ಬೆಂಗಳೂರು:ಮುಂಬರುವ ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಕಾಂಗ್ರೆಸ್​ ಪಕ್ಷವು ಟಿಕೆಟ್​ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ.
ಈ ಕುರಿತು ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​, ಅರ್ಜಿಗೆ 5 ಸಾವಿರ ರೂ. ಶುಲ್ಕ ನಿಗದಿ ಮಾಡಲಾಗಿದೆ. ಅರ್ಜಿಯ ಜತೆಗೆ ಸಾಮಾನ್ಯ ವರ್ಗಕ್ಕೆ ಸೇರಿದವರು 2 ಲಕ್ಷ ರೂ. ಡಿಡಿ ಹಾಗೂ ಕಾಂಗ್ರೆಸ್​ ಸದಸ್ಯತ್ವ ವಿವರ ಲಗತ್ತಿಸಬೇಕು. ಪರಿಶಿಷ್ಟ ವರ್ಗದವರಿಗೆ ಶೇ.50 ವಿನಾಯಿತಿ ನೀಡಲಾಗಿದೆ. ಟಿಕೆಟ್​ ಆಕಾಂಕ್ಷಿಗಳು ನ.5 ರಿಂದ 15 ರೊಳಗೆ ಅರ್ಜಿ ಸಲ್ಲಿಸಬಹುದು ಎಂದರು. ಅರ್ಜಿಯ ಜತೆಗೆ ಸಂಗ್ರಹವಾಗುವ ಹಣವನ್ನು ಪಕ್ಷದ ವಿವಿಧ ಕಟ್ಟಡಗಳ ಕಾಮಗಾರಿಗೆ ಬಳಸಲಾಗುತ್ತದೆ ಎಂದು ಡಿಕೆಶಿ ತಿಳಿಸಿದರು.
ರಾಜ್ಯ ವಿಧಾನಸಭೆಗೆ 2023 ರ ಚುನಾವಣೆಯಲ್ಲಿ ಹಾಲಿ ಶಾಸಕರ ಸಮೇತ ಟಿಕೆಟ್​ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ನಾನು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಜಿ ಹಾಕಲೇಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಕಾಂಗ್ರೆಸ್​ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ್​ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್​ ಗಾಂಧಿ ಅವರ ನಾಯಕತ್ವ ಒಪ್ಪಿ ಬೇಷರತ್ತಾಗಿ ಪಕ್ಷ ಸೇರಲು ಬಯಸುವವರು ಅರ್ಜಿ ಹಾಕಬಹುದು. ಅವರಿಗೆ ಮುಕ್ತ ಅವಕಾಶ ನೀಡಲಾಗಿದೆ. ಅರ್ಜಿ ಹಾಕಿದ ನಂತರ ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಯಾರನ್ನು ಸೇರಿಸಿಕೊಳ್ಳಬೇಕು ಎಂದು ತೀರ್ಮಾನಿಸಲಿದೆ ಎಂದು ವಿವರಿಸಿದರು.
ಅರ್ಜಿ ಹಾಕಲು ನಮ್ಮಲ್ಲಿ ವಯೋಮಿತಿ ಇಲ್ಲ. ನಮ್ಮಲ್ಲಿ ಮಾರ್ಗದರ್ಶಕ ಮಂಡಲಿ ಇಲ್ಲ. ನಾವು 92 ವರ್ಷದ ಶಾಮನೂರು ಶಿವಶಂಕರಪ್ಪ ಅವರನ್ನು ಇಟ್ಟುಕೊಂಡಿದ್ದೇವೆ. ಅವರು ಬೇರೆಯವರಿಗಿಂತ ಹೆಚ್ಚು ಓಡಾಡುತ್ತಿದ್ದಾರೆ. ಕ್ಷೇತ್ರದ ಎಲ್ಲ ಬೂತ್​ಗಳಿಗೂ ಭೇಟಿ ನೀಡುತ್ತಿದ್ದಾರೆ. ನಮ್ಮ ತಂದೆ ತಾಯಿಗಳನ್ನು ನಾವು ಮನೆಯಿಂದ ಆಚೆ ಹಾಕುವುದಿಲ್ಲ ಎಂದರು.
T20WorldCup: ಬಾಂಗ್ಲಾ ವಿರುದ್ಧ ಭಾರತಕ್ಕೆ ಗೆಲುವು, ಸೆಮಿಫೈನಲ್​ಗೆ ಲಗ್ಗೆ ಇಟ್ಟ ರೋಹಿತ್​ ಪಡೆ

ಹೊಂಡಕ್ಕೆ ಬಿದ್ದ ತಮ್ಮನನ್ನು ರಕ್ಷಿಸಲು ಹೋದ ಮೂವರು ಅಕ್ಕಂದಿರೂ ದುರಂತ ಅಂತ್ಯ! ವಿಜಯನಗರದಲ್ಲಿ ಹೃದಯವಿದ್ರಾವಕ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
