ಬಳ್ಳಾರಿ:ಕೇಸ್​ ಹಿಂಪಡೆಯದಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಆರೋಪಿಸಿ ಬಳ್ಳಾರಿ ಕಾಂಗ್ರೆಸ್ ನಾಯಕ ಹಾಗೂ ಅವರ ಮಗನ ವಿರುದ್ದ ಎಫ್ಐಆರ್ ದಾಖಲಾಗಿದೆ. ಬಳ್ಳಾರಿ ಕಾಂಗ್ರೆಸ್ ನಾಯಕ ಸೂರ್ಯ ನಾರಾಯಣ ರೆಡ್ಡಿ ಹಾಗೂ ಭರತ್ ರೆಡ್ಡಿ ವಿರುದ್ದ ಎಫ್ಐಆರ್ ದಾಖಲಾಗಿದೆ.
ಭರತ್ ರೆಡ್ಡಿ ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದಾರೆ. ಸುನಿಲ್ ಸಿ ಎನ್ನುವವರಿಂದ ಸೂರ್ಯನಾರಾಯಣ ರೆಡ್ಡಿ ಹಾಗೂ ಭರತ್ ರೆಡ್ಡಿ ಸೇರಿದಂತೆ 5 ಜನರ ವಿರುದ್ದ ದೂರು ಬಂದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಇದನ್ನೂ ಓದಿ:ಶಾಸಕಿ ವಿರುದ್ಧ ಎಫ್‌ಐಆರ್‌ ದಾಖಲಿಸಲು ಒತ್ತಾಯಿಸಿ ಕಾಂಗ್ರೆಸ್‌ ಪ್ರತಿಭಟನೆ
ಸುನಿಲ್ ಕುಮಾರ್ ಹಾಗು ಅವರ ಸಂಬಂಧಿಗಳಿಂದ ಸೂರ್ಯ ನಾರಾಯಣ ರೆಡ್ಡಿ ವಿರುದ್ಧ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಾಜ್ಯ ನಡೆಯುತ್ತಿದೆ.
ಆದರೆ ಆಸ್ತಿ ವಿಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಸ್ ಹಿಂಪಡೆಯುವಂತೆ ಸೂರ್ಯ ನಾರಾಯಣ ರೆಡ್ಡಿ ಒತ್ತಡ ಹೇರಿದ್ದಾರೆ ಎಂದು ಆರೋಪಿಸಲಾಗಿದೆ. ಕೇಸ್ ಹಿಂಪಡೆಯದಿದ್ದರೆ ಕೊಲೆ ಮಾಡೋದಾಗಿ ಭರತ್ ರೆಡ್ಡಿ ಆಪ್ತ ರತ್ನ ಬಾಬು ಹಾಗೂ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ಬಗ್ಗೆ ಎಫ್​ಐಆರ್​ ದಾಖಲಾಗಿದೆ.


ಇದನ್ನೂ ಓದಿ:ಪ್ರೀತಿಯ ನಾಟಕವಾಡಿ ಕೈಕೊಟ್ಟ ಯುವಕ; ಕಗ್ಗಲಿಪುರ ಗ್ರಾ.ಪಂ ಅಧ್ಯಕ್ಷ, ಪುತ್ರನ ವಿರುದ್ಧ ಎಫ್​ಐಆರ್
ರೆಡ್ಡಿ ಬೆಂಬಲಿಗರು, ಪೂರ್ಣಿಮಾ, ಕವಿತಾ ಸೇರಿದಂತೆ ಸುನಿಲ್ ಕುಮಾರ್ ವಕೀಲರಿಗೂ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಭರತ್ ರೆಡ್ಡಿ ಆಪ್ತರು ಹಾಗೂ ಬೆಂಬಲಿಗರು ಬೆದರಿಕೆ ಹಾಕಿದ್ದಾರೆ ಎಂದು ಸುನೀಲ್ ಕುಮಾರ್ ದೂರು ನೀಡಿದ್ದ ಹಿನ್ನೆಲೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬಳ್ಳಾರಿಯ ಗಾಂಧಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + nineteen =
Remember me
