ಬೈಂದೂರು:ಕರೊನಾ ಲಾಕ್‌ಡೌನ್ ಬಳಿಕ ದೇಶದ ಜನರ ಸಂಕಷ್ಟಗಳಿಗೆ ಸ್ಪಂದಿಸಬೇಕಾದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆಹಾರ ಪದಾರ್ಥಗಳ ಬೆಲೆ ಏರಿಕೆ, ಪೆಟ್ರೋಲಿಯಂ ಉತ್ಪನ್ನಗಳ ದರ ಹೆಚ್ಚಳ, ಗ್ಯಾಸ್ ಸಬ್ಸಿಡಿ ಸ್ಥಗಿತ, ಕೃಷಿ ಕಾಯ್ದೆ ತಿದ್ದುಪಡಿ ಮೂಲಕ ಜನವಿರೋಧಿ ನೀತಿಗಳನ್ನು ಜಾರಿಗೆ ತಂದಿದೆ. ಜನರಿಗೆ ನಿತ್ಯ ಕಿರುಕುಳ ನೀಡುವ ಇಂತಹ ಬಿಜೆಪಿ ಸರ್ಕಾರ ಯಾಕೆ ಬೇಕು ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.ಬೈಂದೂರು ನೂತನ ಬಸ್‌ನಿಲ್ದಾಣದ ಬಳಿ ಶನಿವಾರ, ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಜನವಿರೋಧಿ ನೀತಿ ವಿರೋಧಿಸಿ ಕಾಂಗ್ರೆಸ್ ಹೆಜಮಾಡಿಯಿಂದ ಆರಂಭಿಸಿದ್ದ ಜನಧ್ವನಿ ಪಾದಯಾತ್ರೆ ಸಮಾರೋಪದಲ್ಲಿ ಅವರು ಮಾತನಾಡಿದರು.
ಉಡುಪಿ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು, ಸಚಿವರು ಇದ್ದಾರೆ. ಆದರೆ ಜನರ ಪರವಾಗಿ ಧ್ವನಿ ಎತ್ತುತ್ತಿಲ್ಲ. ಜನರ ಬದುಕಿನಲ್ಲಿ ಅವರ ಕಷ್ಟಗಳಿಗೆ ಸ್ಪಂದಿಸಿ ಜನರ ಧ್ವನಿಯಾಗಲು ಕಾಂಗ್ರೆಸ್ ಪಕ್ಷ ಹಾಗೂ ನಮ್ಮ ಕರ್ತವ್ಯದಂತೆ ಜನರೊಂದಿಗೆ ಬೆರೆತು ಕೆಲಸ ಮಾಡಬೇಕು ಎಂಬ ನೆಲೆಯಲ್ಲಿ ಜನಧ್ವನಿ ಪಾದಯಾತ್ರೆ ಆಯೋಜಿಸಲಾಗಿದೆ. ಮುಂದಿನ ದಿನಗಳಲ್ಲಿ ರಾಜ್ಯದ ನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಲಾಗುವುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಕೊಡವೂರು ಸ್ವಾಗತಿಸಿ, ಪ್ರಾಸ್ತಾವಿಸಿದರು. ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ವಿಧಾನ ಪರಿಷತ್ ಮಾಜಿ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ, ಮಾಜಿ ಸಚಿವರಾದ ಅಭಯಚಂದ್ರ ಜೈನ್, ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮುಖಂಡರಾದ ಎಂ.ಎ. ಗಫೂರ್, ಗೌರಿ ದೇವಾಡಿಗ, ಎಸ್. ಮದನಕುಮಾರ್, ಸಚಿನ್ ಮೇಘ್, ಹರೀಶ್‌ಕುಮರ್, ಮಿಥುನ್ ರೈ, ಯು. ಬಿ. ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್, ಪ್ರದೇಶ ಕಾಂಗ್ರೆಸ್, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್. ರಾಜು ಪೂಜಾರಿ ನಿರೂಪಿಸಿ ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ ಕುಮಾರ್ ಶೆಟ್ಟಿ ವಂದಿಸಿದರು.
ಬಂಡೆಯೆಂದರೆ ಪ್ರಕೃತಿ, ಆಕೃತಿ, ಸಂಸ್ಕೃತಿ..!ನಾನು ಕನಕಪುರದ ಬಂಡೆಯಲ್ಲ. ಬಂಡೆ ಒಂದು ಪ್ರಕೃತಿ, ಅದನ್ನು ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ ಎಂದು ಜನಧ್ವನಿ ಪಾದಯಾತ್ರೆ ಸಮಾರೋಪ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ತನ್ನ ವಿರುದ್ಧ ವ್ಯಂಗ್ಯವಾಡುವವರನ್ನು ಕುಟುಕಿದರು.
ಬ್ಯಾಂಕ್ ವಿಲೀನ ಕರಾವಳಿಗರ ಸ್ವಾಭಿಮಾನಕ್ಕೆ ಧಕ್ಕೆಜನರಿಗೆ ಆರ್ಥಿಕ ಶಕ್ತಿ ನೀಡುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ಬ್ಯಾಂಕುಗಳ ರಾಷ್ಟ್ರೀಕರಣಗೊಳಿಸಿದರು. ಆದರೆ ಮೋದಿ ಸರ್ಕಾರ ಕರಾವಳಿಯ ನಾಲ್ಕೂ ಬ್ಯಾಂಕುಗಳನ್ನು ವಿಲೀನಗೊಳಿಸುವ ಮೂಲಕ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಜನರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ. ಈ ಬಗ್ಗೆ ಧ್ವನಿ ಎತ್ತಬೇಕಾದ ಕರಾವಳಿ ಭಾಗದ ಸಂಸದರಾದ ಸದಾನಂದ ಗೌಡ, ಶೋಭಾ ಕರಂದ್ಲಾಜೆ, ನಳಿನ್‌ಕುಮಾರ ಕಟೀಲ್, ಬಿ.ವೈ. ರಾಘವೇಂದ್ರ ಎಲ್ಲಿಗೆ ಹೋಗಿದ್ದಾರೆ ಎಂದು ಎಂದು ಕಿಡಿಕಾರಿದರು. ದೇಶಕ್ಕೆ ಆರ್ಥಿಕ ಶಕ್ತಿ ಕೊಟ್ಟಂತಹ ಈ ಜಿಲ್ಲೆಗಳ ಬ್ಯಾಂಕುಗಳನ್ನು ವಿಲೀನ ಮಾಡುವಾಗ ತುಟಿ ಬಿಚ್ಚದೆ ಸುಮ್ಮನಿದ್ದು ಸಮಾಧಿ ಮಾಡಿದಿರಲ್ಲ ಎಂದು ಡಿ.ಕೆ. ಶಿವಕುಮಾರ್ ವ್ಯಂಗವಾಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
