ಬೆಂಗಳೂರು:ಕಲಬುರ್ಗಿ ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡರಾಗಿದ್ದ ಡಾ. ನಾಗರೆಡ್ಡಿ ಪಾಟೀಲ್‌ (79) ಇಂದು ಬೆಳಗಿನ ಜಾವ 3 ಗಂಟೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಎರಡು ದಶಕಗಳಿಂದ ಕಾಂಗ್ರೆಸ್‌ ಜತೆಗಿದ್ದ ನಾಗರೆಡ್ಡಿ ಅವರ ಸಾವಿನ ಸುದ್ದಿ ರಾಜ್ಯ ರಾಜಕೀಯ ನಾಯಕರಲ್ಲಿ ಅತೀವ ದುಃಖ ತಂದೊಡ್ಡಿದೆ.
ಜಿಲ್ಲೆಯ ಸೇಡಂ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್‌ ಮುಖಂಡ, ಶಿಕ್ಷಣ ಪ್ರೇಮಿ, ಹಿರಿಯ ಮುತ್ಸದ್ದಿ ಎಂದೇ ಹೆಸರುವಾಸಿಯಾಗಿದ್ದ ಡಾ. ನಾಗರೆಡ್ಡಿ ಪಾಟೀಲ್‌ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ನಾಯಕರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಸೇಡಂ ಪಟ್ಟಣದಲ್ಲಿರುವ ಡಾ. ನಾಗರೆಡ್ಡಿ ಅವರ ಜಮೀನಿನಲ್ಲಿ ಇಂದು ಮಧ್ಯಾಹ್ನ 3:30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. 1983-1985ರ ಅವಧಿಯಲ್ಲಿ ನಾಗರೆಡ್ಡಿ ಪಾಟೀಲ್‌ ಅವರು, ಕಾಂಗ್ರೆಸ್​ ಪರ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × three =
Remember me
