಿದೆ@INCKarnataka.
ಕರ್ನಾಟಕದ ಸ್ವಾಭಿಮಾನಿ ಕನ್ನಡಿಗರು ನಿಮ್ಮ ನಕಲಿ ಗ್ಯಾರಂಟಿಗಳಿಗೆ ಎಂದೂ ಕೈ ಚಾಚಿಲ್ಲ, ಮುಂದೆಯೂ ಚಾಚುವುದಿಲ್ಲ.
ಘೋಷಿಸಿದ ಗ್ಯಾರಂಟಿಗಳನ್ನು ಈಡೇರಿಸುವ ತಾಕತ್ತು ಕಾಂಗ್ರೆಸ್‌ ಸರ್ಕಾರಕ್ಕಿಲ್ಲ. ಆಡಳಿತ ವಿರೋಧಿ ಅಲೆಯಲ್ಲಿ…pic.twitter.com/gEVVOh3wMY
— BJP Karnataka (@BJP4Karnataka)January 31, 2024

ಘೋಷಿಸಿದ ಗ್ಯಾರಂಟಿಗಳನ್ನು ಈಡೇರಿಸಲಾಗದೆ ಸ್ವಾಭಿಮಾನಿ ಕನ್ನಡಿಗರನ್ನು ಕಾಂಗ್ರೆಸ್ ಸರ್ಕಾರ ಅವಮಾನಿಸುತ್ತಿದೆ ಎಂದು ಬಿಜೆಪಿ ಟೀಕೆ ಮಾಡಿದೆ. ಕಾಂಗ್ರೆಸ್ ಶಾಸಕನ ಹೇಳಿಕೆಯ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಯಾವುದೇ ಅಡೆತಡೆ ಇಲ್ಲದೆ ಐದು ವರ್ಷವೂ ‘ಗ್ಯಾರಂಟಿ’ ಮುಂದುವರಿಯಲಿದೆ ಎಂದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಶಾಸಕ ಬಾಲಕೃಷ್ಣ ಅವರು ಈ ರೀತಿ ಹೇಳಿಕೆ ಕೊಟ್ಟಿಲ್ಲ. ಲೋಕಸಭೆ ನಂತರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿದರು.
ಶಾಸಕ ಬಾಲಕೃಷ್ಣ ಅವರು ಈ ರೀತಿ ಹೇಳಿಕೆ ಕೊಟ್ಟಿಲ್ಲ. ಲೋಕಸಭೆ ನಂತರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುವುದು ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದನ್ನು ಮಾತ್ರ ಹೇಳಿದ್ದಾರೆ ಎಂದು ಸಮರ್ಥಿಸಿಕೊಂಡರು.
ಶಾಸಕ ಬಾಲಕೃಷ್ಣ ಹೇಳಿಕೆಗೆ ಕಾಂಗ್ರೆಸ್​ ಪಕ್ಷದ ನಾಯಕರೇ ಕಿಡಿಕಾಡಿದ್ದಾರೆ. ಸಚಿವ ಎಂಬಿ ಪಾಟೀಲ್ ವಿರೋಧ ವ್ಯಕ್ತಪಡಿಸಿದ್ದು ಪ್ರತಿಪಕ್ಷದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಾದ್ಯಂತ ಭುಗಿಲೆದ್ದ ಧ್ವಜ ದಂಗಲ್; ಹಸಿರು ಬಾವುಟ ತೆಗಿಸಲು ಎಲ್ಲೆಡೆ ಪಟ್ಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − 13 =
Remember me
