ಬೆಂಗಳೂರು:ಕರ್ತವ್ಯ ನಿರತರಾಗಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಕಾಂಗ್ರೆಸ್ ಎಂಎಲ್​ಸಿ ನಾಸಿರ್ ಅಹ್ಮದ್ ಪುತ್ರ ಫಯಾಜ್ ಅಹ್ಮದ್ ಮತ್ತು ಆತನ ಗೆಳೆಯರನ್ನು ಪೊಲೀಸರು ನಿನ್ನೆ ತಡರಾತ್ರಿ ಬಂಧಿಸಿದ್ದಾರೆ.
ಹೆಬ್ಬಾಳ ಸಮೀಪದ ಬಿಎಂಟಿಸಿ ಬಸ್​ ಡಿಪೋ ಬಳಿ ಡ್ರಿಂಕ್ ಆ್ಯಂಡ್ ಡ್ರೈವ್ ಕೇಸ್​ನಲ್ಲಿ ಪೊಲೀಸರ ಬಲೆಗೆ ಬಿದ್ದ ಫಯಾಜ್ ಮತ್ತು ಅವರ ಇಬ್ಬರು ಸ್ನೇಹಿತರು ಇಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಭಾನುವಾರ ಮಧ್ಯರಾತ್ರಿ 12.30ರ ಸುಮಾರಿಗೆ ಈ ಪ್ರಕರಣ ನಡೆದಿದ್ದು, ಪೊಲೀಸರು ಫಯಾಜ್​ ಸೇರಿ ಮೂವರ ವಿರುದ್ಧ ಎಫ್​ಐಆರ್ ದಾಖಲಿಸಿದ್ದಾರೆ.
ಇದನ್ನೂ ಓದಿ:VIDEO: ರೇಷ್ಮೆ ಸೀರೆ ಬದಲು ಪಿಪಿಇ ಕಿಟ್​: ಕರೊನಾಕ್ಕೆ ಸೆಡ್ಡು ಹೊಡೆದು ಮದುವೆಯಾದ ಸೋಂಕಿತೆ
ಕಾರನ್ನು ತಡೆದು ವಿಚಾರಣೆ ನಡೆಸಲು ಮುಂದಾದಾಗ, ಮದ್ಯದ ನಶೆಯಲ್ಲಿದ್ದ ಫಯಾಜ್​ ಹೆಡ್​ಕಾನ್​ಸ್ಟೆಬಲ್ ಮತ್ತು ಜತೆಗಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಆತನ ಜತೆಗಿದ್ದ ಸ್ನೇಹಿತರೂ ಹಲ್ಲೆ ನಡೆಸುವಲ್ಲು ಭಾಗಿಯಾಗಿದ್ದು, ಅವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಅಮೃತಹಳ್ಳಿ ಪೊಲೀಸರು ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್)
ಸಾರ್ವಕಾಲಿಕ ಎತ್ತರಕ್ಕೇರಿದ ಸೆನ್ಸೆಕ್ಸ್, ನಿಫ್ಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + eighteen =
Remember me
