ಬೆಂಗಳೂರು:ಕರ್ತವ್ಯ ನಿರತ ಮಹಿಳಾ ಪೊಲೀಸ್​ ಪೇದೆ ಮೇಲೆ ನೂರಾರು ಜನರ ಸಮ್ಮುಖದಲ್ಲೇ ಜಯನಗರ ಶಾಸಕಿ ಸೌಮ್ಯರೆಡ್ಡಿ ದಬ್ಬಾಳಿಕೆ ಮಾಡಿದ್ದು, ಆ ದೃಶ್ಯ ವೈರಲ್​ ಆಗಿದೆ.
ಶಾಸಕಿ ಸೌಮ್ಯರೆಡ್ಡಿಯ ವರ್ತನೆ ವಿರುದ್ಧ ಕಿಡಿಕಾರಿರುವ ಸಚಿವ ಶ್ರೀರಾಮುಲು, ‘ಒಬ್ಬ ಶಾಸಕಿಯಾಗಿ, ಹೆಣ್ಣುಮಗಳಾಗಿ, ಮಹಿಳೆಯರ ಸಬಲೀಕರಣಕ್ಕೆ ನಾಂದಿ ಹಾಡಬೇಕು. ಅದನ್ನು ಬಿಟ್ಟು ಇನ್ನೊಬ್ಬ ಹೆಣ್ಣುಮಗಳ ಮೇಲೆ ಕೈ ಮಾಡುವುದು ಸರಿಯೇ? ದುಡಿದು ಬಾಳುವುದು ಮಹಿಳಾ ಸಬಲೀಕರಣವೋ? ಹೊಡೆದು ಬಾಳುವುದೋ?’ ಎಂದು ಟ್ವೀಟ್​ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.ಇದನ್ನೂ ಓದಿರಿಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!
ಪ್ರತಿಭಟನೆ ಇರುವುದು ಸರ್ಕಾರದ ವಿರುದ್ಧ. ಆದರೆ ಮಹಿಳಾ ಪೇದೆಗಳ ಮೇಲೇಕೆ ದರ್ಪ ತೋರಿಸುತ್ತೀರಿ ಸೌಮ್ಯರೆಡ್ಡಿ ಅವರೇ? ಒಬ್ಬ ಯುವ ನಾಯಕ ಸ್ನೇಹಿತನ ಮೇಲೆ ಹಲ್ಲೆ ಮಾಡಿದರೆ, ಇಲ್ಲೊಬ್ಬ ಯುವ ನಾಯಕಿ ಪೊಲೀಸರ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡುವುದು ಕಾಂಗ್ರೆಸ್ ಸಂಸ್ಕೃತಿಯೇ? ಜನತೆಗೆ ನಿಮ್ಮಂತೆ ಬಾಳುವ ಹಕ್ಕಿಲ್ಲವೇ? ಎಂದು ಕಟುವಾಗಿ ಶ್ರೀರಾಮುಲು ಟೀಕಿಸಿದ್ದಾರೆ.
ಕಾಂಗ್ರೆಸ್​ನಲ್ಲಿ ಪ್ರಜಾಪ್ರಭುತ್ವ, ಜನಪರತೆ ಎಂಬುದು ಬಾಯಿಮಾತಿಗಷ್ಟೇ ಸೀಮಿತವಾಗಿದ್ದು, ಪ್ರತಿಭಟನೆ ಹೆಸರಿನಲ್ಲಿ ಶಾಸಕಿ ಮಹಿಳಾ ಪೇದೆ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಕೂಡಲೇ ಅವರು ಮಹಿಳಾ ಪೊಲೀಸರ ಕ್ಷಮೆಯಾಚಿಸಬೇಕು ಎಂದು ಶ್ರೀರಾಮುಲು ಆಗ್ರಹಿಸಿದ್ದಾರೆ.
ಆಗಿದ್ದೇನು?:ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೆಂಗಳೂರಿನಲ್ಲಿ ನಡೆಯುತ್ತಿರುವ ರೈತರ ಚಳವಳಿಯಲ್ಲಿ ಬುಧವಾರ ಪಾಲ್ಗೊಂಡಿದ್ದ ಕಾಂಗ್ರೆಸ್​, ಫ್ರೀಡಂ ಪಾರ್ಕ್​ನಲ್ಲಿ ಸಮಾವೇಶದ ಬಳಿಕ ರಾಜಭವನ ಚಲೋ ಹೊರಟಿತ್ತು. ಈ ವೇಳೆ ಕಾಂಗ್ರೆಸ್​ ನಾಯಕರನ್ನು ಪೊಲೀಸರು ತಡೆದರು. ತನ್ನನ್ನು ತಡೆದ ಮಹಿಳಾ ಪೇದೆ ಮೇಲೆ ಸಿಟ್ಟಾದ ಸೌಮ್ಯರೆಡ್ಡಿ, ‘ಹೂ ದಿ ಹೆಲ್​’ ಎನ್ನುತ್ತಾ ಪೇದೆ ಮೇಲೆ ಕೈ ಮಾಡಿದರು.
ಬಳಿಕ ಪೊಲೀಸ್​ ಕಮಿಷನರ್ ಕಚೇರಿಗೆ ಆಗಮಿಸಿದ ಶಾಸಕಿ ಸೌಮ್ಯರೆಡ್ಡಿ, ಕಾಂಗ್ರೆಸ್ ಪ್ರತಿಭಟನೆ ವೇಳೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದರು.

ಎಚ್ಚರಿಕೆಗಿಲ್ಲ ಬೆಲೆ: ಸಿದ್ದರಾಮಯ್ಯ, ಶಿವಕುಮಾರ್​, ಪರಮೇಶ್ವರ ಅರೆಸ್ಟ್​!

ಹಿರಿಮಗನನ್ನು ಕೊಲ್ಲಲು ಕಿರಿಮಗನಿಗೆ ಸುಪಾರಿ ಕೊಟ್ಟ ಪಾಪಿ ತಂದೆ!ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
