ಬೆಂಗಳೂರು:ಕಾಂಗ್ರೆಸ್‌ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಸಹೋದರಿ ಹಾಗೂ ಕೋಲಾರ ಜಿಲ್ಲಾ ಪಂಚಾಯತ್‌ನ ಕೆಡಿಪಿ ಸದಸ್ಯೆ ಗಗನ ಸುಕನ್ಯಾರವರು ಆಮ್‌ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿಯವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, ‘ಕೋಲಾರ ಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೂ ಗಗನ ಸುಕನ್ಯಾ ಅವರು ಜನರ ಕಷ್ಟಗಳಿಗೆ ನಿರಂತರವಾಗಿ ನೆರವಾಗುತ್ತ ಬಂದಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ರೇಷನ್‌ ಕಿಟ್‌ ವಿತರಣೆ ನೀಡಿ ಬಡವರಿಗೆ ನೆರವಾಗಿದ್ದಾರೆ. ಕೆಜಿಎಫ್‌ ವಿಧಾನಸಭಾ ಕ್ಷೇತ್ರದ ನೂರಾರು ಶಾಲೆಗಳಿಗೆ ಕ್ರೀಡಾ ಸಾಮಗ್ರಿಗಳು, ಬ್ಯಾಗ್‌ಗಳು, ನೋಟ್‌ ಪುಸ್ತಕಗಳನ್ನು ವಿತರಿಸಿದ್ದಾರೆ. ಆಂಧ್ರಪ್ರದೇಶ ಹಾಗೂ ತಮಿಳುನಾಡು ಗಡಿಭಾಗದ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ’ ಎಂದು ಪರಿಚಯಿಸಿದರು.
ಗಗನ ಸುಕನ್ಯಾ ಕೋಲಾರ ಜಿಲ್ಲಾ ಸಹಕಾರಿ ಒಕ್ಕೂಟದ ಚುನಾಯಿತ ನಿರ್ದೇಶಕರಾಗಿ, ಜಿಲ್ಲೆಯ ನೂರಾರು ಮಹಿಳೆಯರನ್ನು ಸಹಕಾರಿ ಕ್ಷೇತ್ರಕ್ಕೆ ಕರೆತಂದಿದ್ದಾರೆ. ಬಿಜೆಪಿ ಜೊತೆಗೆ ಗುರುತಿಸಿಕೊಂಡಿದ್ದ ಇವರು ಬಿಜೆಪಿಯ ರಾಜ್ಯ ಪರಿಶಿಷ್ಟ ಜಾತಿ ಘಟಕದ ಕಾರ್ಯದರ್ಶಿಯಾಗಿ ಐದು ವರ್ಷ ಸೇವೆ ಸಲ್ಲಿಸಿದ ಅನುಭವವನ್ನೂ ಹೊಂದಿದ್ದಾರೆ. ಕಳೆದ ಒಂಬತ್ತು ವರ್ಷಗಳಿಂದ ಕೆಇಆರ್‌ಸಿ, ಬೆಸ್ಕಾಂ, ಸಿಜಿಆರ್‌ಎಫ್‌ ಸಂಸ್ಥೆಗಳ ಗ್ರಾಹಕರ ಕುಂದುಕೊರತೆಗಳ ಪರಿಹಾರ ವೇದಿಕೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಂತಹ ಅನುಭವಿ ನಾಯಕರು ಆಮ್‌ ಆದ್ಮಿ ಪಾರ್ಟಿ ಸೇರುತ್ತಿರುವುದು ಸಂತಸ ತಂದಿದೆ” ಎಂದು ಪೃಥ್ವಿ ರೆಡ್ಡಿ ಹೇಳಿದರು.
ಪಕ್ಷ ಸೇರಿ ಮಾತನಾಡಿದ ಗಗನ ಸುಕನ್ಯಾ, ಕೋಲಾರ ಜಿಲ್ಲೆಯಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ರಾಜಕಾರಣಿಗಳು ಗೆಲುವು ಸಾಧಿಸಿ ಅವರು ಮಾತ್ರ ಅಭಿವೃದ್ಧಿಯಾಗಿದ್ದಾರೆಯೇ ವಿನಃ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲಿಲ್ಲ. ಕೋಲಾರ ಜಿಲ್ಲೆಯ ಜನಸಾಮಾನ್ಯರಿಗೆ ಗುಣಮಟ್ಟದ ಮೂಲಸೌಕರ್ಯಗಳು ದೊರೆಯಬೇಕು ಹಾಗೂ ಇಲ್ಲಿನ ಸರ್ಕಾರಿ ಶಾಲೆಗಳು, ಆಸ್ಪತ್ರೆಗಳು ಅಭಿವೃದ್ಧಿಯಾಗಬೇಕು. ಇವೆಲ್ಲ ಸಾಧ್ಯವಾಗಬೇಕೆಂದರೆ ಈ ಭಾಗದಲ್ಲಿ ಆಮ್‌ ಆದ್ಮಿ ಪಾರ್ಟಿ ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆ ಗೆಲುವು ಸಾಧಿಸಿ, ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು. ಈ ಸಂಕಲ್ಪದೊಂದಿಗೆ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇನೆ” ಎಂದು ಹೇಳಿದರು.
ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, ಕೋಲಾರದ ಮಾಜಿ ಸಂಸದ ಹಾಗೂ ಎಎಪಿ ಮುಖಂಡ ಡಾ.ವೆಂಕಟೇಶ್, ಕೋಲಾರದ ಎಎಪಿ ಜಿಲ್ಲಾಧ್ಯಕ್ಷ ಸುರೇಶ್‌ ಹಾಗೂ ಕೋಲಾರ ವಿಧಾನಸಭಾ ಕ್ಷೇತ್ರದ ಎಎಪಿ ಸ್ಪರ್ಧಾಕಾಂಕ್ಷಿ ದಿಲ್‌ ನವಾಜ್‌ ಭಾಗವಹಿಸಿದ್ದರು.
‘ಉತ್ತಮ ವಿಲನ್’​: ತಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ; ಸಾಕುತಂದೆಯ ಕುತ್ತಿಗೆಗೇ ಲಾಂಗ್ ಇಟ್ಟು ಬೆದರಿಸಿದ್ದ!
ವಿವಾಹಿತೆಯನ್ನೇ ಅಪಹರಿಸಿ ಇನ್ನೊಬ್ಬರಿಗೆ ಮಾರಿ ಮದುವೆ ಮಾಡಿಸಿದ ಸೋಷಿಯಲ್ ಮೀಡಿಯಾ ಫ್ರೆಂಡ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + nineteen =
Remember me
