ಮೈಸೂರು:ಕಾಂಗ್ರೆಸ್​ ಕಟ್ಟಾಳು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್​. ಧ್ರುವನಾರಾಯಣ (61) ಅವರು ತೀವ್ರ ಹೃದಯಾಘಾತದಿಂದ ಮೈಸೂರಿನ ಡಿಆರ್​ಎಂ ಆಸ್ಪತ್ರೆಯಲ್ಲಿಂದು (ಮಾ.11) ವಿಧಿವಶರಾಗಿದ್ದಾರೆ.
ಧ್ರುವನಾರಾಯಣ ಅವರು ಕಾಂಗ್ರೆಸ್​ ಪಕ್ಷದ ನಿಷ್ಠಾವಂತ ನಾಯಕರಾಗಿದ್ದರು. ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 2004ರಲ್ಲಿ ಸಂತೇಮರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕೇವಲ ಒಂದು ಮತದ ಅಂತರದಲ್ಲಿ ಗೆಲುವು ಸಾಧಿಸಿದ್ದರು.
2008ರ ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 2009 ರಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ, ಗೆಲುವು ಸಾಧಿಸಿದ್ದರು. 2014ರಲ್ಲೂ ಕೂಡ ಗೆಲುವು ಪಡೆದಿದ್ದರು. ಆದರೆ, 2018ರಲ್ಲಿ ಶ್ರೀನಿವಾಸ್ ಪ್ರಸಾದ್ ವಿರುದ್ಧ ಸೋಲು ಕಂಡಿದ್ದರು. ಸೋಲಿನ ಬಳಿಕವೂ ತುಂಬಾ ಆ್ಯಕ್ಟೀವ್ ಆಗಿದ್ದ ಧ್ರುವನಾರಾಯಣ್, ವಿಧಾನಸಭಾ ಚುನಾವಣೆಗೆ ನಂಜನಗೂಡು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದರು.
ಸಂಸದರಾಗಿದ್ದ ವೇಳೆ ಅನುದಾನ ಬಳಕೆ ವಿಚಾರದಲ್ಲೂ ಉತ್ತಮ ಹೆಸರು ಪಡೆದಿದ್ದರು. ಅಲ್ಲದೆ, ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿಗಳ ವಿಚಾರದಲ್ಲೂ ಉತ್ತಮ ಹೆಸರು ಪಡೆದಿದ್ದರು.(ದಿಗ್ವಿಜಯ ನ್ಯೂಸ್​)
ಬಿಜೆಪಿಗೆ ಬೆಂಬಲ ಘೋಷಣೆ: ಋಣದ ಲೆಕ್ಕಾಚಾರ ಉಲ್ಟಾ, ಕೊಟ್ಟ ಮಾತು ತಪ್ಪಿದ್ರಾ ಸುಮಕ್ಕ?

ಪ್ರತಿ ಮನೆ ಮಗಳಾಗಲಿ ಒಲಿಂಪಿಕ್ಸ್ ತಾರೆ

ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಮಂಡಳಿ: ಬಡ ರೈತ ಮಹಿಳೆಯರಿಗೆ ಮಾಸಿಕ 1 ಸಾವಿರ ರೂ.: ಸಿಎಂ ಘೋಷಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − two =
Remember me
