ಮಂಡ್ಯ:ರೇವಣ್ಣರಂತೆ ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು ಕೂಡ ಲೈಂಗಿಕ ದೌರ್ಜನ್ಯ ಎಸಗಿರುವ ಬಗ್ಗೆ ಕೇಳಿದ್ದೇವೆ ಎಂದು ಮದ್ದೂರು ಕ್ಷೇತ್ರದ ಕಾಂಗ್ರೆಸ್​ ಶಾಸಕ ಕದಲೂರು ಉದಯ್​ ಹೊಸ ಬಾಂಬ್​ ಒಂದನ್ನು ಸಿಡಿಸಿದ್ದಾರೆ.
ಮಂಡ್ಯದಲ್ಲಿ ಈ ಕುರಿತು ಮಾತನಾಡಿದ ಉದಯ್​, ಪೆನ್‌ಡ್ರೈವ್ ಪ್ರಕರಣದ ಬಳಿಕ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು ಧೈರ್ಯ ಮಾಡಲಿದ್ದಾರೆ. ಅವರ ಆಪ್ತರೇ ಹಲವಾರು ಬಾರಿ ಹೇಳಿದ್ದಾರೆ ಎಂದು ಹೇಳಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಲೈಂಗಿಕ ದೌರ್ಜನ್ಯ ಮಾಡಿರುವ ಬಗ್ಗೆ ಕೇಳಿದ್ದೇವೆ. ರಾಧಿಕಾ ಅವರನ್ನ ಪತ್ನಿ ರೀತಿ ಕಾಣುತ್ತಿದ್ದಾರಾ. ಈ ರೀತಿ ಬಹಳಷ್ಟು ನಡೆದಿರಬಹುದು. ಅವರ ಆಪ್ತರೆ ಹಲವಾರು ಬಾರಿ ಹೇಳಿದ್ದಾರೆ. ಕುಮಾರಸ್ವಾಮಿ ಏನು ಸಾಚಾ ಅಲ್ಲ. ಪೆನ್‌ಡ್ರೈವ್ ಪ್ರಕರಣ ಬಳಿಕ ಕುಮಾರಸ್ವಾಮಿ ವಿರುದ್ಧವೂ ದೂರು ಕೊಡಲು ಧೈರ್ಯ ಮಾಡಲಿದ್ದಾರೆ. ಯಾರಾದರೂ ದೂರು ಕೊಟ್ಟರೆ ಸರ್ಕಾರ ತನಿಖೆ ಮಾಡಲಿದೆ.
ಇದನ್ನೂ ಓದಿ:ಶಾಸಕರ ಮನೆಗೆ ದಿಢೀರ್​ ಭೇಟಿ ನೀಡಿದ ನಟ ಅಲ್ಲು ಅರ್ಜುನ್; ಪ್ರಕರಣ ದಾಖಲು
ಕುಮಾರಸ್ವಾಮಿ ಏನ್ ಸಾಚಾನ, ಮಗಳ ವಯಸ್ಸಿನವರನ್ನ ಪುಸಲಾಯಿಸಿ ಮಗಳು ಹುಟ್ಟಿಸಿ ರೋಡ್‌ನಲ್ಲಿ ಬಿಟ್ಟಿದ್ದಾರೆ. ಕುಮಾರಸ್ವಾಮಿ ನೀಚ ಕೆಲಸ ಮಾಡಿದ್ದಾರೆ. ಸಿಎಂ ಆಗಿದ್ದವರು ಇಂತಹ ನೀಚ ಕೆಲಸ ಮಾಡುತ್ತಾರ. ಜೀವನದುದ್ದಕ್ಲೂ ಬ್ಲಾಕ್​​ಮೇಲ್, ಅಪಪ್ರಚಾರ ಮಾಡುತ್ತಾ ಬಂದಿದ್ದಾರೆ‌. ಬೇರೆಯವರನ್ನ ಮುಳುಗಿಸಿದ್ದೆ ಕುಮಾರಸ್ವಾಮಿ ಸಾಧನೆ. ಇವರ ಮನೆ ಹೆಣ್ಣು ಮಕ್ಕಳು ಮರ್ಯಾದೆ ರೋಡ್‌ನಲ್ಲಿ ಹರಾಜಾಗಿದ್ದರೆ ಪ್ರತಿಭಟನೆ ಮಾಡ್ತಿದ್ರಾ ಸ್ವಂತಕ್ಕೆ ಬೇಕಾಗಿರೋದನ್ನ ಮಾತ್ರ ಕುಮಾರಸ್ವಾಮಿ ಮಾಡ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.
ಯಾವ ಘನಕಾರ್ಯ ಮಾಡಿದ್ದಾರೆಂದು ಜೆಡಿಎಸ್​ನವರು ಪ್ರತಿಭಟನೆ ಮಾಡುತ್ತಿದ್ದಾರೆ. ಬಹಳಷ್ಟು ಜನ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆ. ಸಂತ್ರಸ್ತೆಯರ ಪರ ಯಾವ ಜೆಡಿಎಸ್‌ ನಾಯಕರು ಧ್ವನಿ ಎತ್ತಿಲ್ಲ. ಅವರಿಗೆ ಧೈರ್ಯ ಹೇಳಿ, ಸಾಂತ್ವನ ಹೇಳುವ ಕೆಲಸ ಮಾಡಲಿಲ್ಲ. ಯಾವ ನೈತಿಕತೆ ಇಟ್ಟುಕೊಂಡು ಜೆಡಿಎಸ್ ಪ್ರತಿಭಟನೆ ಮಾಡುತ್ತಿದೆ . ಕಾಂಗ್ರೆಸ್ ಸರ್ಕಾರ ನೀಚ ಸರ್ಕಾರ ಅಂತಾರೆ. ಬಡವರಿಗೆ ಯೋಜನೆ ಕೊಟ್ಟ ಸರ್ಕಾರ ನೀಚ ಸರ್ಕಾರನಾ. ಗ್ರಾಮ ಪ.ಚಾಯತಿಯಿಂದ ವಿಧಾನಸಭೆವರೆಗೂ ದಬ್ಬಾಳಿಕೆಯ ಮಾಡಿಕೊಂಡೆ ಬಂದಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − two =
Remember me
