ಬಾಗಲಕೋಟೆ:ಕಾಂಗ್ರೆಸ್​ ಸರ್ಕಾರ ಹೆಚ್ಚಿನ ಅವಧಿ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್​.ಡಿ. ಕುಮಾರಸ್ವಾಮಿ ನೀಡಿದ ಹೇಳಿಕೆಗೆ ಇದೀಗ ಕಾಂಗ್ರೆಸ್​ ಶಾಸಕ ಲಕ್ಷ್ಮಣ ಸವದಿ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ಪಾಲಿಕೆಯಲ್ಲಿ ಹಿರಿಯ ನಾಗರಿಕರಿಗೆ ಹೆಲ್ಪ್ ಡೆಸ್ಕ್- ಮೇಯರ್ ಸುಧೀರ್ ಶೆಟ್ಟಿ ಘೋಷಣೆ
ಬಿಜೆಪಿ-ಜೆಡಿಎಸ್​ ಮೈತ್ರಿ ಬೆನ್ನಲ್ಲೇ ಕುಮಾರಸ್ವಾಮಿ ಮತ್ತು ಈಶ್ಚರಪ್ಪ ಕಾಂಗ್ರೆಸ್​ ಸರ್ಕಾರ ಬಹು ದಿನಗಳ ಕಾಲ ಉಳಿಯುವುದಿಲ್ಲ ಎಂದು ಹೇಳಿದ ವಿಚಾರ ಸದ್ಯ ಕಾಂಗ್ರೆಸ್​ ನಾಯಕರನ್ನು ಕೆರಳಿಸಿದ್ದು, ಶಾಸಕ ಲಕ್ಷ್ಮಣ ಸವದಿ ಕುಮಾರಸ್ವಾಮಿ ವಿರುದ್ಧ ವ್ಯಂಗ್ಯವಾಡಿದ್ದಾರೆ.
ಮಹಾಲಿಂಗಪುರ ಪಟ್ಟಣದಲ್ಲಿ ಮಾತನಾಡಿದ ಶಾಸಕ ಲಕ್ಷ್ಮಣ್ ಸವದಿ, “ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗಿರುವುದರಿಂದ ಏನಾಗಿದೆ? ಅನೇಕ ಕ್ಷೇತ್ರಗಳಲ್ಲಿ ಬಹಳಷ್ಟು ಗೊಂದಲ ಸೃಷ್ಟಿಯಾಗಿದೆ. ಈಗಿರುವ ಶಾಸಕರೇ ಇರಬಹುದು, ಮಾಜಿ ಶಾಸಕರಿರಬಹುದು. ಒಂದೊಂದು ಕ್ಷೇತ್ರದಲ್ಲಿ ಕಮಲ ಹಾಗೂ ಜೆಡಿಎಸ್​ ನೇರ ಪೈಪೋಟಿ ಇರುವ ಕ್ಷೇತ್ರಗಳಲ್ಲಿ ಅವರಿಗೆ ಮುಜಗುರವಾಗುತ್ತಿದೆ” ಎಂದು ಹೇಳಿದರು.
ಇದನ್ನೂ ಓದಿ:ತೆನೆ ಹೊತ್ತ ಕಮಲ; ಹೊಂದಾಣಿಕೆಯಿಂದ ಯಾರ ರಾಜಕೀಯ ಭವಿಷ್ಯವನ್ನೂ ಹೊಸಕಿ ಹಾಕಲ್ಲ: ಎಚ್​ಡಿಕೆ
“ಈ ಹೊಂದಾಣಿಕೆ ಸಹಿಸದೇ ಬಿಜೆಪಿ-ಜೆಡಿಎಸ್ ತೊರೆದು ಕಾಂಗ್ರೆಸ್​ಗೆ ಸೇರಬೇಕೆಂಬ ಚಿಂತನೆ ನಡೆದಾಗ, ಅವರನ್ನೆಲ್ಲಾ ತಡೆಹಿಡಿಯಲು 6 ತಿಂಗಳಲ್ಲಿ ಸರ್ಕಾರ ಬೀಳುತ್ತದೆ. ನಂತರದಲ್ಲಿ ನಮ್ಮದೇ ಸರ್ಕಾರ ಬರುತ್ತೆ ಎಂದು ಹೇಳುವ ಮೂಲಕ ಅವರಿಗೆ (ಅಸಮಾನಿತರಿಗೆ) ಲಾಲಿಪಾಪ್ ಕೊಡುವ ಕೆಲಸ ಕುಮಾರಸ್ವಾಮಿ ಮಾಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.
ಮಾಟ-ಮಂತ್ರದ ಬೆದರಿಕೆ; ನಾನು ಶಿವನ ಭಕ್ತ, ಈ ತಂತ್ರಗಳಿಗೆ ಹೆದರಲ್ಲ ಎಂದ ಬಿಜೆಪಿ ಶಾಸಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − four =
Remember me
