ಚಿಕ್ಕಮಗಳೂರು:ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಚಿಕ್ಕಮಗಳೂರು, ತರಿಕೆರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದಾರೆ. ಶೃಂಗೇರಿಯಲ್ಲಿ ಟಿ.ಡಿ.ರಾಜೇಗೌಡ ಅವರು ಎರಡನೇ ಸುತ್ತಿನಲ್ಲಿ ಬಿಜೆಪಿ ಎನ್.ಡಿ.ಜಿವರಾಜ್ ವಿರುದ್ಧ ನಾಲ್ಕು ಸಾವಿರ ಮತಗಳ ಅಂತರದಿಂದ ಮುಂದಿದ್ದಾರೆ. ಚಿಕ್ಕಮಗಳೂರು ಕ್ಷೇತ್ರದಲ್ಲಿ ಎಚ್.ಡಿ.ತಮ್ಮಯ್ಯ ಅವರು ಬಿಜೆಪಿಯ ಸಿ.ಟಿ.ರವಿ ವಿರುದ್ಧ ಮೊದಲ ಸುತ್ತಿನಲ್ಲಿ ೮೬ ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ತರೀಕೆರೆ ಕ್ಷೇತ್ರದಲ್ಲಿ ಅಭ್ಯರ್ಥಿ ಜಿ.ಎಚ್.ಶೀನಿವಾಸ್ ಅವರು ಬಿಜೆಪಿಯ ಸುರೇಶ್ ವಿರುದ್ಧ ಮೊದಲ ಸುತ್ತಿನಲ್ಲಿ 1255 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಇನ್ನು ಕಡೂರು ಕ್ಷೇತ್ರದಲ್ಲಿ ಬಿಜೆಪಿಯ ಬೆಳ್ಳಿ ಪ್ರಕಾಶ್ ೯೫೫ ಮತಗಳಿಂದ ಕಾಂಗ್ರೆಸ್ ನ ಆನಂದ್ ವಿರುದ್ಧ ಮುನ್ನೆಡೆ ಸಾಧಿಸಿದ್ದಾರೆ. ಮುಡಿಗೆರೆಯಲ್ಲಿ ನಯನಾ ಮೋಟಮ್ಮ ಅವರು ಬಿಜೆಪಿಯ ದೀಪಕ್ ದೊಡ್ಡಯ್ಯ ವಿರುದ್ಧ 97 ಮತಗಳ ಅಲ್ಫ ಮುನ್ನಡೆ ಸಾಧಿಸಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ಹಿಂದಿನ ಮೈತ್ರಿ ಸರ್ಕಾರವನ್ನು ಉರುಳಿಸಿ ಬಿಜೆಪಿ ಸೇರಿ ಸರ್ಕಾರ ರಚನೆ ಮಾಡಿದ್ದ ಬಹುತೇಕ ನಾಯಕರು ಹಿನ್ನಡೆ ಅನುಭವಿಸುತ್ತಿದ್ದಾರೆ. ಅವರಲ್ಲಿ ಪ್ರಮುಖರಾದ ಎಸ್​ಟಿ ಸೋಮಶೇಖರ್, ಸುಧಾಕರ್, ರಮೇಶ್ ಜಾರಕಿಹೊಳಿ, ಬಿ.ಸಿ ಪಾಟೀಲ್, ಎಂಟಿಬಿ ನಾಗರಾಜ್ ಮುಂತಾದವರು ಹಿನ್ನಡೆ ಅನುಭವಿಸುತ್ತಿದ್ದಾರೆ.
ಕರ್ನಾಟಕವು ಒಟ್ಟು 224 ವಿಧಾನಸಭಾ ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್‌ ನಡುವೆ ಪೈಪೋಟಿ ನಡೆದಿದೆ. ಯಾವುದೇ ಪಕ್ಷ ರಾಜ್ಯದಲ್ಲಿ ಅಧಿಕಾರ ರಚನೆ ಮಾಡಲು 113 ಸ್ಥಾನಗಳ ಸ್ಪಷ್ಟ ಬಹುಮತವನ್ನು ಪಡೆಯಬೇಕಿದೆ. ಒಂದು ವೇಳೆ ಯಾರಿಗೂ ಬಹುಮತ ಬರದಿದ್ದರೆ ಮತ್ತೆ ಅತಂತ್ರ ಸರ್ಕಾರ ರಚನೆಯಾಗಲಿದೆ.
2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 104 ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತ ದೊರೆಯಲಿಲ್ಲ. ಉಳಿದಂತೆ ಕಾಂಗ್ರೆಸ್ 80 ಮತ್ತು ಜೆಡಿಎಸ್ 31 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿತ್ತು. ಈ ಸರ್ಕಾರ ಕೇವಲ ಒಂದು ವರ್ಷ ಮಾತ್ರ ಪೂರೈಸಿತು. ಬದಲಾದ ರಾಜಕೀಯ ಚಿತ್ರಣದಲ್ಲಿ ಮೈತ್ರಿ ಸರ್ಕಾರದ 11 ಶಾಸಕರು ಬಿಜೆಪಿ ಜತೆ ಕೈಜೋಡಿಸಿದ್ದರಿಂದ ಬಿಜೆಪಿ ಸರ್ಕಾರ ರಚನೆ ಮಾಡಿತ್ತು.
73.19 ದಾಖಲೆ ಮತದಾನ: ಈ ಬಾರಿ ದಾಖಲೆಯ ಶೇ.73.19 ಮತದಾನವಾಗಿರುವುದರಿಂದ ರಾಜಕೀಯ ಪಕ್ಷಗಳಲ್ಲಿ ನಾನಾ ರೀತಿಯ ಲೆಕ್ಕಾಚಾರಕ್ಕೆ ಇಂಬು ಮಾಡಿಕೊಟ್ಟಿದೆ. ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿರುವುದು ನಮಗೆ ಲಾಭ ತಂದುಕೊಡಲಿದೆ ಎಂದು ಬಿಜೆಪಿ ನಾಯಕರ ವಾದ. ಆದರೆ, ಅತಿ ಕಡಿಮೆ ಮತದಾನವಾದಾಗಲೂ ಬಿಜೆಪಿ ಹೆಚ್ಚು ಸ್ಥಾನ ಗೆದ್ದಿರುವ ಉದಾಹರಣೆಗಳಿವೆ. ಅಂತೆಯೇ, ಅತೀ ಹೆಚ್ಚು ಮತದಾನವಾದಾಗಲೂ ಬಿಜೆಪಿಗೆ ಲಾಭವಾಗದಿರುವ ದಾಖಲೆಗಳೂ ನಮ್ಮ ಮುಂದಿವೆ. ಹೀಗಾಗಿ ಈ ಬಾರಿಯ ಫಲಿತಾಂಶ ಊಹೆಗೆ ನಿಲುಕದಂತಾಗಿದೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:twenty + 17 =
Remember me
