ನವದೆಹಲಿ:‘‘ನೀವು ಇತ್ತೀಚೆಗೆ ಪಕ್ಷದ ಹಿತಾಸಕ್ತಿಗೆ ಧಕ್ಕೆ ಆಗುವಂತಹ ಅನಗತ್ಯ ಹೇಳಿಕೆಗಳನ್ನು ನೀಡುತ್ತಿದ್ದು ಈ ಪ್ರವೃತ್ತಿಯನ್ನು ಕೂಡಲೇ ನಿಲ್ಲಿಸಬೇಕು’’ ಎಂದು ಶಾಸಕ ಜಮೀರ್ ಅಹಮದ್ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ ನೀಡಿದೆ.
ಈ ಕುರಿತು ಪಕ್ಷದ ಕರ್ನಾಟಕ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಜಮೀರ್ ಅಹಮದ್ ಅವರಿಗೆ ಪತ್ರ ಬರೆದಿದ್ದಾರೆ. ‘‘ಕೆಲವು ದಿನಗಳಿಂದ ನೀವು ಪಕ್ಷ ಹಾಕಿದ ಲಕ್ಷ್ಮಣ ರೇಖೆಯನ್ನು ದಾಟುತ್ತಿದ್ದೀರಿ. ಅನಗತ್ಯವಾದ ರಾಜಕೀಯ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡುತ್ತಿದ್ದೀರಿ. ಪಕ್ಷದ ಶಿಸ್ತು ಮತ್ತು ವಿಚಾರಧಾರೆಗೆ ಇದು ವಿರುದ್ಧವಾದದ್ದು. ಇದರಿಂದ ಸಮುದಾಯಗಳ ಮಧ್ಯೆ ಮನಸ್ತಾಪ ಉಂಟಾಗುತ್ತದೆ’’ ಎಂದು ಅವರು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.
‘‘ಮುಂಬರುವ ದಿನಗಳಲ್ಲಿ ನೀವು ಸಾರ್ವಜನಿಕವಾಗಿ ಮಾತನಾಡುವಾಗ ಎಚ್ಚರಿಕೆ ವಹಿಸಬೇಕು. ಕಾಂಗ್ರೆಸ್ ಪಕ್ಷದ ಶಿಸ್ತು- ವಿಚಾರಧಾರೆಗೆ ವಿರುದ್ಧವಾದ ಮಾತುಗಳನ್ನು ಆಡಬಾರದು’’ ಎಂದು ಸುರ್ಜೆವಾಲಾ ತಮ್ಮ ಪತ್ರದಲ್ಲಿ ಜಮೀರ್‌ಗೆ ತಾಕೀತು ಮಾಡಿದ್ದಾರೆ.
ನಾನು ರಾಜಕೀಯಕ್ಕೆ ಬರಲು ಕಾರಣ ಮುಸ್ಲಿಂ ಗುರುಗಳಲ್ಲ, ಒಕ್ಕಲಿಗ ಸ್ವಾಮೀಜಿ: ಜಮೀರ್ ಅಹ್ಮದ್
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − ten =
Remember me
