ದೆಹಲಿ:ಕಾಂಗ್ರೆಸ್ ನೇತೃತ್ವದ ಸರ್ಕಾರ ಕರ್ನಾಟಕದಲ್ಲಿ ಅರ್ಧ ಸುಳ್ಳಿನ ಕಂತೆಗಳ ಮೇಲೆ ಸರ್ಕಾರವನ್ನು ನಡೆಸುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.ಇದನ್ನೂ ಓದಿ:ರಾಜ್ಯದಲ್ಲಿ ಶಾಂತಿ, ನೆಮ್ಮದಿ ಇಳಿಕೆ, ಜನಸಾಮಾನ್ಯರ ಆತಂಕ ಏರಿಕೆ!; ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕೆಭಾರತೀಯ ಆಹಾರ ನಿಗಮದ (ಎಫ್‌ಸಿಐ) ಅಕ್ಕಿ ಖರೀದಿಯ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಮಾತನಾಡಿದ ಸಂಸದರು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ದೇಶದ ಇತರ ಪ್ರಜೆಗಳಂತೆ ಕರ್ನಾಟಕದ ಪ್ರತಿಯೊಬ್ಬ ಪ್ರಜೆಯು 5 ಕೆಜಿ ಆಹಾರ ಧಾನ್ಯವನ್ನು ಪಡೆಯಲು ಅರ್ಹರಾಗಿದ್ದಾರೆ ಎಂದು ಹೇಳಿದರು.ಆದರೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಅಕ್ಕಿ ಮಾರಾಟ ಮಾಡಲು ಭಾರತೀಯ ಆಹಾರ ನಿಗಮಕ್ಕೆ(ಎಫ್‌ಸಿಐ) ಅವಕಾಶ ನೀಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದು, ಇದನ್ನು ಸಂಸದರು ತಳ್ಳಿ ಹಾಕಿದ್ದಾರೆ. ಕಾಂಗ್ರೆಸ್​ ಸುಳ್ಳಿನ ಮೇಲೆ ಸರ್ಕಾರವನ್ನು ನಡೆಸುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:ವರದಕ್ಷಿಣೆ ಕೇಳಿದ ಮದುಮಗನನ್ನು ಮರಕ್ಕೆ ಕಟ್ಟಿ ಹಾಕಿದ ವಧುವಿನ ಸಂಬಂಧಿಕರು!ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದ್ದು, ಜುಲೈ 1ರಂದು ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆಟ್ರಿಕ್​ ಟನ್​ ಅಗತ್ಯವಿದೆ ಎಂದು ಕೋರಿ ಜೂನ್‌ 9ರಂದು ಪತ್ರ ಬರೆದಿದ್ದೆವು.ಈ ಒಪ್ಪಿಗೆ ಪತ್ರದ ಆಧಾರದ ಮೇಲೆ ಜುಲೈ 1ರಿಂದ ತಲಾ 10ಕೆ.ಜಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆಂದು ಘೋಷಿಸಿದ್ದೆವು. ಆದರೆ ಎಫ್​ಸಿಐ ಸದ್ಯ ನಿರಾಕರಿಸುತ್ತಿದೆ ಎಂದು ಸಿಎಂ ಆರೋಪಿಸಿದ್ದರು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 11 =
Remember me
