ನವದೆಹಲಿ:ರಾಜ್ಯದ ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅಂತಿಮಗೊಳಿಸಿದ್ದ ಪಟ್ಟಿಗೆ ಹೈಕಮಾಂಡ್ ಒಪ್ಪಿಗೆ ಸಿಕ್ಕಿಲ್ಲ. ಇದರಿಂದಾಗಿ ನೇಮಕಾತಿ ಮತ್ತಷ್ಟು ವಿಳಂಬಗೊಳ್ಳಲಿದೆ ಎಂದು ತಿಳಿದುಬಂದಿದೆ. ಇದರಿಂದಾಗಿ ಸಿಎಂ, ಡಿಸಿಎಂ ದೆಹಲಿಯಿಂದ ವಾಪಸಾದ ಕೂಡಲೇ ನಿಗಮ ಮಂಡಳಿಗಳ ಅಧ್ಯಕ್ಷರಾಗುವ ನಿರೀಕ್ಷೆಯಲ್ಲಿದ್ದ ಕೆಲ ಶಾಸಕರು ಮತ್ತಷ್ಟು ಸಮಯ ಕಾಯುವುದು ಅನಿವಾರ್ಯವಾಗಿದೆ. ದಿಲ್ಲಿಗೆ ಬರುವ ಮುನ್ನ ಸಿಎಂ ಮತ್ತು ಡಿಸಿಎಂ ಪಟ್ಟಿಯೊಂದನ್ನು ಸಿದ್ಧಪಡಿಸಿಕೊಂಡು ಬಂದಿದ್ದರು. ಅದರಲ್ಲಿ ನಿಗಮ ಮಂಡಳಿಗಳಿಗೆ ಶಿಫಾರಸು ಮಾಡಿದ್ದ 35ರಿಂದ 37 ಶಾಸಕರ ಹೆಸರುಗಳಿದ್ದವು. ಆದರೆ, ಬರೀ ಶಾಸಕರಿಗಷ್ಟೇ ಈಗ ಸ್ಥಾನಮಾನ ನೀಡುವ ರಾಜ್ಯ ನಾಯಕರ ತೀರ್ವನವನ್ನು ಹೈಕಮಾಂಡ್ ನಾಯಕರು ಒಪ್ಪಿಲ್ಲ.
ಶಾಸಕರು, ಮುಖಂಡರು ಮತ್ತು ಕಾರ್ಯಕರ್ತರಿಗೆ ಎಲ್ಲರಿಗೂ ಏಕಕಾಲದಲ್ಲಿ ಹುದ್ದೆ ನೀಡಬೇಕು. ಎಲ್ಲರಿಗೂ ಆದ್ಯತೆ ನೀಡಿದ ಪಟ್ಟಿ ಸಿದ್ಧಪಡಿಸಿ, ದೆಹಲಿಗೆ ಕಳಿಸಿಕೊಡಿ ಎಂದು ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್​ಗೆ ಸೂಚಿಸಿದ್ದಾರೆ. ಒಂದಕ್ಕಿಂತ ಹೆಚ್ಚು ಬಾರಿ ಶಾಸಕರಾಗಿ ಆಯ್ಕೆಯಾದವರಿಗೆ ಆದ್ಯತೆ ನೀಡಿದ ಪಟ್ಟಿಯನ್ನು ಸಿಎಂ -ಡಿಸಿಎಂ ಸಿದ್ಧಪಡಿಸಿದ್ದರು. ಈ ಪಟ್ಟಿ ಬಗ್ಗೆ ರಾಹುಲ್ ಮತ್ತು ಖರ್ಗೆ ಜತೆ ಸಭೆ ನಡೆಸುವ ಮುನ್ನ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಅವರೊಂದಿಗೂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ದಿಲ್ಲಿಯಲ್ಲಿ ಸಭೆ ನಡೆಸಿದ್ದರು.
ಬುಧವಾರ ರಾತ್ರಿ ಬೆಂಗಳೂರಿಗೆ ವಾಪಸಾಗುವ ಮುನ್ನ ಎಐಸಿಸಿ ಕಚೇರಿಯಲ್ಲಿ ಖರ್ಗೆ ಮತ್ತು ರಾಹುಲ್ ಅವರನ್ನು ಭೇಟಿ ಮಾಡಿದ ರಾಜ್ಯ ನಾಯಕರು ತಾವು ಫೈನಲ್ ಮಾಡಿದ್ದ ಪಟ್ಟಿ ಮುಂದಿಟ್ಟರು. ಆದರೆ, ಶಾಸಕರಿಗೆ ಆದ್ಯತೆ ನೀಡಿದ ಪಟ್ಟಿಗೆ ರಾಹುಲ್ ಅಸಮ್ಮತಿ ಸೂಚಿಸಿದ್ದಾರೆ ಎನ್ನಲಾಗಿದ್ದು, ಮುಖಂಡರು, ಕಾರ್ಯಕರ್ತರನ್ನೂ ಸೇರಿಸಿದ ಪಟ್ಟಿ ರೂಪಿಸಿ ಮತ್ತು ಬಹುಪಾಲು ಸ್ಥಾನಗಳನ್ನು ಈಗಲೇ ಭರ್ತಿ ಮಾಡಿ ಎಂದು ಸಲಹೆ ನೀಡಿದ್ದಾರೆಂದು ಗೊತ್ತಾಗಿದೆ.
ಇದೇ ವೇಳೆ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಬಗ್ಗೆಯೂ ರಾಹುಲ್ ಮತ್ತು ಖರ್ಗೆ ಅವರು ಸಿಎಂ ಮತ್ತು ಡಿಸಿಎಂಗೆ ತಿಳಿಸಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಹೆಚ್ಚು ಸ್ಥಾನ ಗೆಲ್ಲಿಸಲೇಬೇಕು ಎಂಬ ಗುರಿ ನೀಡಿದ್ದಾರೆನ್ನಲಾಗಿದೆ. ಈ ನಿಟ್ಟಿನಲ್ಲಿ ವಿವಿಧ ಸಚಿವರಿಗೆ ಅವರ ಜಿಲ್ಲೆಗಳ ವ್ಯಾಪ್ತಿಯ ಲೋಕಸಭೆ ಕ್ಷೇತ್ರಗಳ ಜವಾಬ್ದಾರಿ ನೀಡುವ ಚರ್ಚೆಯೂ ನಡೆದಿದೆ. ತೆಲಂಗಾಣ ಮತ್ತು ಕರ್ನಾಟಕದಲ್ಲಿ ಪಕ್ಷದ ಸರ್ಕಾರವಿರುವುದರಿಂದ ನಮ್ಮ ಯೋಜನೆಗಳಿಂದ ಆಗಿರುವ ಲಾಭ ಮತ್ತು ಕೇಂದ್ರ ಸರ್ಕಾರದಿಂದ ಜನ ಸಾಮಾನ್ಯರಿಗೆ ಆಗಿರುವ ಕಷ್ಟಗಳ ಹೆಚ್ಚು ಪ್ರಚಾರ ಮಾಡಬೇಕು. ಆ ಮೂಲಕ ಮತಗಳನ್ನು ಕಾಂಗ್ರೆಸ್​ನತ್ತ ಸೆಳೆಯಬೇಕು ಎಂದು ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ನಾವು ಕಳುಹಿಸಿದ ಪಟ್ಟಿಯನ್ನು ಹೈಕಮಾಂಡ್ ನಾಯಕರು ಇನ್ನೂ ನೋಡಿಲ್ಲ. ನೋಡಿ ಪ್ರತಿಕ್ರಿಯಿಸುವುದಾಗಿ ತಿಳಿಸಿದ್ದಾರೆ. 2-3 ದಿನದಲ್ಲಿ ಹೈಕಮಾಂಡ್ ಪ್ರತಿಕ್ರಿಯೆ ನೀಡಬಹುದು. ಬಳಿಕ ಪಟ್ಟಿ ಬಿಡುಗಡೆ ಬಗ್ಗೆ ತೀರ್ಮಾನ
| ಸಿದ್ದರಾಮಯ್ಯ ಮುಖ್ಯಮಂತ್ರಿ
ಕಾರ್ಯಕರ್ತರಿಗೂ ಅವಕಾಶನಮ್ಮ ಪಟ್ಟಿಯನ್ನು ಹೈಕಮಾಂಡ್​ಗೆ ನೀಡಿದ್ದೇವೆ. ಕಾರ್ಯಕರ್ತರಿಗೂ ಅವಕಾಶ ನೀಡಲಾಗುವುದು. ಮೊದಲಿನಿಂದಲೂ ಈ ಪ್ರಸ್ತಾಪ ಇದೆ. ಕಾರ್ಯಕರ್ತರಿಗೆ ಅವಕಾಶ ನೀಡಲು ನಮ್ಮ ವಿರೋಧ ಏನಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ರಾಹುಲ್ ಗಾಂಧಿ ಜತೆ ಸಭೆ ನಡೆಸಿದ ಬಳಿಕ ಮಾತನಾಡಿದರು. ಪಟ್ಟಿ ಬಿಡುಗಡೆ ಬಗ್ಗೆ ಹೈಕಮಾಂಡ್​ನಾಯಕರು ನಿರ್ಧರಿಸಲಿದ್ದಾರೆ. ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚೆಯಾಗಿದೆ.
ಇದೇ 22ರೊಳಗೆ ಅಭ್ಯರ್ಥಿಗಳ ಆಯ್ಕೆ ಕುರಿತು ವರದಿ ಸಲ್ಲಿಸಲು ಸೂಚಿಸಿದ್ದಾರೆ. ಗುರುವಾರ ಕ್ಯಾಬಿನೆಟ್ ಸಭೆಯಲ್ಲೂ ಸಿಎಂ ಈ ಸೂಚನೆ ನೀಡಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು. ಜಿಲ್ಲಾ ಉಸ್ತುವಾರಿಗಳು ಮೂರು ಅಭ್ಯರ್ಥಿಗಳ ಹೆಸರು ಸೂಚಿಸಬೇಕು. ಅಂತಿಮವಾಗಿ ಯಾರಿಗೆ ಟಿಕೆಟ್ ಎನ್ನುವುದನ್ನು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಆದರೆ, ಸಂಕ್ರಾಂತಿಯೊಳಗೆ ಅಭ್ಯರ್ಥಿಗಳ ಪಟ್ಟಿ ಫೈನಲ್ ಮಾಡಬೇಕೆಂದು ಮುಹೂರ್ತ ನಿಗದಿಯಾಗಿಲ್ಲ ಎಂದು ಉತ್ತರಿಸಿದರು.
ಚಿನ್ನದ ಸ್ಮಗ್ಲಿಂಗ್​ನಲ್ಲಿ ಕೇರಳವೇ ನಂ.1: ಈವರೆಗೂ ಸೀಜ್​ ಆಗಿರೋದ್ರಲ್ಲಿ ಚಿನ್ನದ ರಸ್ತೆಯನ್ನೇ ಮಾಡ್ಬೋದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − nine =
Remember me
