ಮಂಡ್ಯ:ಚುನಾವಣೆ ಬಂದರೆ ಸಾಕು ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಹೃದಯ ಸಂಬಂಧಿ ಖಾಯಿಲೆ ಇದೆ ಅಂತ ಆಸ್ಪತ್ರೆಗೆ ದಾಖಲಾಗುತ್ತಾರೆ ಎಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ರಮೇಶ್​ ಬಂಡಿಸಿದ್ದೇಗೌಡ ವ್ಯಂಗ್ಯವಾಡಿದ್ದಾರೆ.
ಲೋಕಸಭೆ ಚುನಾವಣೆ ನಿಮಿತ್ತ ಮಂಡ್ಯ ಜಿಲ್ಲೆಯ ಮಳ್ಳವಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಕಾಂಗ್ರೆಸ್​ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ರಮೇಶ್​, ಮೂರೇ ದಿನದಲ್ಲಿ ಹೃದಯ ಶಸ್ತ್ರಚಿಕಿತ್ಸೆ ಆಗುತ್ತದೆ. ನಾಲ್ಕನೇ ದಿನಕ್ಕೆ ರಾಜ್ಯ ಸುತ್ತುತ್ತಾರೆ, ಅದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಸಚಿವ ಚಲುವರಾಯಸ್ವಾಮಿ ಅವರಿಗೆ ಇರುವ ಕಾಯಿಲೆ ಹೆಚ್​ಡಿ ಕುಮಾರಸ್ವಾಮಿಯವರಿಗೂ ಇದೆ.  ಚಲುವರಾಯಸ್ವಾಮಿ ಆಸ್ಪತ್ರೆಗೆ ದಾಖಲಾದರೆ ಒಂದು ತಿಂಗಳು ಆಚೆ ಬರಲ್ಲ. ಆದರೆ, ಹೆಚ್​ಡಿ ಕುಮಾರಸ್ವಾಮಿ ಹೇಗೆ ಶಸ್ತ್ರಚಿಕಿತ್ಸೆಯಾದ ಎರಡೇ ದಿನಕ್ಕೆ ರಾಜ್ಯ ಸುತ್ತುತ್ತಾರೆ. ಈ ಹೊಸ ಟೆಕ್ನಿಕ್​ ಹೇಗೆ ಎಂದು ನನಗೆ ತಿಳಿಯುತ್ತಿಲ್ಲ ಎಂದು ಟೀಕಿಸಿದ್ದಾರೆ.
ಇದು ಅಭಿವೃದ್ಧಿ ವರ್ಸಸ್ ಕಣ್ಣೀರಿಡುವ ಜನರ ಚುನಾವಣೆ. ನನಗೆ ಆ ತೊಂದರೆ ಇದೆ, ಈ ತೊಂದರೆ ಇದೆ ಎಂದರೇ ಕೇಳಬೇಡಿ. ಅಧಿಕಾರದಲ್ಲಿ ಇದ್ದಾಗ ಏನ್ ಮಾಡಿದ್ದೀರಿ ಎಂದು ಪ್ರಶ್ನೆ ಮಾಡಿ. ಕಾಂಗ್ರೆಸ್ ಅಭ್ಯರ್ಥಿಗೆ ಅತಿಹೆಚ್ಚು ಮತ ನೀಡಿ ಗೆಲ್ಲಿಸಿ ಎಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ರಮೇಶ್​ ಬಂಡಿಸಿದ್ದೇಗೌಡ ಮನವಿ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 12 =
Remember me
