ಬೀದರ್:ಕೊವಿಡ್​-19ರ ಬಿಕ್ಕಟ್ಟಿನ ನಡುವೆ ರಾಜಕೀಯ ಪಕ್ಷಗಳಲ್ಲೂ ಅಸಮಾಧಾನ, ಭಿನ್ನಮತ ಶುರುವಾಗಿದೆ. ಕಾಂಗ್ರೆಸ್​ನಲ್ಲೂ ಅತೃಪ್ತಿಯ ಹೊಗೆಯಾಡುತ್ತಿದೆ ಎಂಬುದು ಇಂದು ಬೀದರ್​​ನಲ್ಲಿ ಬಹಿರಂಗವಾಗಿದೆ.
ಕೆಪಿಸಿಸಿ ಅಧ್ಯಕ್ಷರ ಪದಗ್ರಹಣಕ್ಕೂ ಮೊದಲೇ ಅವರ ಬಗ್ಗೆ ಶಾಸಕ ಬಿ.ನಾರಾಯಣ್​ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಡಿ.ಕೆ.ಶಿವಕುಮಾರ್​ ಕೈಯಿಗೆ ಸಿಗೋದೇ ಇಲ್ಲ ಎಂದು ಅವರು ದೂರಿದ್ದಾರೆ.ಡಿ.ಕೆ.ಶಿವಕುಮಾರ್​ ಅವರ ಎದುರು ನಾವು ನಿಂತರೂ ಅವರು ನಮ್ಮನ್ನು ನೋಡುವುದಿಲ್ಲ. ನಮಸ್ಕಾರ ಮಾಡಿದರೂ ಮಾಡುವುದಿಲ್ಲ ಎಂದು ಬಸವಕಲ್ಯಾಣ ಶಾಸಕ ಬಿ.ನಾರಾಯಣ್​ ಅವರು ಕಾಂಗ್ರೆಸ್​ ಕಾರ್ಯಕರ್ತರ ಸಭೆಯಲ್ಲಿ ತಮ್ಮ ಬೇಸರ ಹೊರಹಾಕಿದ್ದಾರೆ.
ಇದನ್ನೂ ಓದಿ:PHOTOS: ಪ್ರಿಯಕರನ ಮೋಸಕ್ಕೆ ಬಲಿಯಾದ ನಟಿ ಚಂದನಾರ ಸಂತೋಷದ ಕ್ಷಣಗಳು…
ಈ ಸಭೆಯಲ್ಲಿ ಮಾಜಿ ಸಚಿವರಾದ ರಾಜಶೇಖರ್​ ಪಾಟೀಲ್​, ರಹೀಂ ಖಾನ್​, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ ಎದುರಲ್ಲೇ ಶಾಸಕ ಬಿ.ನಾರಾಯಣ್​ ಹೀಗೆ ಹೇಳಿದ್ದಾರೆ. ಬಿ.ನಾರಾಯಣ್​ ಅವರು ಮಾಜಿ ಸಿಎಂ ಸಿದ್ದರಾಮಯ್ಯನವರ ಆಪ್ತವಲಯದಲ್ಲಿ ಗುರುತಿಸಿಕೊಂಡವರು. (ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಕರೊನಾ ಸೋಂಕಿನ ಭೀತಿ: ಮುಖ್ಯಮಂತ್ರಿ ಹಾಗೂ ಸಚಿವರು ಕ್ವಾರಂಟೈನ್​ಗೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 20 =
Remember me
