ಮೈಸೂರು:ತಮ್ಮದೇ ಪಕ್ಷದ ಶಾಸಕನಿಗೆ ರಕ್ಷಣೆ ನೀಡಲು ವಿಫಲವಾದ ಕಾಂಗ್ರೆಸ್ ಚುನಾವಣೆ ಎದುರಿಸುವ ನೈತಿಕ ಶಕ್ತಿ ಕಳೆದುಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್ ಕಟೀಲ್ ಟೀಕಿಸಿದರು.
ಗುರುವಾರ ನಡೆದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಪಕ್ಷದ ನಾಯಕರು ರಕ್ಷಣೆ ನೀಡಬೇಕಾಗಿತ್ತು. ಆದರೆ, ಅವರೇ ಮನೆಯನ್ನು ಸುಡುವ ಕೆಲಸ ಮಾಡಿದರು. ಗಲಭೆಯಲ್ಲಿ ಭಾಗಿಯಾಗಿರುವವರನ್ನು ಬಂಧಿಸಿ ಎಂದು ಒತ್ತಾಯಿಸುವ ಧೈರ್ಯವನ್ನು ಕಾಂಗ್ರೆಸ್ ತೋರುತ್ತಿಲ್ಲ ಎಂದು ಜರಿದರು.
ಉಪ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಟೀಕೆಗಳನ್ನು ಮಾಡಲು ಬಯಸುವುದಿಲ್ಲ. ನಾವು ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಭಿವೃದ್ಧಿ ವಿಚಾರಗಳನ್ನೇ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ. ಆರ್.ಆರ್. ನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ಬಿಜೆಪಿಯ ಕಡೆಗೆ ಒಲವು ತೋರುತ್ತಿದ್ದು, ಪಕ್ಷ ಗೆಲುವು ಸಾಧಿಸುವುದು ನಿಶ್ಚಿತ ಎಂದು ಭವಿಷ್ಯ ನುಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
