ಬೆಂಗಳೂರು:ವರ್ತೂರು ಸಂತೋಷ್ ಬಂಧನ ಬಳಿಕ ‘ಹುಲಿ ಉಗುರು’ ಪ್ರಕರಣ ರಾಜ್ಯದಲ್ಲಿ ಸುದ್ದಿ ಮಾಡುತ್ತಿದೆ. ಇದೀಗ ಈ ಪ್ರಕರಣದಲ್ಲಿ ಹಲವರಿಗೆ ಸಂಕಷ್ಟ ಎದುರಾಗಿದೆ. ಇದೀಗ ಹುಲಿ ಉಗುರು ಪ್ರಕರಣ ಕಾಂಗ್ರೆಸ್ ಕೊರಳಿಗೆ ಕೈಹಾಕಿದೆ.
ಸ್ವಾಮೀಜಿ, ಸೆಲೆಬ್ರಿಟಿ, ರಾಜಕಾರಣಿಗಳು ಧರಿಸಿರುವ ಬಗ್ಗೆ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಫೋಟೋಗಳು ವೈರಲ್​​​ ಆಗುತ್ತಿದ್ದಂತೆ ಅರಣ್ಯ ಅಧಿಕಾರಿಗಳು ಎಚ್ಚರಿತುಕೊಂಡು ಪ್ರಕರಣದಲ್ಲಿರುವವರ ಮನೆಗ ಭೇಟಿ ಕೊಟ್ಟು ಶೋಧ ಕಾರ್ಯ ನಡೆಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ಹುಬ್ಬಳ್ಳಿ ಕಾಂಗ್ರೆಸ್ ಯುವ ಮುಖಂಡ ರಜತ್ ಉಳ್ಳಾಗಡ್ಡಿ ಕೊರಳಲ್ಲೂ ಹುಲಿ ಉಗುರು ಪೆಂಡೆಂಟ್ ಇರುವ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಂತೋಷ್ ಬಂಧನವಾಯ್ತು, ಇವರ ಬಂಧನ ಯಾವಾಗ? ಕಾನೂನು ಎಲ್ಲರಿಗೂ ಒಂದೇ. ಸೆಲೆಬ್ರೆಟಿಗಳು ಮಾತ್ರ ಯಾಕೆ ನೋಟಿಸ್​ ಕೋಡುತ್ತೀರಾ? ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. ಈ ಪ್ರಕರಣದಿಂದ ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಾಧ್ಯತೆಯಿದೆ.
ಮದುವೆ ಸಮಯದಲ್ಲಿ ಪೋಟೋ ಶೂಟ್​​​ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದ ರಜತ್ ಪೋಟೋ ಈಗ ವೈರಲ್ ಆಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಸಹೋದರಿ ಮಗಳನ್ನು ಮದುವೆಯಾಗಿರುವ ರಜತ್ ಉಳ್ಳಾಗಡ್ಡಿ ಮಠ. ಹುಲಿ ಉಗುರು ಪೆಂಡೆಂಟ್ ಧರಿಸಿರುವ ವಿಚಾರಕ್ಕೆ ಪೇಚಿಗೆ ಸಿಲುಕಿಕೊಂಡಂತಾಗಿದೆ.
ಪೆಂಡೆಂಟ್ ಧರಿಸಿದ ವಿಚಾರಕ್ಕೆ ಜಗ್ಗೇಶ್, ನಟ ದರ್ಶನ ಮನೆಮೇಲೆ ದಾಳಿ ಮಾಡಿರುವ ಅರಣ್ಯ ಇಲಾಖೆ ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿ ಮನೆ ಮೇಲೂ ದಾಳಿ ಮಾಡುತ್ತಾ? ಭಾರೀ ಕುತೂಹಲ ಮೂಡಿಸಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ:ಯಾವುದೇ ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು, ಅಂದರೆ ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹ ತಪ್ಪು. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು. ಅಕ್ರಮ ಎಂದು ಸಾಬೀತಾದರೆ 3 ರಿಂದ 7 ವರ್ಷ ಜೈಲು ಮತ್ತು ಕನಿಷ್ಠ 10000 ರೂ ದಂಡ ವಿಧಿಸುವ ಸಾಧ್ಯತೆ ಇದೆ.
ನವಿಲು ಮಾಂಸ ಭಕ್ಷಣೆಗೆ ಮುಂದಾಗಿದ್ದ ತುಮಕೂರಿನ ಮೂವರು ಅರೆಸ್ಟ್

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 − 5 =
Remember me
