
ಬೆಂಗಳೂರು:ಕಾಂಗ್ರೆಸ್ ಪಕ್ಷವು ತನ್ನ ಶಾಸಕರನ್ನು ಹಿಡಿದಿಟ್ಟುಕೊಳ್ಳಲಾಗದ ದುಸ್ಥಿತಿಗೆ ತಲುಪಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ಮಹೇಶ್ ಟೆಂಗಿನಕಾಯಿ ಟೀಕಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ಸಿನೊಳಗೆ ತಳಮಳದ ಘಟನೆಗಳು ನಡೆಯುತ್ತಿದ್ದು, ಇದರಲ್ಲಿ ಬಿಜೆಪಿ ಪಾತ್ರವೇನೂ ಇಲ್ಲ ಎಂದು ಸ್ಪಷ್ಟಪಡಿಸಿದರು.ಐಟಿ ದಾಳಿಯಲ್ಲಿ ಲಭಿಸಿದ ಕೋಟ್ಯಂತರ ರೂಪಾಯಿ ಹಣದ ವಿಚಾರದಲ್ಲಿ ಕಾಂಗ್ರೆಸ್ ಪಾತ್ರ ಇದೆ ಎಂಬುದು ಗೊತ್ತಾಗಿದೆ. ಆದರೂ ಬಿಜೆಪಿ ವಿರುದ್ಧ ಆರೋಪ ಮಾಡುವ ಡಿ.ಕೆ.ಶಿವಕುಮಾರ್ ಅವರಿಂದ ದಾರಿ ತಪ್ಪಿಸುವ ಕೆಲಸ ಆಗುತ್ತಿದೆ ಎಂದರು.ಡಿಸಿಎಂ ಡಿ.ಕೆ.ಶಿವಕುಮಾರ್ ಬೆಳಗಾವಿಗೆ ಹೋದಾಗ ಅವರನ್ನು ಸ್ವಾಗತಿಸಲು ಕಾಂಗ್ರೆಸ್ ಶಾಸಕರಲ್ಲಿ ಯಾರೊಬ್ಬರೂ ಬಂದಿರಲಿಲ್ಲ ಎಂದು ವ್ಯಂಗ್ಯವಾಡಿದ ಅವರು, ಎಟಿಎಂ ಸರಕಾರಕ್ಕೆ ಇನ್ನೊಂದಷ್ಟು ಏನಾದರೂ ಬಲಿಷ್ಠ ಮಾಡಲು ಅವರು ಬೆಳಗಾವಿಗೆ ತೆರಳಿರಬಹುದೇ ಎಂಬ ಅನುಮಾನಿಸಿದರು.ಕಾಂಗ್ರೆಸ್ ಪಕ್ಷದ ವಿರುದ್ಧ ಬಂದ ಭ್ರಷ್ಟಾಚಾರದ ಆರೋಪಗಳನ್ನು ಮರೆಮಾಚಲು ಡಿಕೆಶಿ, ವಿಭಿನ್ನ ಹೇಳಿಕೆ ಕೊಡುತ್ತಿದ್ದಾರೆ ಎಂದರು.ಡಿಕೆಶಿ ಬಳಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಹಣ ಲಭಿಸಿದ ಕುರಿತಂತೆ ಶೀಘ್ರವಾಗಿ ತನಿಖೆ ನಡೆಸಲು ಹೈಕೋರ್ಟ್ ಒಪ್ಪಿದೆ. ಅವರ ಹಣದ ಕುರಿತು ತೀವ್ರಗತಿಯಲ್ಲಿ ಸಿಬಿಐ ತನಿಖೆ ಮಾಡಿ ಅದಕ್ಕೆ ಒಂದು ತಾರ್ಕಿಕ ಅಂತ್ಯ ಕಾಣಿಸಬೇಕು ಎಂದು ಒತ್ತಾಯಿಸಿದರು.ವಿಧಾನಸೌಧದಲ್ಲಿ ಅರಸಿನ, ಕುಂಕುಮ ಬಳಕೆ ಬೇಡ ಎಂಬ ಆದೇಶ ಹೊರಡಿಸಿದ್ದಾರೆಂದರೆ, ಸಿಎಂ, ಅಲ್ಪಸಂಖ್ಯಾತರ ತುಷ್ಟೀಕರಣದ ಪರಮೋಚ್ಚ ಸ್ಥಿತಿಗೆ ತಲುಪಿದ ಉದಾಹರಣೆ ಇದು. ವಿಧಾನಸೌಧದಲ್ಲಿ ಕುಂಬಳಕಾಯಿ ಒಡೆದರೆ, ಅರಸಿನ, ಕುಂಕುಮ ಹಾಕಿದರೆ ಸಿಎಂಗೆ ಏನು ಸಮಸ್ಯೆ? ಎಂದ ಅವರು, ಭ್ರಷ್ಟಾಚಾರದ ಆರೋಪದ ಕುರಿತು ಜನರ ಗಮನವನ್ನು ಬೇರೆಡೆ ಸೆಳೆಯಲು ಸಿಎಂ, ಡಿಸಿಎಂ ಹೀಗೆಲ್ಲ ಮಾಡುತ್ತಿದ್ದಾರೆ ಎಂದು ದೂರಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × two =
Remember me
